‘ಕಾರ್ಮಿಕ ಸಮ್ಮಾನ್‌’ ಪ್ರಶಸ್ತಿ ನೀಡಲು ಸರ್ಕಾರ ನಿರ್ಧಾರ


Team Udayavani, Feb 12, 2019, 9:51 AM IST

cta-3.jpg

ಚಿತ್ರದುರ್ಗ: ಇದೇ ಮೊದಲ ಬಾರಿಗೆ ಅಸಂಘಟಿತ ವಲಯದ ವಿವಿಧ ವೃತ್ತಿ ಆಧಾರಿತ ಕಾರ್ಮಿಕರಿಗೆ ಕಾರ್ಮಿಕ ಸಮ್ಮಾನ್‌ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಪ್ರಶಸ್ತಿಗಾಗಿ ಅರ್ಜಿ ಸ್ವೀಕರಿಸಿ ಪರಿಶೀಲಿಸಿ ಆಯ್ಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಹೇಳಿದರು.

ಕಾರ್ಮಿಕ ಸಮ್ಮಾನ್‌ ಪ್ರಶಸ್ತಿಗಾಗಿ ಆಯ್ಕೆ ಮಾಡುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ತ್ರಿಪಕ್ಷೀಯ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕರನ್ನು ಕೇಂದ್ರೀಕರಿಸಿ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಅಸಂಘಟಿತ ಕಾರ್ಮಿಕರ ದಿನ ಆಚರಣೆ ಮಾಡಲು ಹಾಗೂ ಅಸಂಘಟಿತ ವಲಯದಲ್ಲಿ ವಿಶೇಷ ಸಾಧನೆ ಮಾಡಿದ ಕಾರ್ಮಿಕರಿಗೆ ಕಾರ್ಮಿಕ ಸಮ್ಮಾನ್‌ ಪ್ರಶಸ್ತಿ ನೀಡಲು ಉದ್ದೇಶಿಸಿದೆ. ಪ್ರತಿ ವರ್ಷ ಮಾರ್ಚ್‌ 1 ರಂದು ಅಸಂಘಟಿತ ಕಾರ್ಮಿಕ ದಿನ ಎಂದು ಆಚರಣೆ ಮಾಡಲು ತೀರ್ಮಾನಿಸಿದೆ. ಇದೇ ದಿನದಂದು ಘೋಷಿತ ಅಸಂಘಟಿತ ವಲಯದ ಕಾರ್ಮಿಕರಿಗೆ ಸನ್ಮಾನ ಮಾಡಲಾಗುವುದು. ಅಸಂಘಟಿತ ಕಾರ್ಮಿಕ ವಲಯದ ಪೈಕಿ 13 ವಲಯಗಳಿಗೆ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು ಎಂದರು.

ಸಾರಿಗೆ ಕಾರ್ಮಿಕರು, ಹಮಾಲರು, ಟೆ„ಲರ್‌ಗಳು, ಚಿಂದಿ ಆಯುವವರು, ಕಟ್ಟಡ ಕಾರ್ಮಿಕರು, ಅಗಸರು, ಕ್ಷೌರಿಕರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಭಟ್ಟಿ ಕಾರ್ಮಿಕರು, ಮೆಕ್ಯಾನಿಕ್‌ಗಳು, ಮನೆ ಕೆಲಸದವರು ಈ ವೃತ್ತಿ ವಲಯದ ಕಾರ್ಮಿಕರಿಗೆ ಕಾರ್ಮಿಕ ಸಮ್ಮಾನ್‌ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿಯಲ್ಲಿ ಎರಡು ವಿಭಾಗಗಳಿದ್ದು, ಶ್ರಮ ಸನ್ಮಾನ ಪ್ರಶಸ್ತಿ ಹಾಗೂ ವಿಶೇಷ ಪುರಸ್ಕಾರ ಪ್ರಶಸ್ತಿಗೆ ಕಾರ್ಮಿಕರನ್ನು ಆಯ್ಕೆ ಮಾಡಲಾಗುವುದು. ಶ್ರಮ ಸನ್ಮಾನ ಪ್ರಶಸ್ತಿಯನ್ನು ಜಿಲ್ಲೆಯ ಒಬ್ಬರು ಕಾರ್ಮಿಕರಿಗೆ ಒಂದು ಪ್ರಶಸ್ತಿ ನೀಡಲಾಗುತ್ತಿದ್ದು, ಪ್ರಶಸ್ತಿಯು 10 ಸಾವಿರ ರೂ. ನಗದು ಹಾಗೂ ಪ್ರಶಂಸಾ ಪತ್ರವನ್ನು ಒಳಗೊಂಡಿದೆ. ವಿಶೇಷ ಪುರಸ್ಕಾರ ಪ್ರಶಸ್ತಿಯನ್ನು ಪ್ರತಿ ವಲಯದ 10 ಕಾರ್ಮಿಕರಿಗೆ ನೀಡಲಾಗುತ್ತಿದ್ದು, ಪ್ರಶಸ್ತಿ 1 ಸಾವಿರ ರೂ. ನಗದು ಹಾಗೂ ಪ್ರಶಂಸಾ ಪತ್ರ ಒಳಗೊಂಡಿದೆ ಎಂದು ವಿವರಿಸಿದರು.

ಪ್ರಶಸ್ತಿಗಾಗಿ ಕಾರ್ಮಿಕರನ್ನು ಆಯ್ಕೆ ಮಾಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ನಮೂನೆಯನ್ನು ಆಯಾ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಯಿಂದ ಉಚಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅದೇ ಕಚೇರಿಗೆ ಫೆ. 20 ರೊಳಗಾಗಿ ಸಲ್ಲಿಸಬೇಕು. ಕಾರ್ಮಿಕ ಇಲಾಖೆಯಿಂದ ಪೂರೈಸಿದ ಕ್ರಮ ಸಂಖ್ಯೆ ಹೊಂದಿರುವ ಅರ್ಜಿ ನಮೂನೆಯಲ್ಲಿ ಮಾತ್ರವೇ ಸಲ್ಲಿಸಬೇಕು. ಜೆರಾಕ್ಸ್‌ ಮಾಡಿದ ಅಥವಾ ಅರ್ಜಿ ನಮೂನೆಯ ಪ್ರತಿಯಲ್ಲಿ ಸಲ್ಲಿಸುವ ಅರ್ಜಿಯನ್ನು ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಜಿಪಂ ಸಿಇಒ ಪಿ.ಎನ್‌. ರವೀಂದ್ರ, ಎಸ್ಪಿ ಡಾ| ಅರುಣ್‌, ನಗರಸಭೆ ಪೌರಾಯುಕ್ತ ಚಂದ್ರಪ್ಪ, ಜಿಲ್ಲಾ ಪ್ರಭಾರಿ ಕಾರ್ಮಿಕ ಅಧಿಕಾರಿ ಎನ್‌.ಎಚ್. ರಮೇಶ್‌, ಕಾರ್ಮಿಕ ನಿರೀಕ್ಷಕ ಡಿ. ರಾಜಣ್ಣ ಇದ್ದರು.

ಅರ್ಜಿ ಸಲ್ಲಿಕೆಗೆ ಅರ್ಹತೆಗಳೇನು?
ಅರ್ಜಿ ಸಲ್ಲಿಸಲು ಮೇಲೆ ತಿಳಿಸಿದ 13 ವೃತ್ತಿಗಳಲ್ಲಿ ಯಾವುದೇ ವೃತ್ತಿಯ ಕಾರ್ಮಿಕರು ಅರ್ಜಿ ಸಲ್ಲಿಸಬಹುದು. ವಯಸ್ಸು ಕನಿಷ್ಠ 40 ವರ್ಷ ಆಗಿರಬೇಕು. ಆಯಾ ವೃತ್ತಿಯಲ್ಲಿ ಶ್ರಮ ಸನ್ಮಾನ್‌ ಪ್ರಶಸ್ತಿಗೆ ಕನಿಷ್ಠ 20 ವರ್ಷಗಳ ಸೇವೆ ಹಾಗೂ ವಿಶೇಷ ಪುರಸ್ಕಾರಕ್ಕೆ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿರಬೇಕು. ಜಿಲ್ಲೆಯವರಾಗಿರಬೇಕು. ವಾಹನ ಚಾಲಕ ವೃತ್ತಿ ಕಾರ್ಮಿಕರು ಯಾವುದೇ ಅಪಘಾತ ಎಸಗಿರಬಾರದು. ಯಾವುದೇ ಕ್ರಿಮಿನಲ್‌ ಮೊಕದ್ದಮೆ ಇರಬಾರದು. ಇಎಸ್‌ಐ ಮತ್ತು ಪಿಎಫ್‌ ವ್ಯಾಪ್ತಿಗೆ ಒಳಪಟ್ಟಿರಬಾರದು. ಅರ್ಜಿ ಸಲ್ಲಿಸುವ ಲಕೋಟೆ ಮೇಲೆ ಯಾವ ವಲಯದ, ವೃತ್ತಿಯ ಕಾರ್ಮಿಕ ಪ್ರಶಸ್ತಿಗೆ ಅರ್ಜಿ ಎಂಬುದನ್ನು ಸ್ಪಷ್ಟವಾಗಿ ನಮೂದಿಸಬೇಕು. ಅರ್ಜಿಯನ್ನು ಫೆ. 20 ರ ಒಳಗಾಗಿ ಆಯಾ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಕಾರ್ಮಿಕ ಆಯ್ಕೆ ಸಮಿತಿ ರಚನೆ: ಕಾರ್ಮಿಕ ಸಮ್ಮಾನ್‌ ಪ್ರಶಸ್ತಿ ಆಯ್ಕೆ ಮಾಡಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತ್ರಿಪಕ್ಷೀಯ ನಿರ್ವಹಣ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಜಿಪಂ ಸಿಇಒ ಉಪಾಧ್ಯಕ್ಷರಾಗಿದ್ದು, ಜಿಲ್ಲಾ ರಕ್ಷಣಾಧಿಕಾರಿಗಳು, ಲೋಕೋಪಯೋಗಿ, ಕೆಆರ್‌ಐಡಿಎಲ್‌, ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಇಲಾಖೆ, ನಿರ್ಮಿತಿ ಕೇಂದ್ರ, ಸಣ್ಣ ನೀರಾವರಿ ಇಲಾಖೆಗಳ ಅಕಾರಿಗಳು, ಜಿಲ್ಲಾ ಕೌಶಲ್ಯ ಅಕಾರಿಗಳು, ಅಸಂಘಟಿತ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು, ಮಾಲೀಕ ಸಂಘಟನೆಗಳ ಪ್ರತಿನಿಧಿಗಳು ಸಮಿತಿಯ ಸದಸ್ಯರಾಗಿರುತ್ತಾರೆ. ಜಿಲ್ಲಾ ಕಾರ್ಮಿಕ ಅಧಿಕಾರಿ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ ಎಂದರು.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.