ನಿಷ್ಪಕ್ಷಪಾತ ಚುನಾವಣೆಗೆ ಸಹಕರಿಸಿ


Team Udayavani, Mar 15, 2019, 11:42 AM IST

cta-1.jpg

ಚಳ್ಳಕೆರೆ: ನಿಷ್ಪಕ್ಷಪಾತ ಮತ್ತು ಪಾರದರ್ಶಕ ಚುನಾವಣೆ ನಡೆಯಬೇಕಾದರೆ ಅದಕ್ಕೆ ಕಂದಾಯಾಧಿಕಾರಿಗಳು, ಗ್ರಾಮಲೆಕ್ಕಿಗರು, ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಕಾರಿಗಳು ಹಾಗೂ ಮತಗಟ್ಟೆ ಅಧಿಕಾರಿಗಳ ಸಹಕಾರ ಪ್ರಮುಖವಾದುದು ಎಂದು ಸಹಾಯಕ ಚುನಾವಣಾಧಿಕಾರಿ ಎಸ್‌. ರಾಜಶೇಖರ್‌ ಹೇಳಿದರು.

ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಚುನಾವಣಾ ಕಾರ್ಯ ನಿರ್ವಹಿಸುವ ಕುರಿತು ಕಂದಾಯಾಧಿಕಾರಿಗಳು, ಗ್ರಾಮಲೆಕ್ಕಿಗರು ಮತ್ತು ಪಿಡಿಒಗಳ ಸಭೆಯಲ್ಲಿ ಅವರು ಮಾತನಾಡಿದರು. ಯಾವುದೇ ಚುನಾವಣೆಗಳು ನಡೆದರೂ ಅದಕ್ಕೆ ಸಿಬ್ಬಂದಿಯ ಸ್ಪಂದನೆ ಮುಖ್ಯ. ಚಳ್ಳಕೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ಸಿಬ್ಬಂದಿ ವರ್ಗ ಹೆಚ್ಚು ಕ್ರಿಯಾಶೀಲವಾಗಿ ಸ್ಪಂದಿಸುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಏಪ್ರಿಲ್‌ 18ರಂದು ಮೊದಲ ಹಂತದಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೂ ಚುನಾವಣೆ ನಡೆಯಲಿದೆ. ಜಿಲ್ಲಾಧಿಕಾರಿಗಳ ಆದೇಶದಂತೆ ಮತದಾನ ಜಾಗೃತಿಗೆ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ಏಳು ಕಡೆ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಎಲ್ಲಾ ಸೆಕ್ಟರ್‌ ಅಧಿಕಾರಿಗಳು ತಮ್ಮ ಕಾರ್ಯ ನಿರ್ವಹಿಸುತ್ತಿದ್ದಾರೆ. ಯಾವುದೇ ಚುನಾವಣಾ ಅಕ್ರಮಗಳು ಕಂಡು ಬಂದಲ್ಲಿ ಕೂಡಲೇ ನನಗಾಗಲೀ, ತಹಶೀಲ್ದಾರ್‌ಗಾಗಲೀ ಮಾಹಿತಿ ನೀಡುವಂತೆ ಸೂಚನೆ ನೀಡಿದರು. 

ಎಲ್ಲರೂ ಸೇರಿ ಸಹಕಾರದಿಂದ ಯಾವುದೇ ಲೋಪವಾಗದಂತೆ ಚುನಾವಣಾ ಕಾರ್ಯವನ್ನು ಯಶಸ್ವಿಯಾಗಿ ನಡೆಸೋಣ ಎಂದು ತಿಳಿಸಿದರು. ತಹಶೀಲ್ದಾರ್‌ ತುಷಾರ್‌ ಬಿ. ಹೊಸೂರ್‌ ಮಾತನಾಡಿ, ಈಗಾಗಲೇ ಸ್ವೀಪ್‌ ಸಮಿತಿ ಮೂಲಕ ಮತದಾನ ಜಾಗೃತಿ ಅಭಿಯಾನವನ್ನು ಕೈಗೊಳ್ಳಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಸಂಬಂಧ ಪಟ್ಟ ಮತಗಟ್ಟೆ ಅಧಿಕಾರಿಗಳಿಂದ ಪರಿಶೀಲನೆಯನ್ನೂ ನಡೆಸಲಾಗಿದೆ. ಯಾವುದೇ ರೀತಿಯ ಸಮಸ್ಯೆ ಉಂಟಾದಲ್ಲಿ ಕೂಡಲೇ ಗಮನಕ್ಕೆ ತರಬೇಕೆಂದರು.

ಸಭೆಯಲ್ಲಿ ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು, ತೋಟಗಾರಿಕೆ ಇಲಾಖೆ ಅಧಿಕಾರಿ ವಿರೂಪಾಕ್ಷಪ್ಪ, ಸಹಾಯಕ
ಕೃಷಿ ನಿರ್ದೇಶಕ ಎನ್‌. ಮಾರುತಿ, ಕಂದಾಯಾಧಿಕಾರಿಗಲಾದ ಶರಣಬಸಪ್ಪ, ಶಾಂತಪ್ಪ, ಗ್ರಾಮಲೆಕ್ಕಾಧಿಕಾರಿಗಳಾದ ಲಿಂಗೇಗೌಡ, ರಾಜೇಶ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.