ವಾಹನ ಹೊಂಡಕ್ಕೆ ಚಾಲಕ ಸಾವು

Team Udayavani, Nov 19, 2017, 11:23 AM IST

1811btlph2A.jpg

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಡಸ್ಟರ್‌ ಕಾರೊಂದು ಪ್ರಪಾತಕ್ಕೆ ಬೀಳುವ ಮೂಲಕ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನ. 18ರಂದು ಅಪರಾಹ್ನ ಬಿ.ಸಿ.ರೋಡಿನಲ್ಲಿ ನಡೆದಿದೆ.

ಮೃತರನ್ನು ಅನಂತಾಡಿ ಗ್ರಾಮ ಬಾಬನಕಟ್ಟೆ ನಿವಾಸಿ, ದಿ|  ಮಾದವ ನಾಯ್ಕರ ಪುತ್ರ, ನೇರಳಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ಉದ್ಯೋಗಿ  ರಾಕೇಶ್‌ ನಾಯ್ಕ  (28) ಎಂದು ಗುರುತಿಸಲಾಗಿದೆ.

ಕಳೆದ ನಾಲ್ಕು ವರ್ಷಗಳಿಂದ ಅವರು ಸಹಕಾರಿ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬೆಳಗ್ಗೆ ಸಂಘಕ್ಕೆ ಬಂದಿದ್ದ ಅವರು ರಜೆ ಮಾಡುವುದಾಗಿ ತಿಳಿಸಿ ಹೋಗಿದ್ದರು ಎಂದು ಮಾಹಿತಿ ಮೂಲಗಳು ತಿಳಿಸಿದೆ.

ನೇತ್ರಾವತಿ ನದಿ ಕಾಂಕ್ರಿಟ್‌ ಸೇತುವೆಯನ್ನು  ದಾಟಿ ಬಿ.ಸಿ.ರೋಡ್‌ ಕಡೆಗೆ ಬಂದಿದ್ದ ಡಸ್ಟರ್‌ ಕಾರು ಎದುರಿಂದ ಬಂದಿದ್ದ ಕಾರೊಂದಕ್ಕೆ ಢಿಕ್ಕಿಯಾಗಿದೆ. ಅಲ್ಲಿಂದ ಅಟೋರಿಕ್ಷಾಕ್ಕೆ ಹೊಡೆದು ಅನಂತರ ವಿದ್ಯುತ್‌ ಕಂಭಕ್ಕೆ ತಾಗಿದ್ದು ಪ್ರಪಾತದ ಬಂಡೆಕಲ್ಲಿಗೆ ಗುದ್ದಿರುವುದರಿಂದ ತಲೆಗೆ ತೀವ್ರ ಸ್ರರೂಪದ ಗಾಯವಾಗಿ ರಕ್ತ ಚೆಲ್ಲಿದ್ದು ಘಟನೆಯ ಬೀಭತ್ಸಕ್ಕೆ ಸಾಕ್ಷಿಯಾಗಿತ್ತು.

ಘಟನೆ ಬಳಿಕ ಸ್ಥಳೀಯರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು. ಇದೇ ಸಂದರ್ಭ ಸ್ಥಳೀಯ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ಸಚಿವ ಬಿ.ರಮಾನಾಥ ರೈ ಕೂಡಾ ಆಗಮಿಸಿ ತುರ್ತು ಕ್ರಮಕ್ಕೆ ಆದೇಶ ನೀಡಿದರು.

ಮೃತರ ಹಿರಿಯ ಸಹೋದರ ಕಡಬ ಉಪ ತಹಶೀಲ್ದಾರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಕಾರು ಅವರಿಗೆ ಸೇರಿದ್ದಾಗಿದೆ. ಮೃತರು ಶನಿವಾರ ಬೆಳಗ್ಗೆ ಸೊಸೈಟಿಯಿಂದ  ರಜೆ ಮಾಡುವುದಾಗಿ ಹೇಳಿ ಹೋಗಿದ್ದು, ಸುಮಾರು ಹೊತ್ತು ಮಾಣಿ ಸಂತೆಯಲ್ಲಿದ್ದು ಅನಂತರ ಬಿ.ಸಿ.ರೋಡ್‌ ಕಡೆಗೆ ತೆರಳಿದ್ದಾಗಿ  ವಿವರ ತಿಳಿಸಿದೆ. ಮೃತರು ತಾಯಿ, ಸಹೋದರ , ಸಹೋದರಿಯನ್ನು ಅಗಲಿದ್ದಾರೆ. ಮೆಲ್ಕಾರ್‌ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.