ಮಂಗಳೂರು: ಶಾ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದವರ ಮೇಲೆ ದಾಳಿ
Team Udayavani, Feb 21, 2018, 8:17 AM IST
ಮಂಗಳೂರು: ಇಲ್ಲಿನ ಪಣಂಬೂರಿನ ಬೆಂಗ್ರೆ ಬಳಿ ಅಮಿತ್ ಶಾ ಅವರ ಸಮಾವೇಶದಲ್ಲಿ ಪಾಲ್ಗೊಂಡು ವಾಪಾಸಾಗುತ್ತಿದ್ದ ಬಿಜೆಪಿ ಕಾರ್ಯಕರ್ತರ ಬಸ್ ಮೇಲೆ ಹೊಂಚು ದಾಳಿ ನಡೆಸಲಾಗಿದ್ದು, ಕಲ್ಲು ತೂರಾಟ, ಲಾಠಿ ಚಾರ್ಜ್ ನಡೆಸಿದ ಕಳವಳಕಾರಿ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಕೋಮುಸೂಕ್ಷ್ಮ ಪ್ರದೇಶವಾದ ಕಸ್ಟ ತೋಟ ಬೆಂಗ್ರೆಯ ಬಳಿ ಮಲ್ಪೆ ಮೀನುಗಾರರ ಸಮಾವೇಶ ಮುಗಿಸಿ ಬರುತ್ತಿದ್ದ ಬಿಜೆಪಿ ಕಾರ್ಯಕರ್ತರ ಬಸ್ಸನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ಹಲ್ಲೆ ಮಾಡಿದೆ.
ಇಬ್ಬರ ಮೇಲೆ ಚೂರಿಯಿಂದ ಇರಿದಿದ್ದಾರೆ ಎನ್ನಲಾಗಿದ್ದು, ಇಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ಬಳಿಕ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಿ , ಲಾಠಿ ಚಾರ್ಜ್ ನಡೆಸಿದ್ದಾರೆ.
ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದ್ದು ಎಸಿಪಿ , ಡಿಸಿಪಿ ಅವರ ಮೇಲೂ ಕಲ್ಲು ತೂರಾಟ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳಿಗಾಗಿ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ