ಟಿಪ್ಪು ಸುಲ್ತಾನ್ ಗಿಂತ ಸಿದ್ದರಾಮಯ್ಯ ದೊಡ್ಡ ಮತಾಂಧ: ನಳಿನ್ ಕುಮಾರ್
Team Udayavani, Nov 9, 2018, 1:14 PM IST
ಮಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುತ್ತಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ದಕ್ಷಿಣ ಕನ್ನಡ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್, ಟಿಪ್ಪು ಸುಲ್ತಾನ್ ಗಿಂತ ಸಿದ್ದರಾಮಯ್ಯ ದೊಡ್ಡ ಮತಾಂಧ. ಹೀಗಾಗಿ ಟಿಪ್ಪು ಜಯಂತಿ ಬದಲು ಸಿದ್ದರಾಮಯ್ಯ ಜಯಂತಿ ಆಚರಿಸುವುದು ಒಳಿತು ಎಂದು ವ್ಯಂಗ್ಯವಾಡಿದ್ದಾರೆ.
ಶುಕ್ರವಾರ ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಸಲ್ಮಾನರಿಗೆ ಬೇಡದ ಇಸ್ಲಾಂ ವಿರೋಧಿ ಟಿಪ್ಪು ಸುಲ್ತಾನ್. ಇಂತಹ ಟಿಪ್ಪು ಜಯಂತಿಯನ್ನು ಆಚರಿಸಿದ್ದು ಸಿದ್ದರಾಮಯ್ಯ.ಈ ನಿಟ್ಟಿನಲ್ಲಿ ತಾನೊಬ್ಬ ಮುಸಲ್ಮಾನ ಮೌಲ್ವಿ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.
ಇದೀಗ ಸಿದ್ದರಾಮಯ್ಯ ದಾರಿಯಲ್ಲೇ ಎಚ್ ಡಿ ಕುಮಾರಸ್ವಾಮಿ ಹೊರಟಿದ್ದಾರೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಟಿಪ್ಪು ಜಯಂತಿ ಬದಲು ಸಿದ್ದರಾಮಯ್ಯ ಜಯಂತಿ ಆಚರಿಸುವುದು ಒಳ್ಳೆಯದು ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ