ಕೆಲಸ ಮಾನವೀಯ ನೆಲೆಗಟ್ಟಿನಲ್ಲಿರಲಿ

Team Udayavani, Aug 31, 2017, 12:43 PM IST

31-DV-4.jpg

ದಾವಣಗೆರೆ: ಸಿವಿಲ್‌ ಇಂಜಿನಿಯರ್‌ಗಳಿಗೆ ಸಾಮಾಜಿಕ ಜವಾಬ್ದಾರಿ ಹೆಚ್ಚಾಗಿರುವುದರಿಂದ ಅವರು ಮಾನವೀಯ ನೆಲೆಗಟ್ಟಲ್ಲೇ ಕೆಲಸ ಮಾಡಬೇಕಿದೆ ಎಂದು ದಾವಣಗೆರೆ 24+7 ಕುಡಿಯುವ ನೀರು ಪೂರೈಕೆ ಯೋಜನೆ ಜಲಸಿರಿ ಯೋಜನೆಯ ಅಧೀಕ್ಷಕ ಇಂಜಿನಿಯರ್‌ ಆರ್‌.ಸಿ. ಮೋಹನ್‌ ತಿಳಿಸಿದ್ದಾರೆ.

ಬಿಐಇಟಿ ಕಾಲೇಜಿನಲ್ಲಿ ಬುಧವಾರ ಸಿವಿಲ್‌ ಇಂಜಿನಿಯರಿಂಗ್‌ ಫೋರಂ, ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜ ನಮಗೆ ಸಾಕಷ್ಟು ಕೊಡುತ್ತದೆ. ಅದಕ್ಕೆ ಪ್ರತಿಫಲವಾಗಿ ನಾವು ನಮ್ಮದೇ ಆದ ಕೊಡುಗೆ ನೀಡಬೇಕಿದೆ. ಸಮಾಜಕ್ಕಾಗಿ ಸಾಧ್ಯವಾದಷ್ಟು ಕೊಡುಗೆ ನೀಡುವ ಉದ್ದೇಶ ಇಟ್ಟುಕೊಂಡು ಇಂಜಿನಿಯರಿಂಗ್‌ ಜೀವನ ಕಟ್ಟಿಕೊಳ್ಳಬೇಕು ಎಂದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿವಿಲ್‌ ಇಂಜಿನಿಯರಿಂಗ್‌ ವಿಭಾಗದ ಮುಖ್ಯಸ್ಥ ಪ್ರೊ| ಎಚ್‌.ಬಿ. ಅರವಿಂದ್‌ ಮಾತನಾಡಿ, ಹಿರಿಯ ವಿದ್ಯಾರ್ಥಿಗಳು ಕೇವಲ ತಮ್ಮ ವಿದ್ಯಾಭ್ಯಾಸದ ಕಡೆ ಗಮನ ಹರಿಸಿದರೆ ಸಾಲದು. ತಮ್ಮ ವಿದ್ಯಾಭ್ಯಾಸದ ಜೊತೆಗೆ ಹೊಸ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶ ನೀಡಬೇಕು ಎಂದರು.

ವ್ಯಾಸಂಗದ ವೇಳೆ ವಿದ್ಯಾರ್ಥಿಗಳ ಗಮನ ತಮ್ಮ ಶೈಕ್ಷಣಿಕ ಸಾಧನೆ ಕಡೆಗೆ ಇರಬೇಕು. ಹಾಸ್ಟೆಲ್‌, ಊಟ, ಬಟ್ಟೆ ಮುಂತಾದ ಸವಲತ್ತುಗಳಿಗಾಗಿ ಹೋರಾಟ ಮಾಡುವಂತಹ ಮನೋಭಾವದಿಂದ ದೂರ ಇರಬೇಕು. ಉತ್ತಮ ಶೈಕ್ಷಣಿಕ ಸಾಧನೆ ನಂತರ ಅವೆಲ್ಲಾ ತಾವಾಗಿಯೇ ಬರುತ್ತವೆ. ಹೊಸದಾಗಿ ಇಂಜಿನಿಯರಿಂಗ್‌ ಕೆಲಸ ಆರಂಭಿಸಿದ ನಂತರ ಅನೇಕ ಸಂದರ್ಭದಲ್ಲಿ ಉಪವಾಸ, ವನವಾಸ ಅನುಭವಿಸಬೇಕಾದ ಸಂದರ್ಭ ಬರುತ್ತದೆ. ಕಾಲೇಜು ದಿನಗಳಲ್ಲಿ ಅಂತಹ ದಿನಗಳು ಬಂದರೂ ಅವನ್ನೇ ಸಾಧನೆಯ ಮೆಟ್ಟಿಲು ಅಂದುಕೊಳ್ಳಿ ಎಂದು ಸಲಹೆ ನೀಡಿದರು.

ವೇದಿಕೆ ಮೂಲಕ ನಡೆಸುವ ಎಲ್ಲಾ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಿ. ಸಿವಿಲ್‌ ಇಂಜಿನಿಯರಿಂಗ್‌ ಕೆಲಸ ವೀಕ್ಷಣೆಗೆ ಕಾಮಗಾರಿ ಜಾಗಗಳಿಗೆ ಹೋದಾಗ ಹೆಚ್ಚಿನ ಜ್ಞಾನ ಸಂಪಾದನೆಗೆ ಮುಂದಾಗಿ. ತರಗತಿಗಳಲ್ಲಿ ನಿಮಗೆ ಅಕ್ಷರದ ಮೂಲಕ ಜ್ಞಾನ ಸಿಗುತ್ತದೆ.
ಆದರೆ, ಕಾಮಗಾರಿ ನಡೆಯುವ ಸ್ಥಳಕ್ಕೆ ಹೋದಾಗ ಕ್ರಿಯಾತ್ಮಕ ಜ್ಞಾನ ಸಿಗುತ್ತದೆ. ಅಕ್ಷರದ ಮೂಲಕ ಸಿಗುವ ಜ್ಞಾನಕ್ಕಿಂತ ಚಟುವಟಿಕೆ ಆಧಾರಿತ ಜ್ಞಾನ ದೊಡ್ಡದು ಎಂದು ತಿಳಿಸಿದರು.

ವೇದಿಕೆಯ ಸಂಚಾಲಕ ಪ್ರೊ| ಆರ್‌.ಎಸ್‌. ಚಿಕ್ಕನಗೌಡರ್‌, ಪ್ರೊ| ವೀಣಾಕುಮಾರಿ, ಆದಿ, ಪ್ರೊ| ಎಸ್‌. ಸುರೇಶ್‌, ಸಿ.ಪಿ. ಅನಿಲಕುಮಾರ್‌ ವೇದಿಕೆಯಲ್ಲಿದ್ದರು. 

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.