ವಾಹನ ಬಳಕೆದಾರರು ಗಿಡ ಸಸಿ ಬೆಳೆಸಿ

Team Udayavani, Nov 10, 2017, 3:17 PM IST

10-28.jpg

ದಾವಣಗೆರೆ: ವಾಯು ಮಾಲಿನ್ಯ ನಿಯಂತ್ರಿಸುವ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕು. ಅದರಲ್ಲೂ ಮುಖ್ಯವಾಗಿ
ವಾಹನ ಬಳಸುವವರು ವಾಹನವೊಂದಕ್ಕೆ ಒಂದು ಗಿಡದಂತೆ ಬೆಳೆಸಬೇಕಿದೆ ಎಂದು ಜಿಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿ
ಸಹಾಯಕ ಪರಿಸರ ಅಧಿಕಾರಿ ಡಾ| ಗಣಪತಿ ಹೆಗಡೆ ತಿಳಿಸಿದ್ದಾರೆ.

ನಗರ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಭಾಗವಾಗಿ ಹೊಗೆರಹಿತ ವಾಹನ ನೆಮ್ಮದಿ ಜೀವನ ಎಂಬ ಧ್ಯೇಯ ವಾಕ್ಯದೊಂದಿಗೆ ಹಮ್ಮಿಕೊಂಡಿದ್ದ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಅವರು, ಒಂದು ವಾಹನಕ್ಕೆ ಒಂದು ಗಿಡ ಬೆಳೆಸುವ ಮೂಲಕ ವಾಯು ಮಾಲಿನ್ಯ ನಿಯಂತ್ರಿಸಲು ಮುಂದಾಗಬೇಕಿದೆ ಎಂದರು. ದೇಶದ ರಾಜಧಾನಿ ದೆಹಲಿ ಇದೀಗ ವಾಯು ಮಾಲಿನ್ಯದಿಂದಾಗಿ ಜನಜೀವನ ಕಷ್ಟ ಎಂಬಂತಹ ಸ್ಥಿತಿಗೆ ಬಂದಿದೆ. ವಾಯು ಮಾಲಿನ್ಯದಿಂದಾಗುವ ದುಷ್ಪರಿಣಾಮದಿಂದಾಗಿ ಜನರು ಹೊರಗೆ ಬರುವುದಕ್ಕೆ ಆತಂಕ ಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೆಚ್ಚು ಗಿಡ, ಮರ ಬೆಳೆಸುವುದರಿಂದ ಇಂಗಾಲಾಮ್ಲ ಸೇರಿದಂತೆ ಎಲ್ಲಾ ರೀತಿಯ ಅಸಹನೀಯ ಅನಿಲಗಳನ್ನು ಮರ ಹಿರಿಕೊಂಡು ಪರಿಶುದ್ಧವಾದ ಆಮ್ಲಜನಕ ಹೊರಹಾಕುತ್ತದೆ. ಇದರಿಂದ ಉತ್ತಮ ಉಸಿರಾಟದೊಂದಿಗೆ ಆರೋಗ್ಯ ಪೂರ್ಣ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಅವರು ಹೇಳಿದರು.

ವಾಯು ಮಾಲಿನ್ಯ ಹೆಚ್ಚಾದಲ್ಲಿ ಆಮ್ಲ ಮಳೆ ಬರುವ ಸಂಭವ ಹೆಚ್ಚಾಗಿರುತ್ತದೆ. ಈ ಮಳೆ ಬಂದಲ್ಲಿ ಸಸ್ಯ ಸಂಕುಲವೇ ನಾಶವಾಗಲಿದೆ. ಇದಕ್ಕೆ ಯಾರು ಅವಕಾಶ ಮಾಡಿಕೊಡಬಾರದು. ಪ್ರತಿಯೊಬ್ಬರೂ ಗಿಡ ಬೆಳೆಸುವುದರಿಂದ ಇಂತಹ ಸಮಸ್ಯೆಗಳಿಂದ
ದೂರವಿರಬಹುದು ಎಂದು ಅವರು ತಿಳಿಸಿದರು.

ಮೋಟಾರು ವಾಹನಗಳ ನಿರೀಕ್ಷಕ ಅನಿಲ್‌ ಕುಮಾರ್‌ ಮಾತನಾಡಿ, ನಾವಿಂದು ಗಿಡ, ಮರಗಳ ಬೆಳೆಸುವ ಅನಿವಾರ್ಯತೆಯನ್ನು ಪ್ರತಿಯೊಬ್ಬರಲ್ಲೂ ಮೂಡಿಸಬೇಕಿದೆ. ಮನೆಯಲ್ಲಿ ನಡೆಯುವ ಯಾವುದೇ ಶುಭ ಸಮಾರಂದಲ್ಲಿ ಸಸಿಗಳ ವಿತರಣೆ ಮಾಡುವ ಮೂಲಕ ಪರಿಸರ ಜಾಗೃತಿ ಮೂಡಿಸಬೇಕು ಎಂದರು. ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಕೊಟ್ರೇಶ್‌, ಪ್ರಾದೇಶಿಕ ಸಾರಿಗೆ ಅಧಿಕಾರಿ ವಿ.ಜಿ. ಶ್ರೀನಿವಾಸ್‌, ತಿಪ್ಪೇಸ್ವಾಮಿ, ಎಚ್‌.ಸಿ. ಹನುಮಂತಪ್ಪ, ಕೆ. ವಾಸುದೇವ್‌, ಎಂ. ಸುರೇಶ್‌ ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.