ಈಗಲೂ ದೇವರ ಮೇಲಿನ ನಂಬಿಕೆ ಕಡಿಮೆಯಾಗಿಲ್ಲ : ರವೀಂದ್ರನಾಥ್‌

Team Udayavani, Feb 7, 2018, 5:26 PM IST

3.jpg

ದಾವಣಗೆರೆ: ಇಂದಿನ ತಂತ್ರಜ್ಞಾನ, ಆಧುನಿಕ ಕಾಲದಲ್ಲೂ ಜನರಲ್ಲಿ ದೇವರ ಮೇಲಿನ ನಂಬಿಕೆ ಕಡಿಮೆ ಆಗಿಲ್ಲ ಮತ್ತು ಮುಂದೆಯೂ ಆಗುವುದಿಲ್ಲ ಎಂದು ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ್‌ ಹೇಳಿದರು.

ಹಳೆ ಪಿಬಿ ರಸ್ತೆಯ ಪಿಸಾಳೆ ಕಾಂಪೌಂಡ್‌ನ‌ಲ್ಲಿ ಮಂಗಳವಾರ  ಗುಳ್ಳಮ್ಮದೇವಿ, ಬನ್ನಿಮಹಾಂಕಾಳಮ್ಮ, ಬಸವಣ್ಣ, ನಾಗರಕಟ್ಟೆ ದೇವರುಗಳ ಶಿಲಾಮೂರ್ತಿ ಪ್ರಾಣ ಪ್ರತಿಷ್ಟಾಪನಾ, ದೇವಸ್ಥಾನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಡಾಕ್ಟರ್‌ಗಳೇ ಇಲ್ಲದಂತಹ ಸಂದರ್ಭದಲ್ಲಿ ಕೆಲ ರೋಗಗಳು ಬಂದಾಗ ಗ್ರಾಮೀಣ ಜನರು ಶಕ್ತಿ ದೇವರಲ್ಲಿ ಮೊರೆ ಹೋಗುತ್ತಿದ್ದರು. ಈಗ ಸಾಕಷ್ಟು ಸಂಖ್ಯೆಯಲ್ಲೇ ಡಾಕ್ಟರ್‌ಗಳು ಇದ್ದಾರೆ. ಆದರೂ, ಈಗಲೂ ಜನರು ಕೂಡಾ ದೇವರ ಮೇಲೆ ಇಟ್ಟಿರುವಂತಹ ನಂಬಿಕೆ ಕಡಿಮೆಯಾಗಿಲ್ಲ ಎಂದರು. ಗ್ರಾಮೀಣ ಪ್ರದೇಶದಲ್ಲಿ ಹಿಂದಿನಿಂದಲೂ ಆರೋಗ್ಯ ಒಳಗೊಂಡಂತೆ ಅನೇಕ ಸಮಸ್ಯೆ ಬಂದಾಗ ದೇವರ ಮೊರೆ ಹೋಗುತ್ತಿದ್ದುದ್ದನ್ನ ಕಾಣಬಹುದು. ಈಗ ಸಹ ಅನೇಕರು ಅನೇಕ ಸಮಸ್ಯೆಗಳಿಗೆ ಪರಿಹಾರ ಕೋರಿ ದೇವರು-ದಿಂಡರ ಮೊರೆ ಹೋಗುತ್ತಾರೆ ಎಂದು ತಿಳಿಸಿದರು.

ದೊಡ್ಡ ಪಟ್ಟಣ, ನಗರಗಳಲ್ಲೂ ದೇವರಲ್ಲಿ ಮೊರೆ ಹೋಗುವುದು ಕಡಿಮೆ ಆಗಿಲ್ಲ. ತಮ್ಮ ಕೆಲಸ ಕಾರ್ಯಗಳಿಗೆ ಹೋಗುವ ಮುನ್ನ ದೇಗುಲಗಳಿಗೆ ಇಲ್ಲವೆ ದೇವರಿಗೆ ಪೂಜೆ ಸಲ್ಲಿಸಿಯೇ ಹೋಗುವುದು ವಾಡಿಕೆಯಂತೆ ಪಾಲಿಸುತ್ತಾರೆ. ದೇಗುಲಕ್ಕೆ ಹೋಗಿ ಬರುವುದರಿಂದ, ದೇವರ ಪೂಜೆ ಮಾಡುವುದರಿಂದ ಒಳ್ಳೆಯದಾಗುತ್ತೆ ಎಂಬ ನಂಬಿಕೆ ಇದೆ ಎಂದರು. ನಾವು ಸಣ್ಣವರಿದ್ದಾಗ ಕಾಲದಿಂದಲೂ ಗುಳ್ಳಮ್ಮನ ದೇವಸ್ಥಾನ ಇತ್ತು. ರಸ್ತೆ ಅಗಲೀಕರಣದ ಸಂದರ್ಭದಲ್ಲಿ ಗುಳ್ಳಮ್ಮನ ದೇವಸ್ಥಾನ ತೆಗೆದು ಹಾಕಬೇಕಾಯಿತು. ಈಗ ಪಿಸಾಳೆ ಕಾಂಪೌಂಡಿನ ಜನರು ಒಂದಾಗಿ ಸುಂದರ ದೇವಸ್ಥಾನ ಕಟ್ಟಿಸಿರುವುದು ಸಂತೋಷದ ವಿಚಾರ ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಸದಸ್ಯ ದಿನೇಶ್‌ ಕೆ. ಶೆಟ್ಟಿ ಮಾತನಾಡಿ, ಹಳೆ ಪಿಬಿರಸ್ತೆ ಅಗಲೀಕರಣದಿಂದಾಗಿ ರಸ್ತೆ ಮಧ್ಯೆಯಲ್ಲಿದ್ದ ಗುಳ್ಳಮ್ಮ ದೇವಸ್ಥಾನವನ್ನು ತೆರವುಗೊಳಿಸಲಾಗಿತ್ತು. ಈಗ ಪಿಸಾಳೆ ಕಾಂಪೌಂಡ್‌ನ‌ಲ್ಲಿ ಸುಂದರ ದೇವಾಲಯ ಕಟ್ಟಲಾಗಿದೆ. ಮುಂದಿನ ದಿನಗಳಲ್ಲಿ ಶಾಸಕರೊಂದಿಗೆ ಚರ್ಚಿಸಿ
ಕಲ್ಯಾಣ ಮಂದಿರ ನಿರ್ಮಾಣಕ್ಕೆ ಸಹಾಯ ಕೋರುವುದಾಗಿ ತಿಳಿಸಿದರು. ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮೇಯರ್‌ ಅನಿತಾಬಾಯಿ, ಸದಸ್ಯ ಡಿ.ಕೆ. ಕುಮಾರ್‌, ಶ್ರೀ ಶ್ರೀನಿವಾಸ ಸೇವಾ ಸಂಘದ ಅಧ್ಯಕ್ಷ ಪಿ.ಆರ್‌.ನಾಗರಾಜ್‌ ಪಿಸಾಳೆ, ಪಿಸಾಳೆ ಸತ್ಯನಾರಾಯಣರಾವ್‌, ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತ್‌ ರಾವ್‌ಜಾಧವ್‌, ವಸಂತ್‌ರಾವ್‌ ಸಾಬಾಳೆ, ಮಾಲತೇಶ್‌ರಾವ್‌ ಜಾಧವ್‌, ಅಜೆಯ್‌ಕುಮಾರ್‌, ಅಜ್ಜಪ್ಪ ಪವಾರ್‌, ಗಿರಿರಾಜ್‌ ಪವಾರ್‌, ವಿಜಯ್‌ ಜಾಧವ್‌, ಪ್ರವೀಣ್‌  ಜಾಧವ್‌, ಪಿಸಾಳೆ ಕೃಷ್ಣ, ಬಾತಿ ಹೋಟೆಲ್‌ ಪ್ರವೀಣ್‌ ಇತರರು ಇದ್ದರು. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.