ಸುಸೂತ್ರ ಚುನಾವಣೆಗೆ ಸಕಲ ಸಿದ್ಧತೆ


Team Udayavani, May 11, 2018, 3:05 PM IST

yad-3.jpg

ದಾವಣಗೆರೆ: ಶನಿವಾರ (ನಾಳೆ) ಎಂಟು ವಿಧಾನಸಭಾ ಕ್ಷೇತ್ರಗಳ ಚುನಾವಣೆ ಪಾರದರ್ಶಿಕ, ನ್ಯಾಯಸಮ್ಮತ, ಸುಸೂತ್ರವಾಗಿ ನಡೆಯಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್‌ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.

ದಾವಣಗೆರೆ ಉತ್ತರ, ದಕ್ಷಿಣ ಒಳಗೊಂಡಂತೆ ಎಂಟು ಕ್ಷೇತ್ರದಲ್ಲಿ 8,24,774 ಪುರುಷರು, 8,08,058 ಮಹಿಳೆಯರು, 117 ಇತರರು ಸೇರಿ 16,32,949 ಮತದಾರರಿದ್ದಾರೆ. ಮಹಿಳಾ ಸಿಬ್ಬಂದಿಯೇ ನಿರ್ವಹಿಸುವ 15 ಸಖೀ ಪಿಂಕ್‌ ಮತಗಟ್ಟೆ ಸೇರಿ 1,946 ಮತಗಟ್ಟೆ ಸ್ಥಾಪಿಸಲಾಗಿದೆ.

ಮೇ 12ರ ಬೆಳಗ್ಗೆ 7ರಿಂದ ಸಂಜೆ 6 ಗಂಟೆ ವರೆಗೆ ಚುನಾವಣಾ ಪ್ರಕ್ರಿಯೆಗೆ 11,495 ವಿವಿಧ ಹಂತದ ಅಧಿಕಾರಿ, ಸಿಬ್ಬಂದಿ ನಿಯೋಜಿಸಲಾಗಿದೆ. ಸಿಬ್ಬಂದಿಗಾಗಿ 400ಕ್ಕೂ ಹೆಚ್ಚು ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮತದಾನ ಹಿನ್ನೆಲೆಯಲ್ಲಿ ಈಗಾಗಲೇ ಆಯೋಗದಿಂದ ವೋಟರ್‌ ಸ್ಲಿಪ್‌ ವಿತರಿಸಲಾಗಿದೆ. ಮತದಾರರು ತಮ್ಮ ಭಾವಚಿತ್ರ ಇರುವ ಗುರುತಿನ ಕಾರ್ಡ್‌ ತೋರಿಸಿ ಮತ ಚಲಾಯಿಸಬಹುದು. ಒಂದೊಮ್ಮೆ ಭಾವಚಿತ್ರ ಇರುವ ಗುರುತಿನ ಕಾರ್ಡ್‌ ಇಲ್ಲದಿದ್ದಲ್ಲಿ ಆಯೋಗದಿಂದ ನೀಡಿರುವ ವೋಟರ್‌ ಸ್ಲಿಪ್‌, ಚಾಲನಾ ಪರವಾನಿಗೆ ಪತ್ರ(ಡಿಎಲ್‌),
ಭಾವಚಿತ್ರ ಇರುವ ರೇಷನ್‌ ಕಾರ್ಡ್‌, ಬ್ಯಾಂಕ್‌ ಖಾತೆ ಒಳಗೊಂಡಂತೆ ಆಯೋಗ ಸೂಚಿಸಿರುವ 12 ದಾಖಲೆಯಲ್ಲಿ ಯಾವುದಾದರೂ ಒಂದನ್ನು ತೋರಿಸಿ ಮತದಾನ ಮಾಡಬಹುದು ಎಂದು ತಿಳಿಸಿದರು. 

ಭದ್ರತಾ ಸಿಬ್ಬಂದಿ ಒಳಗೊಂಡಂತೆ ಮಹಿಳಾ ಅಧಿಕಾರಿಗಳೇ ಕಾರ್ಯ ನಿರ್ವಹಿಸುವ 15 ಸಖೀ ಪಿಂಕ್‌ ಮತಗಟ್ಟೆಯಲ್ಲಿ 105 ಸಿಬ್ಬಂದಿ ನಿಯೋಜಿಸಲಾಗಿದೆ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದಲ್ಲಿ 14,511 ವಿಕಲ ಚೇತನರು ಶೇ. 100 ರಷ್ಟು ಮತದಾನ ಮಾಡಲು ಅನುಕೂಲ ಆಗುವಂತೆ 611 ಮತಗಟ್ಟೆಗಳಿಗೆ ವೀಲ್‌ಚೇರ್‌ ನೀಡಲಾಗಿದೆ. 126 ಜನರು ಸ್ವಯಂ ಸೇವಕರು ವಿಕಲ ಚೇತನರ ಮತದಾನದ ನೆರವಿಗೆ ಮುಂದಾಗಿದ್ದಾರೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೋರಿದರು.

ಚುನಾವಣೆ ನಡೆಯುವ 48 ಗಂಟೆ ಮುನ್ನ ಜಾರಿ ಮಾಡಲಾಗಿರುವ ನಿಷೇಧಾಜ್ಞೆ ಮೇ 13ರ ಸಂಜೆ 6 ರವರೆಗೆ ಜಾರಿಯಲ್ಲಿರುತ್ತದೆ. ಕ್ಷೇತ್ರಕ್ಕೆ ಸಂಬಂಧವೇ ಇಲ್ಲದವರು ಮತಕ್ಷೇತ್ರ ವ್ಯಾಪ್ತಿಯಲ್ಲಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಮತಗಟ್ಟೆಯ 100 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಮತಗಟ್ಟೆ ಏಜೆಂಟರು ಮತಗಟ್ಟೆಯ 200 ಮೀಟರ್‌ ಹೊರಗೆ ವೋಟರ್‌ ಸ್ಲಿಪ್‌ ನೀಡಬಹುದು. ಆದರೆ, ಯಾವ ಕಾರಣಕ್ಕೂ ಪ್ರಚಾರ ಮಾಡುವಂತಿಲ್ಲ ಎಂದು ತಿಳಿಸಿದರು. 

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ವಿನಾಯಕ ನಗರ ಎ ಬ್ಲಾಕ್‌ ಇತರೆಡೆ ಮತದಾನದ ಬಹಿಷ್ಕಾರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮತದಾನ ಬಹಿಷ್ಕಾರದಿಂದ ಅನುಕೂಲ ಆಗುವುದಿಲ್ಲ. ತಮಗೆ ಯಾರು
ಸೂಕ್ತವೋ ಅವರಿಗೆ ಮತ ನೀಡಬೇಕು. ಇಲ್ಲದೇ ಹೋದಲ್ಲಿ ನೋಟಾ ಚಲಾಯಿಸಬಹುದು. ಆದರೆ, ಸಂಪೂರ್ಣವಾಗಿ ಮತದಾನದಿಂದಲೇ ದೂರ ಉಳಿಯುವುದು ಒಳ್ಳೆಯದಲ್ಲ ಎಂದು ಪ್ರತಿಕ್ರಿಯಿಸಿದರು.

ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ, ಜಿಲ್ಲಾ ರಕ್ಷಣಾಧಿಕಾರಿ ಆರ್‌. ಚೇತನ್‌, ಚುನಾವಣಾ ತಹಶೀಲ್ದಾರ್‌ ಜಿ. ಸಂತೋಷ್‌ಕುಮಾರ್‌ ಸುದ್ದಿಗೋಷ್ಠಿಯಲ್ಲಿದ್ದರು. 

ಮೊಬೈಲ್‌ ತರಲೇಬೇಡಿ
ಮತದಾನದ ದಿನದಂದು ಯಾವುದೇ ಕಾರಣಕ್ಕೂ ಮತಗಟ್ಟೆಯ ಒಳಗೆ ಮೊಬೈಲ್‌ ತೆಗೆದುಕೊಂಡು ಹೋಗಲಿಕ್ಕೆ ಅವಕಾಶವೇ ಇಲ್ಲ. ಮತಗಟ್ಟೆಯ ಹೊರಗೆ ಇಡಬೇಕು. ಮೊಬೈಲ್‌ ತರದೇ ಇರುವುದೇ ಸೂಕ್ತ ಎಂದು ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ತಿಳಿಸಿದರು.

ಮೂವರು ಅಮಾನತು 
ಮಾಯಕೊಂಡ ಮೀಸಲು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ 273 ವಿದ್ಯುನ್ಮಾನ ಮತಯಂತ್ರಗಳ ಪಿಂಕ್‌ ಪಟ್ಟಿ ತೆಗೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯಕ ಚುನಾವಣಾಧಿಕಾರಿ ಅಮಾನತು ಆಗಿದ್ದಾರೆ. ಚುನಾವಣಾಧಿಕಾರಿ ವರ್ಗಾವಣೆ ಆಗಿದ್ದಾರೆ. ಇತರೆ ಕರ್ತವ್ಯ ಲೋಪಕ್ಕೆ ಇತರೆ ಇಬ್ಬರನ್ನು ಅಮಾನತು ಮಾಡಲಾಗಿದೆ ಎಂದು ಡಿಸಿ ಮಾಹಿತಿ ನೀಡಿದರು.

373 ಪ್ರಕರಣ ದಾಖಲು
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟು 373 ಪ್ರಕರಣ ದಾಖಲಾಗಿವೆ. ಫ್ಲೆಯಿಂಗ್‌ ಸ್ಕಾ Ìಡ್‌ 19, ಎಸ್‌ಐಟಿ 1. ಅಬಕಾರಿ ಮತ್ತು ಪೊಲೀಸರು 353 ಪ್ರಕರಣ ದಾಖಲಿಸಿದ್ದಾರೆ. ಚುನಾವಣಾ ಪ್ರಚಾರ ಕಾರ್ಯಕ್ಕೆ ಮಕ್ಕಳನ್ನು ಬಳಸಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ವಿವಿಧ ರಾಜಕೀಯ ಪಕ್ಷ, ಅಭ್ಯರ್ಥಿಗಳ ವಿರುದ್ಧ 9 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 56.4 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ. 8,39,510 ರೂ. ಖಜಾನೆಯಲ್ಲಿರಿಸಲಾಗಿದೆ. ಅಬಕಾರಿ ಇಲಾಖೆ ಸಿಬ್ಬಂದಿ 63.37 ಲಕ್ಷ ಮೌಲ್ಯದ 15,918 ಲೀಟರ್‌, ಪೊಲೀಸರು 2.10 ಲಕ್ಷ ಮೌಲ್ಯದ 694 ಲೀಟರ್‌ ಅಕ್ರಮ ಮದ್ಯ ವಶಪಡಿಸಿಕೊಂಡಿದ್ದಾರೆ ಎಂದು ರಮೇಶ್‌ ತಿಳಿಸಿದರು

590 ಸೂಕ್ಷ್ಮ ಮತಗಟ್ಟೆ
ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದಲ್ಲಿ 1,946 ಮತಗಟ್ಟೆಯಲ್ಲಿ 590 ಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾಗಿದೆ. ಪೊಲೀಸ್‌, ಗೃಹರಕ್ಷಕ ದಳ, ಅರೆ ಸೇನಾಪಡೆ ಬಳಸಿಕೊಂಡು ಎಲ್ಲ ಕಡೆ ಜನರು ನಿರ್ಭೀತಿಯಿಂದ ಮತದಾನ ಮಾಡುವಂತಹ ವಾತಾವರಣ ನಿರ್ಮಿಸಲಾಗುವುದು. ಒಟ್ಟಾರೆಯಾಗಿ ಶಾಂತಿಯುತ ಮತದಾನ ಪ್ರಕ್ರಿಯೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ದಾವಣಗೆರೆಯ ದುರ್ಗಾಂಬಿಕಾ ದೇವಸ್ಥಾನದ ಬಳಿ ನಡೆದ ಘಟನೆಗೆ ಸಂಬಂಧಿಸಿದಂತೆ ಎರಡು ಪಕ್ಷಗಳ ಕಡೆಯಿಂದ ದೂರು ದಾಖಲಾಗಿದೆ.

ಕೆಲವರ ವಿರುದ್ಧ ಸೆಕ್ಷನ್‌ 107 ಪ್ರಕರಣ ದಾಖಲಿಸಲಾಗಿದೆ. 154 ಸೆಕ್ಷನ್‌ ಅನ್ವಯ ಹೇಳಿಕೆ ಪಡೆದ ನಂತರ ಮುಂದಿನ
ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ರಕ್ಷಣಾಧಿಕಾರಿ ಆರ್‌. ಚೇತನ್‌ ತಿಳಿಸಿದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.