CONNECT WITH US  

ಕೋಪ್ಪಾದಾಳಿ: 17 ಪ್ರಕರಣ ದಾಖಲು

ದಾವಣಗೆರೆ: ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ತಂಡ ಶುಕ್ರವಾರ ನಗರದ ವಿವಿಧೆಡೆ ದಾಳಿ ನಡೆಸಿ, ಒಟ್ಟು 17 ಪ್ರಕರಣ ದಾಖಲಿಸಿ, ಸ್ಥಳದಲ್ಲೇ 2,050 ರೂಪಾಯಿ ದಂಡ ವಿಧಿಸಿದೆ. ಹೊಸ ಬಸ್‌ ನಿಲ್ದಾಣದಿಂದ ಹಳೇ ಬಸ್‌ನಿಲ್ದಾಣದವರೆಗಿನ ಹೋಟೆಲ್‌, ಬಾರ್‌ ಮತ್ತು ರೆಸ್ಟೋರೆಂಟ್‌, ಪಾನ್‌ಶಾಪ್‌, ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಬಳಸಿದವರ ವಿರುದ್ಧ ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003 ಸೆಕ್ಷನ್‌ 4 ರಡಿ ಪ್ರಕರಣ ಸ್ಥಳದಲ್ಲಿಯೇ ದಂಡ ವಿಧಿಸಲಾಗಿದೆ. ಅಧಿಕಾರಿಗಳ ತಂಡ ಒಟ್ಟು 17 ಪ್ರಕರಣ ದಾಖಲಿಸಿ, ಸ್ಥಳದಲ್ಲೇ 2,050 ರೂಪಾಯಿ ದಂಡ ವಸೂಲಿ ಮಾಡಿದೆ.

ಸಾರ್ವಜನಿಕ ಸ್ಥಳದಲ್ಲಿರುವ ಅಂಗಡಿ ಮಾಲೀಕರು ಧೂಮಪಾನ ನಿಷೇಧದ ಬಗ್ಗೆ ಪ್ರದರ್ಶಿಸಬೇಕಾದ ಫಲಕಗಳನ್ನು ಕಟ್ಟುನಿಟ್ಟಾಗಿ ಅಳವಡಿಸಲು ತಂಡ ತಾಕೀತು ಮಾಡಿದೆ. ಕೋಟಾ³ ಕಾಯ್ದೆ ಸೆಕ್ಷನ್‌ 6ಎ ಪ್ರಕಾರ 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರುವುದು ಹಾಗೂ ಮಕ್ಕಳಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದನ್ನು ನಿಷೇಧಿಸಿರುವುದು, ಶಾಲಾ- ಕಾಲೇಜುಗಳ 100 ಯಾರ್ಡ್‌ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡದಿರುವುದು, ಸೆಕ್ಷನ್‌ 4 ರ ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ನಿಷೇಧ ಮತ್ತು ತಂಬಾಕು ಉತ್ಪನ್ನಗಳ ಪ್ಯಾಕ್‌ ಗಳ ಮೇಲೆ ಎಚ್ಚರಿಕೆ ಚಿನ್ಹೆ ಇಲ್ಲದೆ ಮಾರಾಟ ನಿಷೇಧ ಇರುವ ಮಾಹಿತಿ ನೀಡಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಗಂಗಾಧರ್‌, ಆಹಾರ ಸುರಕ್ಷತಾ ಅಂಕಿತ ಅಧಿ ಕಾರಿ ಕೊಟ್ರೇಶ್‌, ಆರೋಗ್ಯ ಮೇಲ್ವಿಚಾರಕ ರಾಚಪ್ಪ ಕುಪ್ಪಸ್ತ, ಹಿರಿಯ ಆರೋಗ್ಯ ಸಹಾಯಕರಾದ ಲೋಕೇಶ್‌, ವೆಂಕಟಾಚಲ, ಜಿಲ್ಲಾ ಸಲಹೆಗಾರ ಸತೀಶ್‌ ಕಲಹಾಳ, ಶಿಕ್ಷಣ ಇಲಾಖೆಯ ಪ್ರಕಾಶ್‌ ಇತರರು ತಂಡದಲ್ಲಿದ್ದರು.


Trending videos

Back to Top