ಜ್ಞಾನ ವಿದ್ಯಾರ್ಥಿಗಳಿಗೆ ಗರ್ವ ತರದಿರಲಿ

Team Udayavani, Aug 28, 2018, 5:41 PM IST

dvg-1.jpg

ದಾವಣಗೆರೆ: ವಿದ್ಯಾರ್ಥಿಗಳು ತರಗತಿಗಳಲ್ಲಿ ಪಡೆದ ಜ್ಞಾನದಿಂದ ಗರ್ವ ಪಡದೇ, ಸದ್ಗುಣ ಬೆಳೆಸಿಕೊಂಡು ಸದಾ ಅಧ್ಯಯನಶೀಲರಾಗಬೇಕು ಎಂದು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌ ಕಿವಿಮಾತು ಹೇಳಿದ್ದಾರೆ.

ಸೋಮವಾರ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ 2018-19ನೇ ಸಾಲಿನ ಪಠ್ಯಪೂರಕ ಚಟುವಟಿಕೆಗಳಿಗೆ ಚಾಲನೆ ನೀಡಿದ ಸಮಾರಂಭದಲ್ಲಿ ಅವರು ಮಾತನಾಡಿ, ವಿದ್ಯೆಗೆ ವಿನಯವೇ ಭೂಷಣ ಎಂಬ ಮಾತನ್ನು ಪ್ರತಿಯೊಬ್ಬ ವಿದ್ಯಾರ್ಥಿನಿಯು ಅರ್ಥ ಮಾಡಿಕೊಳ್ಳಬೇಕು. ಗುರು, ಹಿರಿ ಯರಿಗೆ ಗೌರವ ನೀಡುವ ಮೂಲಕ ಸದ್ಗುಣ ಬೆಳೆಸಿಕೊಳ್ಳಬೇಕು. ಆಗ ಮಾತ್ರ ಪಡೆದ ಶಿಕ್ಷಣ ಸಾರ್ಥಕ ಆಗಲಿವೆ ಎಂದರು. 

ಪ್ರಸ್ತುತ ಎಲ್ಲಾ ಕ್ಷೇತ್ರದಲ್ಲೂ ಪೈಪೋಟಿ ಹೆಚ್ಚಿದೆ. ಹಾಗಾಗಿ ವಿದ್ಯಾರ್ಥಿಗಳು ಹಗಲಿರುಳು ಪರಿಶ್ರಮ ಪಡಬೇಕು. ಈ ಹಿಂದೆ ಸರ್ಕಾರಿ ಮಹಿಳಾ ಕಾಲೇಜು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯುತ್ತಿತ್ತು. ಆದರೀಗ ಆ ಕಷ್ಟವಿಲ್ಲ. ವಿಶಾಲವಾದ ಪರಿಸರದಲ್ಲಿ ಸರಕಾರದಿಂದ ಹೊಸದಾದ ಸ್ವಂತ ಕಟ್ಟಡ ಕಲ್ಪಿಸಿಕೊಡಲಾಗಿದೆ. ಉತ್ತಮ ಬೋಧನಾ ಕೊಠಡಿಗಳಿವೆ. ಶಾಸಕರಿಗೆ ಸರ್ಕಾರದಿಂದ ವರ್ಷಕ್ಕೆ 2ಕೋಟಿ ಅನುದಾನ ದೊರಕುತ್ತಿದ್ದು, ಅಂತಹ ಅನುದಾನವನ್ನು ಇತರೆ ಸರ್ಕಾರಿ ಕಾಲೇಜುಗಳ ಸೌಲಭ್ಯಕ್ಕೂ ನೀಡಲಾಗುತ್ತಿದೆ. ಈ ಕಾಲೇಜಿನ ಬೇಡಿಕೆಗಳು ಸಾಕಷ್ಟಿರುವುದರಿಂದ ಈಗ 10 ಲಕ್ಷ ರೂ. ಅನುದಾನ ನೀಡಲಾಗುವುದು. ಇನ್ನೂ ಹೆಚ್ಚಿನ ಸೌಲಭ್ಯ ಒದಗಿಸಲು ಶಿಕ್ಷಣ ಸಚಿವರಿಗೆ ಪತ್ರ ಬರೆದು, ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಕಾಲೇಜು ಪ್ರಾಧ್ಯಾಪಕ ಜಿ.ಎಸ್‌. ಸತೀಶ್‌ ಮಾತನಾಡಿ, ಕಾಲೇಜಿನಲ್ಲಿ ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರಿದ್ದಾರೆ. ಅದರಲ್ಲಿ ಶೇ. 90ರಷ್ಟು ಗ್ರಾಮೀಣ ಭಾಗದವರು.

ಬೆಳಗ್ಗೆ ಹಾಗೂ ಮಧ್ಯಾಹ್ನವೂ ತರಗತಿಗಳಲ್ಲಿ ಬೋಧಿಸಲಾಗುತ್ತಿದ್ದು, ಕೊಠಡಿಗಳ ಕೊರತೆ ಇದೆ. ಹಾಗಾಗಿ ಹೆಚ್ಚುವರಿ 10 ಕೊಠಡಿ, ಭೌತಶಾಸ್ತ್ರ, ರಸಾಯನ ಶಾಸ್ತ್ರ , ಕಂಪ್ಯೂಟರ್‌ ಲ್ಯಾಬ್‌ ಮತ್ತು ಉತ್ತಮ ಗ್ರಂಥಾಲಯ, ಜಿಮ್‌ ಹಾಗೂ 150 ಬೆಂಚುಗಳ ಅಗತ್ಯವಿದೆ ಎಂದು ಎಂದು ಶಾಸಕರಿಗೆ ಮನವಿ ಸಲ್ಲಿಸಿದರು.

ನಿವೃತ್ತ ಪ್ರಾಂಶುಪಾಲ ಎಸ್‌.ಟಿ. ಶಿವಪ್ಪ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ| ದಾದಾಪೀರ್‌ ನವಿಲೇಹಾಳ್‌, ಕಾಲೇಜಿನ ಅಧೀಕ್ಷಕ ಶೇಷಪ್ಪ, ಡಿ.ಎಸ್‌. ಶಿವಶಂಕರ್‌, ಜ್ಯೋತಿ ಸಿದ್ದೇಶ್‌, ವಿಠಲಾಪುರದ ರುದ್ರಪ್ಪ, ಕ್ರೀಡಾ ಸಂಚಾಲಕ ಪ್ರೊ. ಡಿ.ನಾಗೇಂದ್ರನಾಯ್ಕ, ಆನುರಾಧ, ಡಾ| ಎನ್‌.ಶಕುಂತಲಾ, ಕೆ.ಮಲ್ಲಿಕಾರ್ಜುನ ಗೌಡ, ಎ.ಬಾಬು ಮತ್ತಿತರರು ಈ ಸಂದರ್ಭದಲ್ಲಿದ್ದರು  

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.