ನಮಗೆ ಎಸ್ಸಿ ಪ್ರಮಾಣ ಪತ್ರ ನೀಡಿ

Team Udayavani, Sep 7, 2018, 4:02 PM IST

dvg-1.jpg

ದಾವಣಗೆರೆ: ಭಾರತದಲ್ಲಿ ಪ್ರತಿ ವರ್ಷ 2.5 ಲಕ್ಷ ಜನರಿಗೆ ಕಣ್ಣುಗಳ ಅಗತ್ಯವಿದ್ದು, ಅ ಪ್ರಮಾಣದಷ್ಟು ನೇತ್ರದಾನಿಗಳು ದೊರೆಯುತ್ತಿಲ್ಲ. ಹಾಗಾಗಿ ಪ್ರತಿಯೊಬ್ಬರೂ ನೇತ್ರದಾನದ ಮೂಲಕ ಇತರರಿಗೆ ಬೆಳಕಾಗಬೇಕು ಎಂದು ಹರಪನಹಳ್ಳಿ
ಸಾರ್ವಜನಿಕ ಆಸ್ಪತ್ರೆ ನೇತ್ರತಜ್ಞೆ ಡಾ| ಸಂಗೀತಾ ಕೊಲ್ಹಾಪುರಿ ಮನವಿ ಮಾಡಿದ್ದಾರೆ.

ಗುರುವಾರ, ಜಿಲ್ಲಾ ಆಸ್ಪತ್ರೆಯಲ್ಲಿ 23ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ದಿನಾಚರಣೆ ಉದ್ಘಾಟಿಸಿ, ಮಾತನಾಡಿದ ಅವರು, ದೇಶದಲ್ಲಿ ಪ್ರತಿ ವರ್ಷ 2.5 ಲಕ್ಷದಷ್ಟು ಜನರಿಗೆ ಕಣ್ಣುಗಳು ಬೇಕು. ಆದರೆ, 25-30 ಸಾವಿರದಷ್ಟು ಮಾತ್ರವೇ
ಲಭ್ಯವಾಗುತ್ತಿವೆ. ಅಗತ್ಯ ಇರುವವರು ಮತ್ತು ದಾನಿಗಳ ಸಂಖ್ಯೆಯಲ್ಲಿ ಸಾಕಷ್ಟು ಅಂತರ ಕಂಡು ಬರುತ್ತಿದೆ. ಈ ಅಂತರ ಸರಿದೂಗಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ನೇತ್ರದಾನ ಮಾಡುವ ಜೊತೆಗೆ ಇತರರಲ್ಲೂ ಜಾಗೃತಿ ಮೂಡಿಸಬೇಕು
ಎಂದರು. 

ಭಾರತದಲ್ಲಿ ಪ್ರತಿ ದಿನ 86 ಸಾವಿರದಷ್ಟು ಜನನವಾಗುತ್ತದೆ. 62 ಸಾವಿರ ಸಾವು ಸಂಭವಿಸುತ್ತವೆ. ಸಾವನ್ನಪ್ಪುವ ಮುನ್ನ
ನೇತ್ರದಾನ ಮಾಡಿದ್ದೇ ಆದಲ್ಲಿ ದೇಶದಲ್ಲಿರುವ 2.5 ಲಕ್ಷದಷ್ಟು ಜನರು ಕೇವಲ 11 ದಿನಗಳಲ್ಲಿ ದೃಷ್ಟಿ ಪಡೆಯುತ್ತಾರೆ. ಆದರೆ, ಅಂತಹ ಕೆಲಸ ಆಗುತ್ತಿಲ್ಲ. ನೇತ್ರದಾನಕ್ಕೆ ಎಲ್ಲರೂ ಮುಂದಾಗಬೇಕು ಎಂದು ತಿಳಿಸಿದರು. 

ಮನುಷ್ಯನಿಗೆ ಅತೀ ಮುಖ್ಯವಾಗಿರುವ ಕಣ್ಣುಗಳಿಲ್ಲದೆ ಜೀವನ ನಡೆಸುವುದು ಕಷ್ಟ. ಒಂದೇ ಒಂದು ದಿನ ಕಣ್ಣು ಕಟ್ಟಿಕೊಂಡು ಜೀವನ ನಡೆಸಿದರೆ ಕಣ್ಣಿಲ್ಲದವರ ಜೀವನ ಎಷ್ಟು ಕಷ್ಟ ಎಂಬುದು ಅರಿವಾಗಲಿದೆ. ಜನ್ಮತಃ ಅಂಧತ್ವ ಒಳಗೊಂಡಂತೆ ವಿವಿಧ ಕಾರಣದಿಂದ ಕಣ್ಣುಗಳು ಇಲ್ಲದವರಿಗೆ ಮರು ದೃಷ್ಟಿ ನೀಡಲು ಕಣ್ಣುಗಳು ತೀರಾ ಅತ್ಯಗತ್ಯ. ಹಾಗಾಗಿ ಎಲ್ಲರೂ ಅಮೂಲ್ಯವಾದ ಕಣ್ಣುಗಳ ದಾನ ಮಾಡಬೇಕು ಎಂದು ಅವರು ಕೋರಿದರು. 

ರಕ್ತದೊತ್ತಡ, ಮಧುಮೇಹ, ಮಾರಣಾಂತಿಕ ಕಾಯಿಲೆಯಿಂದ ನರಳುತ್ತಿರುವರು ಹೊರತುಪಡಿಸಿ ಆರೋಗ್ಯವಂತರು ನೇತ್ರದಾನ ಮಾಡಬಹುದು. ಕನ್ನಡಕ ಧರಿಸುತ್ತಿರುವರು ಕಣ್ಣುಗಳ ದಾನ ಮಾಡಬಹುದು.

ಮರಣವನ್ನಪ್ಪಿದ 6 ಗಂಟೆಯೊಳಗಾಗಿ ಕಣ್ಣುಗಳ ಪಡೆದುಕೊಂಡು ಸಂರಕ್ಷಿಸಿ, ಅಗತ್ಯ ಇದ್ದವರಿಗೆ ಜೋಡಣೆ ಮಾಡಲಾಗುವುದು. ನೇತ್ರದಾನ ಮಾಡಿದಂತಹವರ ಮರಣದ ಬಗ್ಗೆ ಅವರ ಕುಟುಂಬ ಸದಸ್ಯರು ಸೂಕ್ತ ಕಾಲದಲ್ಲಿ ಮಾಹಿತಿ ನೀಡಬೇಕು. ನೇತ್ರದಾನ ಮಾಡುವರು ಮೊದಲೇ ಹೆಸರು ನೋಂದಾಯಿಸಬೇಕು ಎಂದು ತಿಳಿಸಿದರು.
 
ನೇತ್ರದಾನದ ಬಗ್ಗೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಜಾಗೃತಿ ಮೂಡಬೇಕು. ಎಲ್ಲರೂ ನೇತ್ರದಾನಕ್ಕೆ ಮುಂದಾಗುವ ಮೂಲಕ ಅಂಧರ ಬಾಳಲ್ಲಿ ಮತ್ತೆ ದೃಷ್ಟಿ ತರುವಂತಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಎಸ್‌. ತ್ರಿಪುಲಾಂಬ ಅಧ್ಯಕ್ಷತೆ ವಹಿಸಿದ್ದರು. ನೇತ್ರದಾನ ಪಾಕ್ಷಿಕ ದಿನಾಚರಣೆ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ| ಸಿದ್ದಪ್ಪ ಕೋಳ್‌ ಕೂರ್‌, ಡಾ| ಮೇಘನಾ ಪಾಟೀಲ್‌, ಡಾ| ಎಸ್‌. ಮೀನಾಕ್ಷಿ ಇತರರು ಇದ್ದರು. ವೇದಿಕೆ ಕಾರ್ಯಕ್ರಮದ ಮುನ್ನ ಜಿಲ್ಲಾ ಆಸ್ಪತ್ರೆಯಿಂದ ಜಾಗೃತಿ ಜಾಥಾ ನಡೆಯಿತು 

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.