ಬೀದಿಗಿಳಿದ್ರು ಎಂಜಿ ರಸ್ತೆ ವರ್ತಕರು


Team Udayavani, Sep 8, 2018, 4:35 PM IST

dvg-1.jpg

ದಾವಣಗೆರೆ: ನಾಗರಿಕರ ಜೀವ, ವರ್ತಕರ ಜೀವನ ನಿರ್ವಹಣೆಗೆ ಸಂಕಷ್ಟ ತಂದೊಡ್ಡಿರುವ ಸ್ಮಾರ್ಟ್‌ ಸಿಟಿ ಯೋಜನೆ ಕಾಮಗಾರಿ ಸಮಸ್ಯೆಯಿಂದ ಕೂಡಲೇ ಮುಕ್ತಿ ನೀಡಬೇಕು ಎಂದು ಒತ್ತಾಯಿಸಿ ಶುಕ್ರವಾರ ಮಂಡಿಪೇಟೆ ನಿವಾಸಿಗಳು, ವ್ಯಾಪಾರಿಗಳ ಬಳಗದ ನೇತೃತ್ವದಲ್ಲಿ ಮಹಾತ್ಮಗಾಂಧಿ (ಎಂಜಿ) ರಸ್ತೆ ಸಾರ್ವಜನಿಕರು, ವ್ಯಾಪಾರಿಗಳು ಬೀದಿಗಿಳಿದಿದ್ದಾರೆ. 

ದಾವಣಗೆರೆಯಲ್ಲಿ ಸ್ಮಾರ್ಟ್‌ಸಿಟಿ ಯೋಜನೆ ಘೋಷಣೆಯಾಗಿ ಮೂರು ವರ್ಷ ಕಳೆದಿವೆ. ಮಹಾತ್ಮ ಗಾಂಧಿ (ಎಂಜಿ) ರಸ್ತೆ ಅಗೆದು ಮೂರು ತಿಂಗಳೇ ಆಗಿವೆ. ಆದರೆ, ಈವೆರಗೆ ಶೇ. 30ರಷ್ಟು ಕೆಲಸ ಸಹ ಆಗಿಲ್ಲ.

ದಿನಕ್ಕೆ 200ಕ್ಕೂ ಹೆಚ್ಚು ಜನರು ಕೆಲಸ ಮಾಡುವ ಜಾಗದಲ್ಲಿ ಇಬ್ಬರು-ಮೂವರು ಕೆಲಸ ಮಾಡುತ್ತಾರೆ. ಅವರಿಗೆ ಕಾಮಗಾರಿ ಬಗ್ಗೆ ಮಾಹಿತಿ ಇಲ್ಲ. ಇನ್ನು ಅಧಿಕಾರಿಗಳನ್ನು ಕೇಳಿದರೆ ಮೇಲಿನ ಅಧಿಕಾರಿಗಳನ್ನು ಕೇಳಬೇಕು ಎನ್ನುತ್ತಾರೆ. ಆ ಅಧಿಕಾರಿಗಳು ಕೈಗೆ ಸಿಕ್ಕುವುದೇ ಇಲ್ಲ. ಕೇಳಿದರೂ ಸಮರ್ಪಕ ಉತ್ತರ  ನೀಡುವುದಿಲ್ಲ. ಇಡೀ ಕಾಮಗಾರಿ ಯಾವಾಗ ಮುಗಿಯಬಹುದು ಎಂಬುದು ಯಾರಿಗೂ ಗೊತ್ತಿಲ್ಲ. ಅಂತಹವರು ಸ್ಮಾರ್ಟ್‌ಸಿಟಿ ಕಾಮಗಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ಆಳವಾಗಿ ರಸ್ತೆ ಅಗೆಯಲಾಗಿದ್ದು, ಮಳೆ ಬಂದು ನೀರು ನಿಂತು, ಅನೇಕರು ಗುಂಡಿಯಲ್ಲಿ ಬಿದ್ದು ಕಾಲು-ಕೈ ಮುರಿದುಕೊಂಡಿದ್ದಾರೆ. ಕೇವಲ 10 ಅಡಿ ಆಕಡೆ- ಈ ಕಡೆ ಓಡಾಡುವುದಕ್ಕೂ ಆಗದಷ್ಟು ದುಸ್ಥಿತಿ ಇದೆ. ರಸ್ತೆ ಇಲ್ಲದ ಕಾರಣಕ್ಕೆ ವ್ಯಾಪಾರ- ವಹಿವಾಟು ಸ್ಥಗಿತಗೊಂಡಿದೆ. ಹಾಗಾಗಿ ಬಾಡಿಗೆ ಕಟ್ಟಲು, ಅಂಗಡಿಯಲ್ಲಿ ಕೆಲಸ ಮಾಡುವರಿಗೆ ಸಂಬಳ ನೀಡಲು ಆಗುತ್ತಿಲ್ಲ. ನಮ್ಮ ಗೋಳು ಯಾರೂ ಕೇಳುವವರೇ ಇಲ್ಲ ಎಂದು ವ್ಯಾಪಾಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಎಂ.ಜಿ. ರಸ್ತೆ ಜೊತೆಗೆ ಮಂಡಿಪೇಟೆ, ಚಾಮರಾಜಪೇಟೆ ಭಾಗದಲ್ಲೂ ನಡೆಯುತ್ತಿರುವ ಸ್ಮಾರ್ಟ್‌ಸಿಟಿ ಕೆಲಸ ಆಮೆಗತಿಯಲ್ಲಿದೆ. ರಸ್ತೆ ಕೆಲಸ ನಡೆಯುತ್ತಿರುವ ಕಾರಣಕ್ಕೆ ಜನರು ಇತ್ತ ಕಡೆ ಸುಳಿಯುವುದೇ ಇಲ್ಲ. ಮಂಡಿಪೇಟೆ, ಎಂ.ಜಿ.ರಸ್ತೆ, ಚಾಮರಾಜಪೇಟೆ ರಸ್ತೆ ಒಳಗೊಂಡಂತೆ ಎಲ್ಲ ಕಡೆ ವ್ಯಾಪಾರ ಅಕ್ಷರಶಃ ನಿಂತೇ ಹೋಗಿದೆ. 

ಇದೇ ಸ್ಥಿತಿ ಮುಂದುವರೆದರೆ ಶಾಶ್ವತವಾಗಿಯೇ ವ್ಯಾಪಾರ ಕಳೆದುಕೊಳ್ಳುವ ಆತಂಕ ಕಾಡುತ್ತಿದೆ. ಅನೇಕ ವರ್ಷದಿಂದ ವ್ಯಾಪಾರವನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ಸಾವಿರಾರು ಜನರು ಏನು ಮಾಡಬೇಕು ಎಂಬುದೇ ಗೊತ್ತಾಗುತ್ತಿಲ್ಲ. ನಮ್ಮದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸುವಂತಾಗುತ್ತಿದೆ ಎಂದು ಪ್ರತಿಭಟನಾಕಾರರು ಬೇಸರ ವ್ಯಕ್ತಪಡಿಸಿದರು. 

ರಸ್ತೆ ಕಾಮಗಾರಿ ಬೇಗ ಮುಗಿಸದೇ ಇರುವುದನ್ನು ಪ್ರತಿಭಟಿಸಿ ಈಗ ಅಗೆದಿರುವ ಎಂ.ಜಿ. ರಸ್ತೆಯಲ್ಲೇ ಗಣೇಶನನ್ನು ಪ್ರತಿಷ್ಠಾಪಿಸಿ, ಅಧಿಕಾರಿಗಳ ಕೈಗೆ ಆಗದೇ ಹೋದರೂ ದೇವರಾದರೂ ನಮ್ಮ ಸಮಸ್ಯೆ ಬಗೆಹರಿಸುವಂತೆ ಪ್ರಾರ್ಥಿಸಿ ಭಜನೆ ಮಾಡುತ್ತೇವೆ. ಆದಷ್ಟು ಬೇಗ ಕೆಲಸ ಮುಗಿಸಬೇಕು. ಕಡೆಯ ಪಕ್ಷ ಜನರು ಓಡಾಡಲಿಕ್ಕೆ ಸಾಧ್ಯವಾಗುವಂತಾದರೂ ಅನುಕೂಲ ಮಾಡಿಕೊಡಬೇಕು. ಇಲ್ಲದಿದ್ದಲ್ಲಿ, ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸ್ಮಾರ್ಟ್‌ಸಿಟಿ ಯೋಜನೆ ಅಧಿಕಾರಿಗಳು, 2 ದಿನದಲ್ಲಿ ಜನರು ಓಡಾಡಲಿಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದ ನಂತರ ಹೋರಾಟ ಹಿಂಪಡೆಯಲಾಯಿತು. ರಾಜು ಮೌರ್ಯ, ವಿಜಯ್‌ಕುಮಾರ್‌, ಸತ್ಯನಾರಾಯಣ ಶೆಟ್ಟಿ, ಬಿ.ಎಂ. ರಾಜು, ಜಯಣ್ಣ, ಬಿ. ಸುರೇಶ್‌, ಆತ್ಮಾರಾಮ್‌, ಮೋಹನ್‌ಲಾಲ್‌ ಗಣೇಶ್‌ ಇತರರು ಇದ್ದರು.

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.