ಸೂಳೆಕೆರೆ ಸಂರಕ್ಷಣೆಗೆ ಸರ್ವೇ; ನಾಳೆ ಜಿಲ್ಲಾಧಿಕಾರಿ ಭೇಟಿ


Team Udayavani, Sep 15, 2018, 3:39 PM IST

yad-4.jpg

ದಾವಣಗೆರೆ: ಇತಿಹಾಸ ಪ್ರಸಿದ್ಧ ಸೂಳೆಕೆರೆ (ಶಾಂತಿಸಾಗರ) ಸರ್ವೇ ಕಾರ್ಯ ಪ್ರಾರಂಭಿಸುವ ಹಿನ್ನೆಲೆಯಲ್ಲಿ ಸೆ. 16 ರಂದು ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಅಲ್ಲಿಗೆ ಭೇಟಿ ನೀಡುವರು ಎಂದು ಖಡ್ಗ ಶಾಂತಿಸಾಗರ (ಸೂಳೆಕೆರೆ) ಸಂರಕ್ಷಣಾ ಮಂಡಳಿ ಅಧ್ಯಕ್ಷರಾದ ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಗುರುಬಸವ ಸ್ವಾಮೀಜಿ ತಿಳಿಸಿದ್ದಾರೆ.

11ನೇ ಶತಮಾನದಲ್ಲಿ ನಿರ್ಮಾಣಗೊಂಡಿರುವ ಐತಿಹಾಸಿಕ ಸೂಳೆಕೆರೆ ಉಳಿಸಬೇಕು. ಒತ್ತುವರಿ ತೆರವುಗೊಳಿಸಬೇಕು
ಮತ್ತು ತುಂಬಿರುವ ಹೂಳು ತೆಗೆಸುವ ಉದ್ದೇಶದಿಂದ ಮಂಡಳಿ ಕೆಲಸ ಮಾಡುತ್ತಿದೆ. ಸೂಳೆಕೆರೆ ಉಳಿಸುವ ಮೊದಲ ಹಂತದಲ್ಲಿ ಕೆರೆಯ ಸರ್ವೇ ಕಾರ್ಯ ನಡೆಯಬೇಕು. ಅದರ ಪೂರ್ವಭಾವಿಯಾಗಿ ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಭಾನುವಾರ ಸೂಳೆಕೆರೆಗೆ ಭೇಟಿ ನೀಡುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಏಷ್ಯಾ ಖಂಡದ 2ನೇ ಅತಿ ದೊಡ್ಡ ಕೆರೆಯಾಗಿರುವ ಸೂಳೆಕೆರೆ 6,650 ಎಕರೆ ವಿಸೀರ್ಣ ಹೊಂದಿದೆ. ಈಗ ಲಭ್ಯ ಇರುವ
ದಾಖಲೆ ಪ್ರಕಾರ ಕೆರೆಯ ವಿಸೀ¤ರ್ಣ 5,550 ಎಕರೆ. ಒಟ್ಟು 1 ಸಾವಿರ ಎಕರೆಯಷ್ಟು ಜಾಗ ಒತ್ತುವರಿ ಆಗಿದೆ. ಒತ್ತುವರಿ ತೆರವು ಮಾಡುವ ಮುನ್ನ ಕೆರೆಯ ವಿಸೀರ್ಣದ ಸರ್ವೇ ನಡೆಯಬೇಕಿದೆ. 

ಸರ್ವೇ ನಡೆದು, ಕೆರೆಯ ಗಡಿಗುಂಟ ಟ್ರೆಂಚ್‌ (ಗುಂಡಿ) ತೋಡುವ ಕಾರ್ಯಕ್ಕೆ ಮೊದಲ ಆದ್ಯತೆ ನೀಡಲಾಗಿದೆ. ಕೆರೆಯ ಮೂಲ ವಿಸ್ತೀರ್ಣ ಗೊತ್ತುಪಡಿಸಿಕೊಳ್ಳಲು ತೀರಾ ಅಗತ್ಯವಾಗಿರುವ ಸರ್ವೇ ಕಾರ್ಯ ಪ್ರಾರಂಭಿಸುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.

ಸೂಳೆಕೆರೆ ನಿರ್ಮಾಣವಾದ ಕಾಲದಿಂದಲೂ ಹೂಳು ತೆಗೆದಿಲ್ಲ. ಹಾಗಾಗಿ 12-13 ಅಡಿ ಆಳ ಹೂಳಿದೆ ಎಂದು ಅಂದಾಜಿಸಲಾಗಿದೆ. ಒಂದೊಮ್ಮೆ ಇಡೀ ಕೆರೆಯಲ್ಲಿನ ಹೂಳು ತೆಗೆಸಿದ್ದಲ್ಲಿ ಕೆರೆಯ ನೀರಿನ ಸಂಗ್ರಹಣಾ ಸಾಮರ್ಥ್ಯ 2 ಟಿಎಂಸಿಯಿಂದ 4.5 ಟಿಎಂಸಿ ಆಗಬಹುದು.

10 ವ್ಹೀಲ್‌ ಇರುವ 100 ಲಾರಿಗಳಲ್ಲಿ ದಿನಕ್ಕೆ 15 ಲೋಡ್‌ ಹೂಳು ಸಾಗಿಸಿದರೆ ಇಡೀ ಕೆರೆಯಲ್ಲಿನ ಹೂಳು ತೆಗೆಯಲಿಕ್ಕೆ 2 ವರ್ಷ ಬೇಕಾಗಬಹುದು ಎಂಬ ಅಂದಾಜಿದೆ. ಹೂಳು ತೆಗೆಯುವ ಮುನ್ನ ಕೆರೆಯ ಮೂಲ ವಿಸ್ತೀರ್ಣ ತಿಳಿಯುವುದು ಅತೀ ಮುಖ್ಯ. ಹಾಗಾಗಿ ಸರ್ವೇ ಕಾರ್ಯ ಪ್ರಾರಂಭಿಸಬೇಕು ಎಂಬ ಮಂಡಳಿ, ಸುತ್ತಮುತ್ತಲಿನ ಗ್ರಾಮಸ್ಥರು, ತಾಲೂಕಿನ
ಜನತೆಯ ಒತ್ತಾಯಕ್ಕೆ ಸರ್ಕಾರಕ್ಕೆ ಪೂರಕವಾಗಿ ಸ್ಪಂದಿಸಿದೆ ಎಂದು ತಿಳಿಸಿದರು. 

ಸೂಳೆಕೆರೆ ಉಳಿಸಿಕೊಳ್ಳುವ ಹಿನ್ನೆಲೆಯಲ್ಲಿ ಚನ್ನಗಿರಿ ಪಟ್ಟಣ ಒಳಗೊಂಡಂತೆ ತಾಲೂಕಿನಾದ್ಯಂತ ಜಾಗೃತಿ ಮೂಡಿಸಲಾಗುತ್ತದೆ. ಹಲವಾರು ಕಡೆ ಜಾಗೃತಿ ಜಾಥಾಗಳು ನಡೆಯುತ್ತಿವೆ. ಸರ್ವೇ ಕಾರ್ಯಕ್ಕೆ 50 ಲಕ್ಷ ಅನುದಾನ ಬೇಕು ಎಂಬುದಾಗಿ ಕರ್ನಾಟಕ ನೀರಾವರಿ ಮಂಡಳಿಯೇ ಅಧಿಕೃತ ಮಾಹಿತಿ ನೀಡಿದೆ. ಸರ್ಕಾರದಿಂದ ಹಣ ಬರುವುದು
ವಿಳಂಬವಾಗಬಹುದು ಎಂಬ ಹಿನ್ನೆಲೆಯಲ್ಲಿ ಹಲವಾರು ಕಡೆ ಜನರು ಸ್ವ ಪ್ರೇರಣೆಯಿಂದ ದೇಣಿಗೆ ನೀಡುತ್ತಿದ್ದಾರೆ. ಸರ್ವೇ ಕಾರ್ಯ ಪ್ರಾರಂಭಿಸಲು ಅಗತ್ಯವಾಗಿರುವ ದೇಣಿಗೆ ಸಂಗ್ರಹಿಸಲು ಬ್ಯಾಂಕ್‌ ಖಾತೆ ಪ್ರಾರಂಭಿಸಲಾಗಿದೆ.

ಆಸಕ್ತರು ಚನ್ನಗಿರಿಯ ಕರ್ನಾಟಕ ಬ್ಯಾಂಕ್‌ ಖಾತೆ 1712500100706701 ಐಊಖಇಓಅRಆ000071
ಮೂಲಕ ಹಣ ನೀಡಬಹುದು ಎಂದು ತಿಳಿಸಿದರು. ಚನ್ನಗಿರಿಯ ಕೇದಾರನಾಥ ಮಠದ ಶ್ರೀ ಕೇದಾರನಾಥ ಶಾಂತವೀತ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸೂಳೆಕೆರೆಯನ್ನ ಉಳಿಸಿಕೊಳ್ಳಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯ. ಅದರಿಂದ ಮುಂದಿನ ಪೀಳಿಗೆಗಳಿಗೆ ಸಾಕಷ್ಟು ಪ್ರಯೋಜನ ಆಗುತ್ತದೆ. ಆ ನಿಟ್ಟಿನಲ್ಲಿ ತಾಲೂಕಿನ ಪ್ರತಿಯೊಬ್ಬರು ಕಾರ್ಯೋನ್ಮುಖರಾಗಿದ್ದಾರೆ ಎಂದು ತಿಳಿಸಿದರು.

ಖಡ್ಗ ಶಾಂತಿಸಾಗರ(ಸೂಳೆಕೆರೆ) ಸಂರಕ್ಷಣಾ ಮಂಡಳಿಯ ಬಿ.ಆರ್‌. ರಘು, ಬಿ. ಚಂದ್ರಹಾಸ್‌, ಕೆ. ಷಣ್ಮುಖಯ್ಯ, ಎಂ.ಬಿ.
ವೀರಭದ್ರಯ್ಯ, ಎಚ್‌.ವಿ. ರವೀಂದ್ರನಾಥ್‌ ಇತರರು ಸುದ್ದಿಗೋಷ್ಠಿಯಲ್ಲಿದ್ದರು.  

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.