ಕಠಿಣ ಪರಿಶ್ರಮದಿಂದ ಗುರಿ ಸಾಧ್ಯ: ಅರುಣ್‌ ರಂಗರಾಜನ್‌

Team Udayavani, Oct 11, 2018, 3:12 PM IST

dvg-2.jpg

ಹಗರಿಬೊಮ್ಮನಹಳ್ಳಿ: ವಿದ್ಯಾರ್ಥಿ ದೆಸೆಯಲ್ಲಿ ಕನಸು ಕಾಣಬೇಕು. ಕೇವಲ ಪಠ್ಯಗಳಿಗಷ್ಟೇ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಜ್ಞಾನಾರ್ಜನೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಎಸ್ಪಿ ಅರುಣ್‌ ರಂಗರಾಜನ್‌ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪಟ್ಟಣದ ಸಮುದಾಯ ಭವನದಲ್ಲಿ ಜಿಲ್ಲಾ ಪ್ರಗತಿಪರ ಚಿಂತಕರ ಒಕ್ಕೂಟದ ವತಿಯಿಂದ ಡಾ| ಕೆ.ಶಿವರಾಮ ಕಾರಂತರ ಜನ್ಮದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಕವಿಗೋಷ್ಠಿ, ಸಾಕ್ಷಚಿತ್ರ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಗತಿಪರ ಚಿಂತನೆಗಳನ್ನು ಮೂಡಿಸುವ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಜೀವನೋತ್ಸಾಹವನ್ನು ಹೆಚ್ಚಿಸುತ್ತವೆ. ಕಠಿಣ ಪರಿಶ್ರಮದಿಂದ ಮಾತ್ರ ವಿದ್ಯಾರ್ಥಿಗಳು ಉನ್ನತವಾದ ಗುರಿ ತಲುಪಲು ಸಾಧ್ಯ. ವಿದ್ಯಾರ್ಥಿಗಳಲ್ಲಿ ಪ್ರಗತಿಪರ ಚಿಂತನೆಗಳು ಅಗತ್ಯ. ಮೌಡ್ಯ ಮತ್ತು ಕಂದಾಚಾರಗಳಿಂದ ಸಮಾಜದ ಸ್ವಾಸ್ಥ ಹದೆಗೆಡುತ್ತದೆ. ಮೆದುಳಿನ ಹಸಿವಿಗೆ ವಿದ್ಯೆ ಎಂಬುವ ಊಟವನ್ನು ಹಾಕಬೇಕು. ಪೋಷಕರು ಮಕ್ಕಳ ಸೊಂಬೇರಿತನವನ್ನು ಬಡಿದೋಡಿಸಿ
ವಿದ್ಯಾವಂತರನ್ನಾಗಿ ಮಾಡಬೇಕು. ಪೋಷಕರು ಮಕ್ಕಳ ಚಟುವಟಿಕೆಗಳ ಮೇಲೆ ನಿಗಾ ವಹಿಸಬೇಕು. ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಿಸಬೇಕು ಎಂದರು.

ಪ್ರಗತಿಪರ ಚಿಂತಕರ ಒಕ್ಕೂಟದ ಜಿಲ್ಲಾಧ್ಯಕ್ಷ ಎಸ್‌.ಬಿ.ಚಂದ್ರಶೇಖರ್‌ ಮಾತನಾಡಿ, ಖಾಸಗೀಕರಣ, ಜಾಗತೀಕರಣ ಜಗತ್ತಿನ ಎಲ್ಲಾ ನೆಲದ ಭಾಷೆಯನ್ನು ನಾಶ ಮಾಡುವ ಕಾರ್ಯಸೂಚಿಯನ್ನು ಹೊಂದಿದೆ. ಈ ಅಪಾಯದಿಂದ ತಪ್ಪಿಸಿಕೊಳ್ಳಲು ಜಾಗೃತರಾಗಬೇಕಿದೆ. ಖಾಸಗೀಕರಣದ ಬಹು ದೊಡ್ಡ ಸವಾಲುಗಳನ್ನು ಎದುರಿಸಲು ಸರಕಾರಗಳು ವಿಫಲವಾಗಿವೆ. ಜಾಗತೀಕರಣ, ಉದಾರೀಕರಣದ ನೀತಿಗಳಿಂದ ದೇಶದಲ್ಲಿ ಖಾಸಗಿ ರಂಗದ ಪ್ರಭಾವ ಹೆಚ್ಚಾಗುತ್ತಿದೆ. ದೇಶದ ಸಂಸ್ಕೃತಿ ಉಳಿಸಲು ಹಳೇ ಸಂಪ್ರದಾಯಗಳನ್ನು ಮೆಲುಕು ಹಾಕುವ ಜೊತೆಗೆ ಜಾರಿಗೊಳಿಸುವ ಅಗತ್ಯವಿದೆ. ಉನ್ನತ ಶಿಕ್ಷಣ ದುಭಾರಿಯಾಗುತ್ತಿದ್ದು ಬಡ ವಿದ್ಯಾರ್ಥಿಗಳ ಶಿಕ್ಷಣ ಅರ್ಧದಲ್ಲಿಯೇ ಕುಂಠಿತಗೊಳ್ಳುತ್ತಿರುವುದು ವಿಷಾದನೀಯ. ಖಾಸಗೀಕರಣ, ಜಾಗತೀಕರಣದ ಪ್ರಭಾವದಿಂದಾಗಿ ಶಿಕ್ಷಣ ವ್ಯಾಪಾರಿಕರಣಗೊಳ್ಳುತ್ತಿದೆ. ಗುಣಮಟ್ಟದ ಶಿಕ್ಷಣ ಕುಸಿಯುತ್ತಿದ್ದು ಮೌಲ್ಯವನ್ನು ಕಳೆದುಕೊಳ್ಳುತ್ತಿದೆ ಎಂದರು.

ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷ ಡಾ| ಅಕ್ಕಿ ಬಸವೇಶ ಮಾತನಾಡಿ, ಜಾನಪದ ಎನ್ನುವುದು ಸಂಪ್ರದಾಯ, ಸಂಸ್ಕೃತಿ ಬಿಂಬಿಸುವ ಮೂಲ. ಚಿಂತನೆ ಕುರಿತಾದ ಕಾರ್ಯಕ್ರಮಗಳ ಲಾಭವನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು. ಉಪನ್ಯಾಸ ಕೇಳುಗರ ಕೊರತೆ ಹೆಚ್ಚಾಗುತ್ತಿದ್ದು, ಆಡಂಬರ, ಫ್ಯಾಶನ್‌ ಕಾರ್ಯಕ್ರಮಗಳಿಗೆ ಸಕಾರಾತ್ಮಕ ಸ್ಪಂದನೆ ಸಿಗುತ್ತಿರುವುದು ಅವನತಿಯ ಸಂದೇಶವಾಗಿದೆ. ವಿದ್ಯಾರ್ಥಿಗಳು ನಿರಂತರ ಓದಿನತ್ತ ಚಿತ್ತಹರಿಸಬೇಕು ಎಂದರು.

ಬರಹಗಾರ ಹುರುಕಡ್ಲಿ ಶಿವಕುಮಾರ್‌ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ನಡೆದ ವಿದ್ಯಾರ್ಥಿ ಕವಿಗೋಷ್ಠಿಯಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಡೆಸಿದ ಕವನ ವಾಚನ ಗಮನ ಸೆಳೆಯಿತು. ನಂತರ ಕಾರಂತರ ಚೋಮನದುಡಿ ಕುರಿತಾದ ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು. ಪುರಸಭೆ ಸದಸ್ಯ ಡಾ|.ಎಂ.ಎ.ಸುರೇಶ್‌ಕುಮಾರ್‌, ಅಂಬಾಡಿ ನಾಗರಾಜ, ಡಾ| ಸತ್ಯನಾರಾಯಣ, ಶಿಕ್ಷಕ ಎ.ಎಂ.ಎ.ಶಿವಪ್ರಕಾಶ್‌, ಗುರುಪ್ರಸಾದ್‌, ಎಸ್‌. ಶಿವಕುಮಾರ್‌, ಶಿವಮೂರ್ತಿ ಇನ್ನಿತರರಿದ್ದರು.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.