ತಜ್ಞ ವೈದ್ಯರ ನೇಮಕಕ್ಕೆ ಕ್ರಮದ ಭರವಸೆ

Team Udayavani, Oct 26, 2018, 5:06 PM IST

dvg-5.jpg

ಚನ್ನಗಿರಿ: ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿದೆ. ಸರ್ಜನ್‌ ರನ್ನು ಹುಡುಕಿಕೊಂಡು ಜಿಲ್ಲಾ ಕೇಂದ್ರಕ್ಕೆ ಅಲೆದಾಡುವ ಪರಿಸ್ಥಿತಿಯಿದೆ. ಆದ್ದರಿಂದ ತಾಲೂಕು ಕೇಂದ್ರದಲ್ಲಿಯೇ ಸರ್ಜನ್‌ ವೈದ್ಯರನ್ನು ನೇಮಿಸುವಂತೆ ಜಿಲ್ಲಾಧಿಕಾರಿ ಬಗಾದಿ ಗೌತಮ್‌ ಅವರಿಗೆ ಸಾರ್ವಜನಿಕರು ಮನವಿ ಮಾಡಿದರು.

ಗುರುವಾರ ಪಟ್ಟಣದ ಸಾರ್ವಜನಿಕರ ಆಸ್ಪತ್ರೆಗೆ ಜಿಲ್ಲಾಧಿಕಾರಿ ಬಗಾದಿ ಗೌತಮ್‌ ದಿಢೀರ್‌ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ತಮಗೆ ಆಗುತ್ತಿರುವ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಬಳಿ ತೋಡಿಕೊಂಡರು. ಜಿಲ್ಲಾಧಿಕಾರಿ ಬಗಾದಿ ಗೌತಮ್‌, ಆಸ್ಪತ್ರೆಯಲ್ಲಿನ ಪ್ರತಿಯೊಂದು ವಾರ್ಡ್‌ಗೆ ತೆರಳಿ ರೋಗಿಗಳ ಆರೋಗ್ಯ ಹಾಗೂ ಆಸ್ಪತ್ರೆಯಲ್ಲಿನ ಸೌಲಭ್ಯ, ಸಮಸ್ಯೆಗಳ ಬಗ್ಗೆ ವಿಚಾರಿಸಿದರು.

ಈ ವೇಳೆ ಜಿಲ್ಲಾಧಿಕಾರಿ ಬಗಾದಿ ಗೌತಮ್‌ ಮಾತನಾಡಿ, ದಾವಣಗೆರೆ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಆಗಮಿಸಿದ ನಂತರ ಪ್ರಥಮ ಬಾರಿಗೆ ಚನ್ನಗಿರಿ ಸಾರ್ವಜನಿಕರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಸದ್ಯಕ್ಕೆ ಆಸ್ಪತ್ರೆಯಲ್ಲಿ ಯಾವುದೇ ಸಮಸ್ಯೆಗಳು ಕಂಡು ಬಂದಿಲ್ಲ. ವೈದ್ಯರ ಕೊರತೆ ಬಗ್ಗೆ ಸಾರ್ವಜನಿಕರು ತಿಳಿಸಿದ್ದಾರೆ. ವೈದ್ಯರನ್ನು ನೇಮಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಶಾಂತಿಸಾಗರ (ಸೂಳೆಕೆರೆ) ಕೆರೆ ಒತ್ತುವರಿಯಾಗಿದೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. ನಮ್ಮಲಿರುವಂತಹ ದಾಖಲೆಗಳ ಪ್ರಕಾರ ಒತ್ತುವರಿಯಾಗಿರುವುದು ಕಂಡುಬರುತ್ತಿಲ್ಲ, 1965ರಲ್ಲಿ ಸೂಳೆಕೆರೆಯ ಸರ್ವೇ ಆಗಿದ್ದು, ಕೆರೆಯ ವಿಸ್ತೀರ್ಣ 5447 ಎಕರೆ 10 ಗುಂಟೆ ಎಂದಿದೆ. ಕೆರೆ 2.6
ಟಿಎಂಸಿ ಅಡಿ ಸಾಮರ್ಥ್ಯ ಹೊಂದಿದೆ. ಸದ್ಯ ಕೆರೆಯಲ್ಲಿ 1.7 ಟಿಎಂಸಿ ನೀರು ಸಂಗ್ರಹವಾಗಿದೆ ಎಂದು ಮಾಹಿತಿ ನೀಡಿದರು.

ಕೆರೆ ಒತ್ತುವರಿಯಾಗಿರುವ ದಾಖಲಾತಿಗಳಿದ್ದವರು ನೀಡಿದರೆ ಪರಿಶೀಲನೆ ನಡೆಸುವುದಾಗಿ ತಿಳಿಸಿದರು. ವಾಟ್ಸ್‌ ಆ್ಯಪ್‌, ಫೇಸ್‌ಬುಕ್‌ ಮೊದಲಾದ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಸೂಳೆಕೆರೆಯ ವಿಸ್ತಿರ್ಣ 6500 ಎಕರೆ ಎಂದೂ ಹಾಗೂ 1500 ಎಕರೆ ಒತ್ತುವರಿಯಾಗಿದೆ ಎಂದು ಸುಳ್ಳು
ಮಾಹಿತಿ ಹರಿಬಿಟ್ಟಿದ್ದಾರೆ ಎಂದರು. ಜಿಪಂ ಕಾರ್ಯನಿರ್ವಹಣಾಧಿಕಾರಿ ಅಶ್ವತಿ, ತಹಶೀಲ್ದಾರ್‌ ನಾಗರಾಜ್‌, ಇತರ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.