ವಿವಿಧ ಅಭಿವೃದ್ಧಿ ಕಾಮಗಾರಿಗೆ ಎಸ್‌ಎಸ್‌ ಚಾಲನೆ


Team Udayavani, Feb 5, 2019, 6:15 AM IST

dvg-4.jpg

ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ಸೋಮವಾರ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಸುಮಾರು 2.50 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಶಿರಮಗೊಂಡನಹಳ್ಳಿ, ಬಿಸಲೇರಿ, ನಾಗನೂರು, ಹದಡಿ, ಕುಕ್ಕವಾಡ ಮತ್ತು ಬಲ್ಲೂರು ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 10-11 ವರ್ಷದಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸ ಮಾಡಲಾಗುತ್ತಿದೆ. ಈಗ 2.5 ಕೋಟಿ ರೂ. ಅನುದಾನದಲ್ಲಿ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಸ್ಥಳೀಯರು ಕಾಮಗಾರಿಗಳು ಗುಣಮಟ್ಟದಿಂದ ಕೂಡಿವೆ ಎಂಬುದನ್ನು ಪರಿಶೀಲಿಸಬೇಕು. ಕಳಪೆ ಎಂದು ಕಂಡುಬಂದರೆ ನನ್ನ ಗಮನಕ್ಕೆ ತರಬೇಕು ಎಂದು ತಿಳಿಸಿದರು.

ಶಿರಮಗೊಂಡನಹಳ್ಳಿಯಲ್ಲಿ 55 ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ, ಒಳಚರಂಡಿ, ನಾಗನೂರುನಲ್ಲಿ 10 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿ, ಬಿಸಲೇರಿಯಲ್ಲಿ 21 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿ, ಹದಡಿಯಲ್ಲಿ ಹಾದು ಹೋಗಿರುವ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ 80 ಲಕ್ಷ, ಕುಕ್ಕವಾಡದಲ್ಲಿ 18 ಲಕ್ಷ ವೆಚ್ಚದಲ್ಲಿ ಸಿ.ಸಿ. ಚರಂಡಿ ಹಾಗೂ ಬಲ್ಲೂರು ಗ್ರಾಮ ಮತ್ತು ಕ್ಯಾಂಪ್‌ಗ್ಳಲ್ಲಿ ಒಟ್ಟು 22 ಲಕ್ಷ ವೆಚ್ಚದಲ್ಲಿ ಸಿ.ಸಿ. ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಶೀಘ್ರ ಇನ್ನಷ್ಟು ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್‌ ಸದಸ್ಯರಾದ ಜಿ.ಸಿ. ನಿಂಗಪ್ಪ ಮಾತನಾಡಿ, ಶಾಸಕ ಶಾಮನೂರು ಶಿವಶಂಕರಪ್ಪನವರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅವರಿಗೆ ಬಡವರ ಮೇಲೆ ಅಪಾರ ಕಳಕಳಿ ಇರುವ ಕಾರಣಕ್ಕಾಗಿಯೇ ಗ್ರಾಮೀಣ ಭಾಗದಲ್ಲಿ ಬಡವರ ಪರ ಅನೇಕ ಯೋಜನೆಗಳನ್ನು ನೀಡುತ್ತಾ ಬಂದಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯತ್‌ ಸದಸ್ಯ ಕೆ.ಎಚ್. ಓಬಳೇಶಪ್ಪ, ದಾವಣಗೆರೆ ಎಪಿಎಂಸಿ ಅಧ್ಯಕ್ಷ ಬಿ.ಕೆ. ಈರಣ್ಣ, ನಿರ್ದೇಶಕ ಎಂ.ಬಿ. ಹಾಲಪ್ಪ, ತಾಲೂಕು ಪಂಚಾಯತ್‌ ಸದಸ್ಯರಾದ ಮಂಜಣ್ಣ, ಲಕ್ಷ್ಮಿದೇವಿ ಪ್ರಕಾಶ್‌, ಹದಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಗಿರಿಜಮ್ಮ ಹಾಲಪ್ಪ, ಉಪಾಧ್ಯಕ್ಷೆ ಲಲಿತಮ್ಮ ಮಹಾಂತೇಶ್‌, ಸದಸ್ಯರಾದ ಹದಡಿ ರವಿ, ಮಲ್ಲೇಶಪ್ಪ, ಬಸವನಗೌಡ್ರು, ಕುಕ್ಕವಾಡ ಗ್ರಾಮ ಪಂಚಾಯತಿ ಅಧ್ಯಕ್ಷೆ ಯಶೋಧಮ್ಮ, ಮುಖಂಡರಾದ ಶಿರಮಗೊಂಡನಹಳ್ಳಿ ರುದ್ರೇಶ್‌, ಲಿಂಗೇಶ್‌, ಸುರೇಶ್‌ ನಾಗರಸನಹಳ್ಳಿ, ಅಂಜಿನಪ್ಪ, ನಾಗವೇಣಿ ವಿಜಯ್‌ಕುಮಾರ್‌, ಚಂದ್ರಪ್ಪ, ಮಾಲತೇಶ್‌, ಎ.ಕೆ. ನೀಲಪ್ಪ, ವೀಣಾ ವಿಜಯ್‌ ಕುಮಾರ್‌, ಬಸವರಾಜಪ್ಪ, ಎಲ್‌. ಬಸವರಾಜ್‌, ಕಬ್ಬೇರ್‌ ಜಯಪ್ಪ, ಗುಡ್ಡಪ್ಪ, ಇಂಡಿ ಉಜ್ಜಪ್ಪ, ಎ.ಕೆ. ಚಂದ್ರಪ್ಪ, ಮಲ್ಲಿಕಾರ್ಜುನ್‌ ಇತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.