ಆಟೋ ಚಾಲಕರಿಗೆ ಚೆಲ್ಲಾಟ; ಮಕ್ಕಳಿಗೆ ಪ್ರಾಣಸಂಕಟ


Team Udayavani, Feb 14, 2019, 6:06 AM IST

dvg-3.jpg

ದಾವಣಗೆರೆ: ನಗರದಲ್ಲಿ ಪ್ರಯಾಣಿಕರ ಕರೆ ದೊಯ್ಯುವ ಆಟೋ ರಿಕ್ಷಾದಲ್ಲಿ ಪ್ರತಿನಿತ್ಯ ಹಿಗ್ಗಾಮುಗ್ಗಾ ಶಾಲಾ ಮಕ್ಕಳನ್ನು ತುಂಬಿಕೊಂಡು ಅತಿವೇಗದಿಂದ ರಾಜಾರೋಷವಾಗಿ ಓಡಿಸುತ್ತಿದ್ದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಕ್ಕಳ ಸುರಕ್ಷತೆಯ ಬಗ್ಗೆ ಕಿಂಚಿತ್ತೂ ಗಮನವನ್ನೇ ಹರಿಸುತ್ತಿಲ್ಲ.

ಒಂದೂವರೆ ವರ್ಷದ ಹಿಂದೆ ಮಿತಿಮೀರಿದ ಸಂಖ್ಯೆಯಲ್ಲಿ ಶಾಲೆಗೆ ಮಕ್ಕಳನ್ನು ಕರೆದೊಯ್ಯುವ ಸಂದರ್ಭದಲ್ಲಿ ಆಟೋರಿಕ್ಷಾ ಅಪಘಾತ ಸಂಭವಿಸಿ, ಮಗುವೊಂದು ಸಾವನ್ನಪ್ಪಿದ ಘಟನೆ ಇನ್ನೂ ಪಿ.ಜೆ. ಬಡಾವಣೆ ನಿವಾಸಿಗಳ ಮನದಲ್ಲಿ ಮಾಸಿಲ್ಲ. ಈ ರೀತಿ ಘಟನೆ ಸಂಭವಿಸಿದ ಕೆಲ ದಿನಗಳವರೆಗೆ ಮಾತ್ರ ಕಾನೂನು, ನಿಯಮ ಬಿಗಿಭದ್ರಗೊಳಿಸುವ ಸಂಬಂಧಪಟ್ಟ ಅಧಿಕಾರಿಗಳು ನಂತರ ಮತ್ಯಾವ ಕ್ರಮಕ್ಕೂ ಮುಂದಾಗುವುದೇ ಇಲ್ಲ. ಇಂದಿಗೂ
ಸಂಬಂಧಪಟ್ಟ ಅಧಿಕಾರಿವರ್ಗ ಜಾಣಕುರುಡು ಪ್ರದರ್ಶಿಸುತ್ತಿದ್ದಾರೆ. ಸ್ಮಾರ್ಟ್‌ ಸಿಟಿಯಾಗುತ್ತಿರುವ ದಾವಣಗೆರೆ ಯಲ್ಲಿ ಈಗ ಎಲ್ಲೆಂದರಲ್ಲಿ ಕಾನ್ವೆಂಟ್‌ಗಳು, ಖಾಸಗಿ ಶಾಲೆಗಳು, ಶಿಕ್ಷಣ ಸಂಸ್ಥೆಗಳು ಹುಟ್ಟಿ ಕೊಳ್ಳುತ್ತಿವೆ. ಪ್ರತಿನಿತ್ಯ ಸಾವಿರಾರು ಮಕ್ಕಳು ಬಸ್‌, ಸ್ಕೂಲ್‌ ವ್ಯಾನ್‌ಗಳಲ್ಲಿ ತೆರಳುತ್ತಾರೆ. ಅದೇ ರೀತಿ ಶಾಲಾ ವಾಹನಗಳ ಪೈಪೋಟಿಗನುಗುಣವಾಗಿ ಪ್ರಯಾಣಿಕರ ಆಟೋಗಳು ಸ್ಪರ್ಧೆಗೆ ಇಳಿದಿವೆ.

ಹಾಗೆ ಸ್ಪರ್ಧೆಗಿಳಿದಿರುವ ಕೆಲವಾರು ಆಟೋರಿಕ್ಷಾ ಚಾಲಕರು 10-12 ಮಕ್ಕಳನ್ನು ಇಕ್ಕಟ್ಟಿನಲ್ಲಿ ನಿಲ್ಲಿಸಿಕೊಂಡು ಕರೆದೊಯ್ಯುತ್ತಿದ್ದಾರೆ. ಮುಂಭಾಗದ ಸೀಟ್‌ನಲ್ಲಿ, ಬಲಭಾಗದ ಬಂಪರ್‌ನಲ್ಲಿ ಬ್ಯಾಗ್‌, ಊಟದ ಬಾಕ್ಸ್‌ ಇಡಲು ಆಗದಂತ ಇಕ್ಕಟ್ಟಿನಲ್ಲಿ ಮಕ್ಕಳನ್ನು ನಿತ್ಯ ತುಂಬಿಕೊಂಡು ಕರೆದೊಯ್ಯುತ್ತಿದ್ದರೂ ಪೊಲೀಸ್‌, ಆರ್‌ಟಿಒ ಅಧಿಕಾರಿಗಳಿಗೆ ಮಾತ್ರ ಈ ದೃಶ್ಯ ಕಾಣಿಸದಿರುವುದು ಸೋಜಿಗದ ಸಂಗತಿ.
 
ಆಟೋಗಳಲ್ಲಿ ಪ್ರತಿನಿತ್ಯ ನಿಗದಿತ ಸೀಟಿಗಿಂತ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗುತ್ತಿರುವ ಬಗ್ಗೆ ಸಂಪೂರ್ಣ ಮಾಹಿತಿ ಪೋಷಕರಿಗೆ ಇದ್ದರೂ ಸಹ ಮಕ್ಕಳ ಬಗ್ಗೆ ಜಾಗ್ರತೆ ವಹಿಸುತ್ತಿಲ್ಲ. ಆಟೋರಿಕ್ಷಾ ಸೀಟ್‌ ಕ್ಯಾಪಾಸಿಟಿಗೆ ತಕ್ಕಷ್ಟು ಮಕ್ಕಳನ್ನು ಮಾತ್ರ ಕರೆದೊಯ್ಯಿರಿ ಎಂದು ಹೇಳುವುದಿಲ್ಲ. ಬದಲಾಗಿ ಮಕ್ಕಳು ಆಟೋದಲ್ಲಿ ಕೂರಲು ಜಾಗವಿಲ್ಲದೇ ಅಳುತ್ತಾ ಹೊರಟರೂ, ಮಕ್ಕಳಿಗೆ ಹಾಯ್‌….ಬಾಯ್‌…. ಟಾಟಾ… ಹೇಳಿ ಕಳಿಸುವವರೇ ಹೆಚ್ಚು.

ಆಟೋಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಮಕ್ಕಳನ್ನು ತುಂಬಿಕೊಂಡು ಬಂದರೂ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ವ್ಯವಸ್ಥಾಪಕರು, ಅಧ್ಯಕ್ಷರು ಕನಿಷ್ಠ ಪಕ್ಷ ಸೌಜನ್ಯಕ್ಕಾದರೂ ಆಟೋ ಚಾಲಕರನ್ನು ಕರೆದು ಬುದ್ಧಿ ಮಾತು ಹೇಳುತ್ತಿಲ್ಲ. ಬದಲಾಗಿ ನಮಗೇಕೆ ಎಂಬ ನಿರ್ಲಕ್ಷ್ಯಭಾವನೆ ತೋರುತ್ತಿರುವುದು ನಿಜಕ್ಕೂ ದುರಂತ.
 
ಬಹುತೇಕ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಕ್ಕಳನ್ನು ಕರೆದೊಯ್ಯುವ ಬಡಾವಣೆಗಳಲ್ಲಿ ರಸ್ತೆ ಅಗಲೀಕರಣ ಆಗದೇ ಕಿರಿದಾದ ರಸ್ತೆ ಇವೆ. ಅಲ್ಲದೇ ಎಲ್ಲೆಂದರಲ್ಲಿ ಗುಂಡಿಗಳು, ಅವೈಜ್ಞಾನಿಕ ಹಂಪ್ಸ್‌ಗಳು ಮಿತಿಮೀರಿವೆ. ಇಂತಹ ರಸ್ತೆಗಳಲ್ಲಿ ಚಾಲಕರು ಹೆಚ್ಚೆಚ್ಚು ಮಕ್ಕಳನ್ನು ತುಂಬಿಕೊಂಡು ಮನಬಂದಂತೆ ಆಟೋ ಚಾಲನೆ ಮಾಡಿಕೊಂಡು ಹೋಗುವುದು ಸಾಮಾನ್ಯವಾಗಿದೆ. ಆದರೂ ಇಂತಹ ಸಂಚಾರಕ್ಕೆ ಸೂಕ್ತ ಕಡಿವಾಣದ ಪ್ರತಿಕ್ರಿಯೆ ಸಂಬಂಧಪಟ್ಟ ಅಧಿಕಾರಿಗಳಿಂದ ದೊರೆಯುತ್ತಿಲ್ಲ.

ಅಪಘಾತ ಸಂಭವಿಸಿ ಒಂದು ವೇಳೆ ಮಕ್ಕಳ ಪ್ರಾಣಕ್ಕೆ ಕುತ್ತು ಬಂದರೆ ಪುನಃ ಆ ಮಕ್ಕಳ ಪ್ರಾಣವನ್ನು ಎಷ್ಟೇ ಹಣ, ಸಂಪತ್ತು ನೀಡಿದರೂ ಮರಳಿ ತರಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ನಿಗದಿತ ಪ್ರಮಾಣಕ್ಕಿಂತಲೂ ಹೆಚ್ಚು ಶಾಲಾ ಮಕ್ಕಳನ್ನು ತುಂಬಿಕೊಂಡು ಹೋಗುವ ಚಾಲಕರ ಬಗ್ಗೆ ನಿರ್ಲಕ್ಷ್ಯವಹಿಸಿದೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಆದೇಶ, ಕಾನೂನುಕ್ರಮ ಜರುಗಿಸಬೇಕು ಎನ್ನುತ್ತಾರೆ ಸಾರ್ವಜನಿಕರು.

ಸೂಕ್ತ ಕಾನೂನು ಕ್ರಮ
3+1 ಪ್ರಯಾಣಿಕರ ಆಟೋದಲ್ಲಿ ಹೆಚ್ಚೆಂದರೆ ಐದಾರು ಮಕ್ಕಳನ್ನು ಕರೆದೊಯ್ಯಬಹುದು. ಆದರೆ, 10 ರಿಂದ 12 ಮಕ್ಕಳನ್ನು ಕಣ್‌ತಪ್ಪಿಸಿ ಕರೆದೊಯ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ನಮ್ಮ ಗಮನಕ್ಕೆ ಬಂದಂತಹ ಎಲ್ಲಾ ಕಡೆ ಸಾಕಷ್ಟು ಕೇಸ್‌ಗಳನ್ನು ದಾಖಲು ಮಾಡಿ ಕ್ರಮ ಕೈಗೊಂಡಿದ್ದೇವೆ. ಜೊತೆಗೆ ರಸ್ತೆ ಸುರಕ್ಷತಾ ಸಪ್ತಾಹದಂತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಶಾಲಾ ಪ್ರಾಂಶುಪಾಲರು, ಆಟೋ ಚಾಲಕರಿಗೆ ಮಕ್ಕಳ ರಕ್ಷಣೆಗೆ ಅಗತ್ಯ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಇಲಾಖೆ ಜೊತೆಗೆ ಪೋಷಕರು ಕೂಡ ತಮ್ಮ ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕು. ಸದ್ಯಕ್ಕೆ ನಮ್ಮಲ್ಲಿ ಆಟೋಗಳ ತಪಾಸಣೆ ಮಾಡಲು ಸಿಬ್ಬಂದಿ ಕೊರತೆ ಇದೆ. ಇರುವ ಸಿಬ್ಬಂದಿಯೂ ರೂಟ್‌ ಸರ್ವೇಯಲ್ಲಿ ಬ್ಯುಸಿ ಇದ್ದಾರೆ. ಹಾಗಾಗಿ ಇನ್ನೊಂದು ವಾರದಲ್ಲಿ ಸೂಕ್ತ ತಪಾಸಣೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.
 ಲಕ್ಷ್ಮೀಕಾಂತ್‌ ಡಿ. ನಾಲವಾರ್‌, ಪ್ರಾದೇಶಿಕ ಸಾರಿಗೆ ಅಧಿಕಾರಿ

ಪೋಷಕರು ಎಚ್ಚರ ವಹಿಸಲಿ ಪ್ರಯಾಣಿಕರ ಆಟೋಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಕರೆದೊಯ್ಯದಂತೆ ಈಗಾಗಾಲೇ ಆಟೋ ಚಾಲಕರಿಗೆ ಜಾಗೃತಿ ಮೂಡಿಸಿದ್ದೇವೆ. ಜೊತೆಗೆ ಕೇಸ್‌ಗಳನ್ನು ಕೂಡ ದಾಖಲು ಮಾಡಿ ದಂಡ ವಿಧಿಸಿದ್ದೇವೆ. ಈ ಬಗ್ಗೆ ಪ್ರತಿಯೊಬ್ಬ ಪೋಷಕರು ಜಾಗೃತರಾಗಬೇಕು. ಪ್ರಯಾಣಿಕರ ಆಟೋಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗದಂತೆ ಎಚ್ಚರ ವಹಿಸಬೇಕು. ಮಕ್ಕಳು ಶಾಲೆಗಳಿಗೆ ಸುಸ್ಥಿತಿಯಲ್ಲಿ ಹೋಗಿಬರುವ ವ್ಯವಸ್ಥೆ ಕಲ್ಪಿಸಬೇಕು.
 ಆರ್‌. ಚೇತನ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ.

ವಿಜಯ್‌ ಕೆಂಗಲಹಳ್ಳಿ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.