ಪಿಒಪಿ ಮೂರ್ತಿ ನಿಷೇಧಕ್ಕೆ ಸಹಮತ

Team Udayavani, Aug 20, 2017, 9:57 AM IST

hubli 1.jpg

ಹುಬ್ಬಳ್ಳಿ: ಪ್ಲಾಸ್ಟರ್‌ ಆಫ್ ಪ್ಯಾರಿಸ್‌(ಪಿಒಪಿ) ಗಣೇಶಮೂರ್ತಿಗಳ ನಿಷೇಧಕ್ಕೆ ಸಹಮತ ಹಾಗೂ ಹಬ್ಬವನ್ನು ಶಾಂತಿ-ಸೌಹಾರ್ದದಿಂದ ಆಚರಿಸಲು ಸೌಹಾರ್ದ ಸಭೆಯಲ್ಲಿ ತೀರ್ಮಾನಿಸಲಾಯಿತು. ಗಣೇಶ ಹಾಗೂ ಬಕ್ರೀದ್‌ ಹಬ್ಬಗಳ
ಅಂಗವಾಗಿ ಮಹಾನಗರ ಕಮಿಷನರೇಟ್‌ ನಿಂದ ಶನಿವಾರ ಸಂಜೆ ಇಲ್ಲಿನ ಕಾರವಾರ ರಸ್ತೆಯ ಹಳೆ ಸಿಎಆರ್‌ ಮೈದಾನದಲ್ಲಿ ಆಯೋಜಿಸಿದ್ದ ಸೌಹಾರ್ದ ಸಭೆಯಲ್ಲಿ ಮಠಾಧೀಶರು, ಧರ್ಮಗುರುಗಳು, ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು, ಸಂಘ-ಸಂಸ್ಥೆಗಳವರು ಹಾಗೂ ಗಣ್ಯರು ಪಾಲ್ಗೊಂಡಿದ್ದರು. ಆರೋಗ್ಯ ಹಾಗೂ ಪರಿಸರ
ಸಂರಕ್ಷಣೆ ದೃಷ್ಟಿಯಿಂದ ಪಿಒಪಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಬೇಡ ಎಂಬುದರ ಬಗ್ಗೆ ಬಹುತೇಕರು ಅನಿಸಿಕೆ
ವ್ಯಕ್ತಪಡಿಸಿದರು. ಹಬ್ಬದ ಸಂದರ್ಭಗಳಲ್ಲಿ ಸಮಾಜದ ಶಾಂತಿ-ಸಾಮರಸ್ಯ ಕದಡುವ ಸಮಾಜಘಾತುಕ ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಹಾಗೂ ಎಲ್ಲ ಧರ್ಮೀಯರು ಸಾಮರಸ್ಯದಿಂದ ಹಬ್ಬದ ಆಚರಣೆಯಲ್ಲಿ ತೊಡಗಬೇಕು ಎಂಬುದು ಧಾರ್ಮಿಕ ಗುರುಗಳ ಆಶಯವಾಗಿತ್ತು.

ಮಣ್ಣಿನ ಮೂರ್ತಿ ಮಹತ್ವ: ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಮಣ್ಣಿನ ಮೂರ್ತಿ ಪೂಜೆಗೆ ಮಹತ್ವವಿದೆ. ಬದಲಾದ ಕಾಲಘಟ್ಟದಲ್ಲಿ ಮೂಲ ಉದ್ದೇಶ ನಶಿಸಿ ಹಬ್ಬಗಳು ಕೇವಲ ಮನರಂಜನೆಗೆ ಸೀಮಿತವಾಗುತ್ತಿವೆ. ನಮ್ಮ ಪುರಾತನ ಸಂಪ್ರದಾಯದಂತೆ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ ಶ್ರೇಷ್ಠವಾಗಿದೆ ಎಂದರು. ಉತ್ತಮ ಆರೋಗ್ಯ, ಒಳ್ಳೆಯ ಪರಿಸರದ ದೃಷ್ಟಿಯಿಂದ ಪಿಒಪಿ ಮೂರ್ತಿಗಳ ಪ್ರತಿಷ್ಠಾಪನೆ ಕೈಬಿಡಬೇಕು. ಜಿಲ್ಲಾಡಳಿತ ಕೈಗೊಂಡಿರುವ ಕ್ರಮಕ್ಕೆ ಸಾಕಷ್ಟು ವಿರೋಧಗಳು ವ್ಯಕ್ತವಾಗಿವೆ. ಆದರೆ ಕಾನೂನು ಹಾಗೂ ಆರೋಗ್ಯದ ದೃಷ್ಟಿಯಿಂದ ಪಿಒಪಿ ಒಳ್ಳೆಯದಲ್ಲ. ಇದು ಆಂದೋಲನದ ರೂಪ ಪಡೆದುಕೊಂಡು ಮುಂದಿನ ಹಬ್ಬದ ವೇಳೆಗೆ ಸಂಪೂರ್ಣವಾಗಿ ಪಿಒಪಿ ಮೂರ್ತಿಗಳ ಪ್ರತಿಷ್ಠಾಪನೆ ಕೈಬಿಡಬೇಕು. ಎಲ್ಲರೂ ಸಹಕಾರದಿಂದ ಹಬ್ಬ ಆಚರಿಸೋಣ. ಯಾವುದೇ ಅಹಿಕರ ಘಟನೆಗಳಿಗೆ ಕಿವಿಗೊಡದೆ ಸಂಭ್ರಮದಿಂದ ಹಬ್ಬ ಆಚರಿಸುವಂತೆ ಮನವಿ ಮಾಡಿದರು.
ಜಿಲ್ಲಾಧಿಕಾರಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ ಮಾತನಾಡಿ, ಶಾಂತಿಯುತ ಹಾಗೂ ಸಂಭ್ರಮದ ಆಚರಣೆಗೆ
ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಸದಾ ಸಹಕಾರ ನೀಡುತ್ತದೆ. ಶಾಂತಿಯಿಂದ ಹಬ್ಬ ಆಚರಿಸಿ ನಿಮ್ಮ ರಕ್ಷಣೆಗೆ ನಾವಿದ್ದೇವೆ. ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುವುದರಿಂದ ಯಾವುದೇ ಸಮಸ್ಯೆಯುಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ವಿಶೇಷ ವ್ಯವಸ್ಥೆ ಕಲ್ಪಿಸುವಂತೆ ಗಣೇಶ ಉತ್ಸವ ಸಮಿತಿ
ಪ್ರಮುಖರಿಗೆ ಸೂಚಿಸಿದರು. ಮೂರುಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ
ಮಾತನಾಡಿ, ಕೋಮು ಸೌಹಾರ್ದಕ್ಕೆ ಹು-ಧಾ ಜನತೆ ಹೆಚ್ಚು ಒತ್ತು ನೀಡುತ್ತಾರೆ. ಎಲ್ಲಾ ಹಬ್ಬಗಳನ್ನು ಎಲ್ಲಾ ಧರ್ಮೀಯರು ಆಚರಣೆ ಮಾಡುವ ಸಂದರ್ಭದಲ್ಲಿ ಶಾಂತಿಗೆ ಭಂಗ ತರುವಂತ ಕೆಲಸಗಳು ನಡೆಯುವುದಿಲ್ಲ. ರಾಜ್ಯಕ್ಕೆ ಹೆಸರುವಾಸಿಯಾಗಿರುವ ಇಲ್ಲಿನ ಗಣೇಶ ಹಬ್ಬವನ್ನು ಎಲ್ಲರೂ ಸೇರಿಕೊಂಡು ಶಾಂತಿ ಸಂಭ್ರಮದಿಂದ ಆಚರಿಸೋಣ
ಎಂದರು. ಧರ್ಮಗುರುಗಳಾದ ತಾಜುದ್ಧೀನ್‌ ಖಾದ್ರಿ, ಗ್ಯಾನಿ ಸಿಂಗ್‌, ಎಸ್‌.ಎಚ್‌. ಉಳ್ಳಾಗಡ್ಡಿ, ಪಾಲಿಕೆ ಆಯುಕ್ತ ಸಿದ್ಧಲಿಂಗಯ್ಯ ಹಿರೇಮಠ, ತಹಶೀàಲ್ದಾರ ಶಶಿಧರ ಮಾಡ್ಯಾಳ, ಮಾಜಿ ಶಾಸಕರಾದ ವೀರಭದ್ರಪ್ಪ ಹಾಲಹರವಿ, ಇಸ್ಮಾಯಿಲ್‌ಸಾಬ್‌ ಕಾಲೆಬುಡ್ಡೆ, ಮುಖಂಡರಾದ ನೀಲಕಂಠ ಜಡಿ, ಮಹೇಂದ್ರ ಸಿಂ , ಪಿತಾಂಬ್ರಪ್ಪ ಬಿಳಾರ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಮುಖಂಡರು ಸೇರಿದಂತೆ ವಿವಿಧ ಸಮಾಜದ ಪ್ರಮುಖರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.