ಹುಬ್ಬಳ್ಳಿ: ಭೀಕರ ಅಪಘಾತ; ಬೈಕ್ ಸವಾರ ಸಜೀವ ದಹನ!
Team Udayavani, Oct 31, 2017, 9:39 AM IST
ಹುಬ್ಬಳ್ಳಿ: ನಗರದ ಹೊರವಲಯದ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಜೀವ ದಹನಗೊಂಡಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.
ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಲಾರಿ ಮತ್ತು ಬೈಕ್ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು ಈ ವೇಳೆ ಬೈಕ್ ಲಾರಿಯ ಅಡಿಗೆ ನುಸುಳಿದ್ದು ಟ್ಯಾಂಕ್ನಿಂದ ಪೆಟ್ರೋಲ್ ಸೋರಿಕೆಯಾಗಿ ಕಿಡಿ ಹೊತ್ತಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೈಕ್ ಮತ್ತು ಮುಂಬದಿ ಸವಾರ ದಹನಗೊಂಡಿದ್ದಾರೆ ಎಂದು ವರದಿಯಾಗಿದೆ.
ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬಂದಿಗಳು ಬೆಂಕಿ ನಂದಿಸಿದ್ದಾರೆ.ಗಾಯಾಳುವನ್ನುಕಿಮ್ಸ್ ಆಸ್ಪತ್ರೆಗೆ ದಾಖಲಿಸಿಲಾಗಿದೆ.ಉತ್ತರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲಾರಿಯಲ್ಲಿದ್ದ ಕ್ಲೀನರ್ ಮತ್ತು ಚಾಲಕ ನಾಪತ್ತೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ