ಎನ್‌ಪಿಎಸ್‌ ರದ್ದುಗೊಳಿಸಲು ಆಗ್ರಹಿಸಿ ಪ್ರತಿಭಟನೆ


Team Udayavani, Jan 19, 2018, 12:50 PM IST

h6-npa.jpg

ಹುಬ್ಬಳ್ಳಿ: ನೂತನ ಪಿಂಚಣಿ ಯೋಜನೆ(ಎನ್‌ಪಿಎಸ್‌) ರದ್ದುಗೊಳಿಸ ಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಮಿನಿ  ವಿಧಾನಸೌಧದ ಎದುರು ಗುರುವಾರ ಸಾಂಕೇತಿಕ ಪ್ರತಿಭಟನೆ ನಡೆಯಿತು. 2004ರಲ್ಲಿ ಅವೈಜ್ಞಾನಿಕ ಹಾಗೂ ಅಭದ್ರತೆಯಿಂದ ಕೂಡಿದ ಎನ್‌ಪಿಎಸ್‌ ಯೋಜನೆ ಜಾರಿಗೊಳಿಸಲಾಯಿತು. 

2006ರಲ್ಲಿ ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಯಿತು. ಆದರೆ, ಇದರಲ್ಲಿ ಪಿಂಚಣಿದಾರರಿಗೆ ಕೆಲವು  ನ್ಯೂನತೆಗಳಿವೆ. ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ 1.8 ಲಕ್ಷ ಸರಕಾರಿ ನೌಕರರು ಪಿಂಚಣಿ ಹಾಗೂ ಇನ್ನಿತರ ಸೌಲಭ್ಯಗಳಿಂದ ವಂಚಿತರಾಗಲಿದ್ದಾರೆ.  ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಜಾರಿಗೆ ತರಬೇಕೆಂದು ಆಗ್ರಹಿಸಲಾಯಿತು. 

ಹೊಸ ಪಿಂಚಣಿ ಯೋಜನೆಯಲ್ಲಿ  ಜಿಪಿಎಫ್ ಸೌಲಭ್ಯವಿಲ್ಲ. ಪಿಂಚಣಿ ಹಣದಲ್ಲಿ ಶೇ. 10ರಷ್ಟು ಕಡಿಮೆ ನೀಡಲಾಗುತ್ತಿದೆ. ಪಿಂಚಣಿ ಹಣವನ್ನು ಶೇರು ಮಾರುಕಟ್ಟೆಯಲ್ಲಿ ಹೂಡಿಕೆ  ಮಾಡಲಾಗುತ್ತದೆ. ಇದರಲ್ಲಿ ಮರಣ ಉಪದಾನವಿಲ್ಲ. ಪಿಂಚಣಿಗಾಗಿ ಸೇವಾ ಶುಲ್ಕ ಕಡಿತವಾಗುತ್ತದೆ. 

ಬಾಂಡ್‌ ರೂಪದ ಭದ್ರತೆಯಿಲ್ಲ. ನೌಕರರಿಗೆ ಗರಿಷ್ಠ ಭರವಸೆಯಿಲ್ಲ. ಆದ್ದರಿಂದ ಹಳೆಯ ಪಿಂಚಣಿ ವ್ಯವಸ್ಥೆ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಲಾಯಿತು. ರಾಜ್ಯ ಸರಕಾರ 6ನೇ ವೇತನ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಕೂಲತೆ ಕಲ್ಪಿಸಬೇಕೆಂದು ಆಗ್ರಹಿಸಲಾಯಿತು. ತಹಶೀಲ್ದಾರ್‌ ಮೂಲಕ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು.

ಟಿ.ಆರ್‌. ಶಿರೋಳ, ಅಶೋಕ ಕಬ್ಬೇರ, ಯು.ಆರ್‌. ಪೀರಣ್ಣವರ, ಎಂ.ಕೆ. ಲಾಲ್‌ಮಿಯಾ, ಬಸವರಾಜ ಶಿರಹಟ್ಟಿ, ವೈ.ಜಿ. ಸವಣೂರ, ಎ.ಬಿ. ಕಾಡನ್ನವರ, ಡಿ.ಆರ್‌. ಬೊಮ್ಮನಹಳ್ಳಿ, ಐ.ಎಫ್. ಅಯ್ಯನಗೌಡರ, ಪಿ.ಎಂ. ತಟ್ಟಿಮನಿ, ಜಿ.ಬಿ. ಯಲಭೋವಿ ಮೊದಲಾದವರಿದ್ದರು.   

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.