ಅಶ್ಲೀಲ ಸಂಭಾಷಣೆ ನನ್ನದಲ್ಲ : ಲಮಾಣಿ
Team Udayavani, Apr 15, 2018, 4:43 PM IST
ಲಕ್ಷ್ಮೇಶ್ವರ: ಅಶ್ಲೀಲ ಸಂಭಾಷಣೆಯು ಸಾಮಾಜಿಕ ಜಾಲತಾಣದಲ್ಲಿ ಕಳೆದ 2-3 ದಿನಗಳಿಂದ ಹರಿದಾಡುತ್ತಿದ್ದು, ಇದಕ್ಕೂ ತಮಗೂ ಸಂಬಂಧ ಇಲ್ಲ ಎಂದು ಮಾಜಿ ಶಾಸಕ ರಾಮಣ್ಣ ಲಮಾಣಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿದ್ದು ಸ್ಪಷ್ಟನೆ ನೀಡಿದ್ದಾರೆ.
ಅದರಲ್ಲಿಯ ಧ್ವನಿ ನನ್ನದಲ್ಲ. ಈ ಕುರಿತಂತೆ ನಾನು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸುತ್ತೇನೆ. ನನ್ನ ಮೇಲೆ ಬಂದಿರುವ ಈ ಆಪಾದನೆ ಸತ್ಯಕ್ಕೆ ದೂರವಾಗಿದ್ದು, ಸಾರ್ವಜನಿಕರು ತಪ್ಪು ತಿಳಿವಳಿಕೆ, ಗೊಂದಲಕ್ಕೊಳಗಾಗಬಾರದು ಎಂದು ಹೇಳಿದ್ದಾರೆ.
ಬಿಜೆಪಿ ತಾಲೂಕು ಅಧ್ಯಕ್ಷವಿರುಪಾ ಕ್ಪಪ್ಪ ಅಣ್ಣಿಗೇರಿ ಮಾತನಾಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಚಂಬಣ್ಣ ಬಾಳಿಕಾಯಿ, ಹಿರಿಯ ಮುಖಂಡರಾದ ಎಂ.ಎಂ.ಅಗಡಿ, ಡಾ.ವೈ.ಎಫ್. ಹಂಜಿ, ಅಶೋಕ ಪಲ್ಲೇದ, ಡಿ.ಬಿ. ಬಳಿಗಾರ, ಡಿ.ವೈ. ಹುನಗುಂದ, ಜಾನು ಲಮಾಣಿ, ಸೋಮು ಉಪನಾಳ ಇನ್ನಿತರರು ಇದ್ದರು. ಮಾಜಿ ಶಾಸಕ ರಾಮಣ್ಣ ಲಮಾಣಿ ಅವರು ಮಹಿಳೆಯೊಂದಿಗೆ ನಡೆಸಿದ್ದಾರೆನ್ನಲಾದ ಅಶ್ಲೀಲ ಸಂಭಾಷಣೆಯು ಸಾಮಾಜಿಕ ಜಾಲತಾಣದಲ್ಲಿ ಕಳೆದ 2-3 ದಿನಗಳಿಂದ ಹರಿದಾಡುತ್ತಿರುವ ಕುರಿತು ಸ್ಪಷ್ಟಣೆ ನೀಡಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ