ಜನಾದೇಶವಿದ್ದರೂ ಬಹುಮತ ಇಲ್ಲದ್ದು ದುರಾದೃಷ್ಟ

Team Udayavani, May 27, 2018, 5:06 PM IST

27-may-21.jpg

ಹುಬ್ಬಳ್ಳಿ: ಬಿಜೆಪಿಗೆ ಜನಾದೇಶವಿದ್ದರೂ ಬಹುಮತ ಇಲ್ಲದ್ದು ನಮ್ಮ ದುರಾದೃಷ್ಟ. ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದ್ದರೆ ಒಂದು ವಾರದಲ್ಲೇ ಮಹಾನಗರದ ಅಭಿವೃದ್ಧಿಗೆ ಅವಶ್ಯವಿರುವ ಎಲ್ಲಾ ಯೋಜನೆಗಳು ಅನುಷ್ಠಾನಕ್ಕೆ ಬರುತ್ತಿದ್ದವು ಎಂದು ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ ಶೆಟ್ಟರ ಹೇಳಿದರು.

ಆರನೇ ಬಾರಿ ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಇಲ್ಲಿನ ಗೋಕುಲ ಕೈಗಾರಿಕೆ ಪ್ರದೇಶದಲ್ಲಿ ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ವತಿಯಿಂದ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ನಗರದ ಕೈಗಾರಿಕೆ ಪ್ರದೇಶಗಳ ಸಮಸ್ಯೆಗಳ ಕುರಿತು ಹಿಂದಿನ ರಾಜ್ಯ ಸರಕಾರಕ್ಕೆ ಮನವಿ ಮಾಡಿದ ನಂತರ ಒಂದಿಷ್ಟು ಕಾಮಗಾರಿಗಳು ನಡೆಯುತ್ತಿವೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಒಂದು ವಾರದಲ್ಲೇ ಕೈಗಾರಿಕೆ ಪ್ರದೇಶಗಳ ಸಮಸ್ಯೆಗಳು, ನಗರಕ್ಕೆ ಅವಶ್ಯವಿರುವ ಕುಡಿಯುವ ನೀರಿನ ಯೋಜನೆ ಸೇರಿದಂತೆ ಬಹುತೇಕ ಕಡತಗಳು ವಿಲೇವಾರಿಯಾಗುತ್ತಿದ್ದವು ಎಂದರು.

ಸಮ್ಮಿಶ್ರ ಸರಕಾರದ ಜಂಜಾಟಗಳು ಇನ್ನೂ ಮುಗಿದಿಲ್ಲ. ಆರ್‌.ವಿ. ದೇಶಪಾಂಡೆಯವರು ಕೈಗಾರಿಕಾ ಮಂತ್ರಿಯಾದರೆ
ಇಲ್ಲಿನ ಸಮಸ್ಯೆಗಳಿಗೆ ಆದಷ್ಟು ಬೇಗ ಪರಿಹಾರ ದೊರೆಯಲಿದೆ. ಇಲ್ಲಿನ ಸಮಸ್ಯೆಗಳ ಕುರಿತು ಸಾಕಷ್ಟು ಬಾರಿ ಅಧಿಕಾರಿಗಳ
ಗಮನಕ್ಕೆ ತಂದರೂ ಯಾವುದಾದರೂ ಒಂದು ತಾಂತ್ರಿಕ ನೆಪ ಹುಡುಕಿ ಕಡತ ವಿಲೇವಾರಿ ಮಾಡುವುದಿಲ್ಲ. ನಿಷ್ಠೆಯಿಂದ ಕೆಲಸ ಮಾಡುವ ಮನಸ್ಥಿತಿ ಅಧಿಕಾರಿಗಳಲ್ಲಿ ಕಡಿಮೆಯಾಗುತ್ತಿದೆ. ಮಹಾನಗರ ಪಾಲಿಕೆ ಆಯುಕ್ತರು ಪಾಲಿಕೆ ಕಾರ್ಯಗಳ ಸೂಕ್ತ ನಿರ್ವಹಣೆಗೆ ಮುಂದಾಗುತ್ತಿಲ್ಲ. ಇತ್ತೀಚೆಗೆ ಮೂರ್‍ನಾಲ್ಕು ಸಭೆಗಳಿಗೆ ಆಹ್ವಾನ ನೀಡಿದರೂ ಬರಲಿಲ್ಲ. ಇಂತಹ ಅಧಿಕಾರಿಗಳಿಂದ ಕೆಲಸ ನಿರೀಕ್ಷಿಸಲು ಸಾಧ್ಯವೇ? ಎಂದರು.

ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ವಿಶ್ವನಾಥ ಗೌಡರ ಮಾತನಾಡಿ, ಎಂ.ಟಿ. ಸಾಗರ ಕೈಗಾರಿಕೆ ಪ್ರದೇಶದ 72 ಉದ್ದಿಮೆದಾರರಿಗೆ ಖರೀದಿ ಪತ್ರ ವಿತರಿಸುವುದು, ಗೋಕುಲ ಕೈಗಾರಿಕೆ ಪ್ರದೇಶದಲ್ಲಿ ಮೂಲ ಸೌಲಭ್ಯ, ಔದ್ಯೋಗಿಕ ವಸಹಾತುಗಳ ತೆರಿಗೆ ಗೊಂದಲ ಬಗೆಹರಿಸುವುದು, ಸಕಾಲಕ್ಕೆ ಕೈಗಾರಿಕಾ ಅದಾಲತ್‌ ಸೇರಿದಂತೆ ಇತರೆ ಸಮಸ್ಯೆಗಳಿಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಕಲ್ಪಿಸಸಲು  ಮನವಿ ಮಾಡಿದರು. ಮಹೇಶ ಬುರ್ಲಿ, ಅಶೋಕ ಕಲಬುರ್ಗಿ, ನಾಗರಾಜ ದಿವಟೆ, ಮಲ್ಲೇಶ ಜಾಡರ, ಮನೋಹರ ಕೊಟ್ಟೂರಶೆಟ್ಟರ, ವಿಜಯ ಹಟ್ಟಿಹೊಳಿ ಇದ್ದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.