ಜಿಎಸ್‌ಟಿಯಿಂದಾಗಿ ತೆರಿಗೆ ಸಂಗ್ರಹ ದುಪ್ಪಟ್ಟು: ಅಂಗಡಿ


Team Udayavani, Jul 2, 2018, 4:47 PM IST

2-july-21.jpg

ಬೆಳಗಾವಿ: ಜಿಎಸ್‌ಟಿ ಜಾರಿಯಾದಾಗಿನಿಂದ ತೆರಿಗೆ ಸಂಗ್ರಹ ದುಪ್ಪಟ್ಟಾಗಿದ್ದು, ಇನ್ನು ಕೆಲವೇ ವರ್ಷಗಳಲ್ಲಿ ಜಿಎಸ್‌ಟಿಯ ಮೂಲ ಉದ್ದೇಶ ಈಡೇರಲಿದೆ ಎಂದು ಸಂಸದ ಸುರೇಶ ಅಂಗಡಿ ಹೇಳಿದರು. ನಗರದಲ್ಲಿ ಆದಾಯ ತೆರಿಗೆ ಇಲಾಖೆ ವತಿಯಿಂದ ರವಿವಾರ ನಡೆದ ಜಿಎಸ್‌ಟಿ ಅನುಷ್ಠಾನದ ಮೊದಲ ವರ್ಷಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಜಿಎಸ್‌ಟಿಯಿಂದಾಗಿ ತೆರಿಗೆ ಅಪಾರ ಪ್ರಮಾಣದಲ್ಲಿ ಹರಿದು ಬರುತ್ತಿದೆ. ದೇಶದ ಖಜಾನೆ ಭರ್ತಿಯಾಗುತ್ತಿದ್ದು, ಭಾರತದ ಸಮಗ್ರ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ. ಇನ್ನು ಮುಂದಿನ ದಿನಗಳಲ್ಲಿ ತೆರಿಗೆ ಪ್ರಮಾಣದಲ್ಲಿ ಗಣನೀಯ ಇಳಿಕೆ ಕಂಡು ಬರಲಿದೆ ಎಂದು ಹೇಳಿದರು.

ಜಿಎಸ್‌ಟಿಯಿಂದ ಯುವ ಜನತೆ ಹಾಗೂ ಉದ್ಯಮಿಗಳಿಗೆ ಬಹಳಷ್ಟು ಅನುಕೂಲವಾಗಲಿದೆ. ಭಾರತದ ಭವಿಷ್ಯದ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ನಿರ್ಧಾರ ಪ್ರಸ್ತುತವಾಗಿದೆ. ಜಿಎಸ್‌ಟಿ ಅನುಷ್ಠಾನದ ನಂತರ ದೇಶದಲ್ಲಿ ತೆರಿಗೆ ಸಂಗ್ರಹದ ಪ್ರಮಾಣದಲ್ಲಿಯೂ ಹೆಚ್ಚಳವಾಗಿದೆ ಎಂದು ಹೇಳಿದರು. 

ಜಿಎಸ್‌ಟಿ ಅನುಷ್ಠಾನದ ಯಶಸ್ಸಿನಲ್ಲಿ ಎಲ್ಲ ಪಕ್ಷಗಳು ಕೈ ಜೋಡಿಸಿವೆ. ಹೀಗಾಗಿ ಎಲ್ಲ ಪಕ್ಷಗಳ ಸಂಸದರನ್ನು ಅಭಿನಂದಿಸಲು ನಾನು ಮರೆಯುವುದಿಲ್ಲ. ಒಂದೇ ದೇಶ, ಒಂದೇ ತೆರಿಗೆ ಎಂಬ ಪರಿಕಲ್ಪನೆಯಡಿ ಜಿಎಸ್‌ಟಿ ಅನುಷ್ಠಾನಕ್ಕೆ ತರಲು ತೆಗೆದುಕೊಂಡ ನಿರ್ಧಾರ ನಿಜಕ್ಕೂ ಪ್ರಶಂಸನೀಯ ಎಂದರು. ಬೆಳಗಾವಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹದ ಪ್ರಮಾಣ ದುಪ್ಪಟ್ಟಾಗಿದೆ. ಇದು ಬೆಳಗಾವಿಗರಿಗೂ ಅನುಕೂಲಕರವಾಗಲಿದ್ದು, ಮುಂದಿನ ದಿನಗಳಲ್ಲಿ ಬೆಳಗಾವಿ ಅಭಿವೃದ್ಧಿಗೆ ಮತ್ತಷ್ಟು ಲಾಭದಾಯಕವಾಗಿದೆ ಎಂದರು.

ರಾಜ್ಯಸಭಾ ಸದಸ್ಯ ಡಾ| ಪ್ರಭಾಕರ ಕೋರೆ ಮಾತನಾಡಿ, ಜಿಎಸ್‌ಟಿ ಸ್ನೇಹಮಯಿ ತೆರಿಗೆ ಪದ್ಧತಿಯಾಗಿದೆ. ದೇಶದ ಆದಾಯ ಹೆಚ್ಚಳಕ್ಕೂ ಕಾರಣವಾಗಿದೆ. ಈ ಮೊದಲು ವ್ಯಾಪಾರಸ್ಥರು, ಉದ್ದಿಮೆದಾರರಿಗೆ ತೆರಿಗೆ ಅಧಿಕಾರಿಗಳಿಂದ ಆಗುತ್ತಿದ್ದ ಕಿರುಕುಳ ಜಿಎಸ್‌ಟಿ ಅನುಷ್ಠಾನದಿಂದ ತಡೆದಂತಾಗಿದೆ ಎಂದರು.ಆದಾಯ ತೆರಿಗೆ ಇಲಾಖೆ ಆಯುಕ್ತ ವಿಜಯಕುಮಾರ ಮಾತನಾಡಿ, ಒಂದು ದೇಶ, ಒಂದು ಮಾರುಕಟ್ಟೆ, ಒಂದು ತೆರಿಗೆ ಎನ್ನುವುದು ಜಿಎಸ್‌ಟಿಯ ಮೂಲ ಉದ್ದೇಶವಾಗಿದ್ದು, ಈ ಉದ್ದೇಶದ ಸಾಫಲ್ಯ ಸಾಧಿಸುವಲ್ಲಿ ಜಿಎಸ್‌ಟಿ ಮೊದಲ ವರ್ಷದಲ್ಲಿಯೇ ಯಶಸ್ವಿಯಾಗಿದೆ. ಜಿಎಸ್‌ಟಿ ಸಂಪೂರ್ಣ ದೇಶವನ್ನು ಒಗ್ಗೂಡಿಸಿದೆ ಎಂದರು. ಬೆಳಗಾವಿ ವ್ಯಾಪ್ತಿಯಲ್ಲಿಯೇ 5 ಸಾವಿರದಷ್ಟು ಕೇಂದ್ರ ಅಬಕಾರಿ ಹಾಗೂ 35 ಸಾವಿರದಷ್ಟು ಸೇವಾ ತೆರಿಗೆದಾರರನ್ನು ಜಿಎಸ್‌ಟಿ ಗೆ ಪರಿವರ್ತಿಸಲಾಗಿದೆ. ಜಿಎಸ್‌ಟಿ ಬಗ್ಗೆ ಆದಾಯ ತೆರಿಗೆ ಇಲಾಖೆ ದೇಶದ ಅತಿ ಸಣ್ಣ, ಸಣ್ಣ ಹಾಗೂ ಮದ್ಯಮ ಉದ್ದಿಮೆದಾರರಿಗೆ ಸಮಗ್ರ ತಿಳಿವಳಿಕೆ ನೀಡಿದೆ ಎಂದರು. ಆದಾಯ ತೆರಿಗೆ ಇಲಾಖೆ ಜಂಟಿ ಆಯುಕ್ತ ಎಸ್‌.ಕೆ. ಮೆಹತಾ ಸ್ವಾಗತಿಸಿದರು. ಆಡಿಟ್‌ ವಿಭಾಗದ ಆಯುಕ್ತ ಡಾ| ಶಿವಾಜಿ ಸ್ವಾಗತಿಸಿದರು.

ಜಿಎಸ್‌ಟಿ ಅಂದ್ರೆ ಒಬ್ಬನೇ ಗಂಡ, ಒಬ್ಬಳೇ ಹೆಂಡತಿ
ಜಿಎಸ್‌ಟಿ ಅಂದರೆ ಒಬ್ಬನೇ ಗಂಡ, ಒಬ್ಬಳೇ ಹೆಂಡತಿ ಎಂಬಂತಿದೆ. ಹೀಗಾಗಿ ಜಿಎಸ್‌ ಟಿಯನ್ನು ಗೊಂದಮಯವಾಗಿ
ಅರ್ಥೈಸಿಕೊಳ್ಳುವುದು ಬೇಡ. ಜಿಎಸ್‌ಟಿಯಿಂದ ದೇಶದ ಆರ್ಥಿಕ ಸ್ಥಿತಿ ಸುಧಾರಿಸುತ್ತಿದೆ. ಒಂದೇ ದೇಶ, ಒಂದೇ ತೆರಿಗೆ ಎಂಬ ಅರ್ಥ ನೀಡಲಾಗಿದೆ ಎಂದು ರಾಜ್ಯಸಭಾ ಸದಸ್ಯ ಡಾ| ಪ್ರಭಾಕರ ಕೋರೆ ವ್ಯಾಖ್ಯಾನಿಸಿದರು.

ಟಾಪ್ ನ್ಯೂಸ್

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.