ಕಾಳಿದಾಸ ಶಿಕ್ಪಣ ಸಂಸ್ಥೆಗೆ 10 ಲಕ್ಷ  ಅನುದಾನ: ಚರಂತಿಮಠ 

Team Udayavani, Jul 25, 2018, 5:30 PM IST

25-july-22.jpg

ಬಾಗಲಕೋಟೆ: ಈಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಿಂದ ನಾನು ಆಯ್ಕೆಯಾಗಲು ಹಾಲುಮತ ಸಮಾಜದ ಪಾತ್ರವೂ ಇದೆ. ಈ ಸಮಾಜದ ಋಣ ನನ್ನ ಮೇಲಿದೆ. ಹಾಲುಮತ ಸಮಾಜದವರು ಸ್ಥಾಪಿಸಿರುವ ಕಾಳಿದಾಸ ಶಿಕ್ಷಣ ಸಂಸ್ಥೆಗೆ ಪ್ರಸಕ್ತ ವರ್ಷದಿಂದ ಬರುವ ಶಾಸಕರ ಅನುದಾನದಲ್ಲಿ ಮೊದಲ 10 ಲಕ್ಷ ಅನುದಾನ ಈ ಸಂಸ್ಥೆಯ ಅಭಿವೃದ್ಧಿಗೆ ನೀಡಲಾಗುವುದು ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ಡಾ|ವೀರಣ್ಣ ಚರಂತಿಮಠ ಭರವಸೆ ನೀಡಿದರು. ನವನಗರದ ಕಾಳಿದಾಸ ಶಿಕ್ಷಣ ಸಂಸ್ಥೆಯಲ್ಲಿ ಮಂಗಳವಾರ ಕಲಾ, ವಾಣಿಜ್ಯ ಪದವಿ ಕಾಲೇಜುಗಳ ನಾಮಕರಣ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾಳಿದಾಸ ಶಿಕ್ಷಣ ಸಂಸ್ಥೆ ಸಾವಿರಾರು ವಿದ್ಯಾರ್ಥಿಗಳ ಕಲಿಕೆಗೆ ಪೂರಕ ವಾತಾವರಣ ನೀಡಿದೆ. ಈ ಸಂಸ್ಥೆಯ ಶೈಕ್ಷಣಿಕ ಅಭಿವೃದ್ಧಿಗೆ ಶಾಸಕರ ನಿಧಿ ಯಿಂದ 10 ಲಕ್ಷ ಅನುದಾನ ನೀಡಲಾಗುವುದು ಎಂದು ತಿಳಿಸಿದರು.

ಈ ಸಂಸ್ಥೆಯ ಗೌರವ ಅಧ್ಯಕ್ಷರಾಗಿರುವ ಎಸ್‌.ಎಸ್‌. ಪಾಟೀಲರಿಗೆ ಈಗ 83 ವಯಸ್ಸು. ಆದರೂ, ಸಂಸ್ಥೆಗಾಗಿ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ. ಹೊಸ ಹೊಸ ಕಾಲೇಜು ಆರಂಭಿಸಿ, ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ್ದಾರೆ. ವ್ಯಾಪಾರದ ಜತೆಗೆ ಸಾಮಾಜಿಕ ಕಾರ್ಯ ಮಾಡುತ್ತಿದ್ದಾರೆ. ಇದು ಶ್ಲಾಘನೀಯ ಕಾರ್ಯ ಎಂದರು. ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗೆ ನಾವು ಒಳ್ಳೆಯ ಕಾರ್ಯ ಮಾಡದಿದ್ದರೂ ಪರವಾಗಿಲ್ಲ. ಆದರೆ, ಕೆಟ್ಟದನ್ನು ಮಾತ್ರ ಮಾಡಬಾರದು. ಅದು ಶೋಭೆ ತರುವಂತಹದ್ದಲ್ಲ. ಕಾಳಿದಾಸ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಶಂಕರಗೌಡ ಪಾಟೀಲರು, ಮೂಲತಃ ಗ್ರಾಮೀಣ ಭಾಗದಿಂದ ಬಂದವರು. ವ್ಯಾಪಾರಕ್ಕಾಗಿ ಬಾಗಲಕೋಟೆಗೆ ಬಂದು, ಇಲ್ಲಿ ಶಿಕ್ಷಣ ಸಂಸ್ಥೆ ಕಟ್ಟಿ ಬೆಳೆಸಿದ್ದಾರೆ. ಅವರು ಹುಟ್ಟು ಹಾಕಿದ ಈ ಸಂಸ್ಥೆಯನ್ನು ಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್‌.ಎಸ್‌. ಪಾಟೀಲರು ಶ್ರಮದಿಂದ ಬೆಳೆಸುತ್ತಿದ್ದಾರೆ ಎಂದು ಹೇಳಿದರು.

ಮುಗಳಖೋಡ ಕನಕಬ್ರಹ್ಮ ವಿದ್ಯಾಶ್ರಮದ ಚಿನ್ಮಯಾನಂದ ಸ್ವಾಮೀಜಿ, ಕಾಳಿದಾಸ ಶಿಕ್ಷಣಯ ಸಂಸ್ಥೆಯ ಗೌರವಾಧ್ಯಕ್ಷ ಎಸ್‌.ಎಸ್‌. ಪಾಟೀಲ, ಕಾರ್ಯದರ್ಶಿ ಎಸ್‌.ಸಿ. ಆಡಿನ, ನಗರಸಭೆ ಅಧ್ಯಕ್ಷ ದ್ಯಾವಪ್ಪ ರಾಯಕುಂಪಿ, ನಗರಸಭೆ ಸದಸ್ಯ ಹನುಮಂತ ರ್ಯಾಕುಂಪಿ, ಮುಖಂಡರಾದ ಹನುಮಂತ ಯಮನಾಳ, ಯಲ್ಲಮ್ಮ ಯಮನಾಳ, ಜಿ. ಭರಮಗೌಡ ಹೊಸಪೇಟ, ಜಿ.ಸರೋಜಮ್ಮ ಹೊಸಪೇಟ, ಎ.ಎಸ್‌. ಹಾವೋಜಿ, ಬಿ.ಎಸ್‌. ಚಿಮ್ಮನಕಟ್ಟಿ, ಎಸ್‌.ವೈ. ನೀಲಾರ, ಪಿ.ಎಸ್‌. ಭೈರಮಟ್ಟಿ, ವೈ.ಎಚ್‌. ಇದ್ದಲಗಿ, ಎಸ್‌.ಎಸ್‌. ದೊಡಮನಿ, ಎಚ್‌.ಎಂ.ಯಮನಾಳ ಮುಂತಾದವರು ಇದ್ದರು.

ಟಾಪ್ ನ್ಯೂಸ್

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.