ಧಾರವಾಡ ಸಂಗೀತ ವಿದ್ಯಾಕಾಶಿ ಎಂದಾಗಲಿ: ಪಂ| ಗುರವ 

Team Udayavani, Aug 31, 2018, 5:21 PM IST

31-agust-23.jpg

ಧಾರವಾಡ: ವಿದ್ಯಾಕಾಶಿ ಎಂಬ ಖ್ಯಾತಿ ಹೊಂದಿರುವ ಧಾರವಾಡವು ಸಂಗೀತ ವಿದ್ಯಾಕಾಶಿ ಎಂಬುದಾಗಿ ಹೆಸರಿಸಿ ಈ ನಗರಕ್ಕೆ ನಾಮಕರಣ ಆಗುವಂತೆ ಸಂಗೀತಾಸಕ್ತರೆಲ್ಲ ಪ್ರಯತ್ನಿಸಬೇಕು ಎಂದು ಸಂಗೀತ ವಿದ್ವಾಂಸ ಪಂ| ಕೈವಲ್ಯಕುಮಾರ ಗುರವ ಹೇಳಿದರು.

ನಗರದ ಕವಿಸಂನಲ್ಲಿ ಕಲಾ ಮಂಟಪವು ಆಯೋಜಿಸಿದ್ದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಧಾರವಾಡವು ಜಗತ್ತಿನಲ್ಲಿಯೇ ಖ್ಯಾತಿ ಹೊಂದಿದ ಶ್ರೇಷ್ಠ ಸಂಗೀತಗಾರರನ್ನು ನೀಡಿದೆ. ಅಲ್ಲದೆ, ಲಲಿತಕಲಾ ಹಾಗೂ ಸಂಗೀತ ಮಹಾವಿದ್ಯಾಲಯದ ಮೂಲಕ ಹೊಸ ಹೊಸ ಸಂಗೀತ ಕಲಾ ಪ್ರತಿಭೆಯನ್ನು ಬೆಳೆಸುತ್ತಿದೆ. ಇಂತಹ ಧಾರವಾಡಕ್ಕೆ ಬರುವ ಹೊರರಾಜ್ಯದ ಬಂಧುಗಳಿಗೆ ಸಂಗೀತ ದಿಗ್ಗಜರ ನೆನಪನ್ನು ಕೊಡಲು ನಗರದ ಮುಖ್ಯ ದ್ವಾರಗಳಲ್ಲಿ ಸಂಗೀತ ವಿದ್ಯಾಕಾಶಿ ಧಾರವಾಡಕ್ಕೆ ಸ್ವಾಗತ ಎಂಬ ಸುಂದರ ನಾಮಫಲಕ ಅಳವಡಿಸಬೇಕು ಎಂದರು.

ಡಾ| ಅರಣ್ಯಕುಮಾರ ಮುನೆನ್ನಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಕರು ಸಂಗೀತ ಕಲಿಯುವತ್ತ ಒಲವು ತೋರಿಸುತ್ತಿರುವುದು ಒಳ್ಳೆಯ ಬೆಳವಣಿಗೆ. ಆದರೆ, ಅವರು ತಮ್ಮ ಅಭ್ಯಾಸದ ಸಾಧನೆಯ ಜೊತೆಗೆ ಮತ್ತೊಬ್ಬರ ಸಂಗೀತ ಕೇಳುವ ರೂಢಿ ಬೆಳೆಸಿಕೊಳ್ಳಬೇಕು. ಇದು ಅವರ ಅಧ್ಯಯನಕ್ಕೆ ಪೂರಕವಾಗಿರುತ್ತದೆ ಎಂದು ಹೇಳಿದರು.

ಸಂಘದ ಕೋಶಾಧ್ಯಕ್ಷ ಕೃಷ್ಣ ಜೋಶಿ ಇದ್ದರು. ಮೇಘಾ ಹುಕ್ಕೇರಿ ಪ್ರಾರ್ಥಿಸಿದರು. ಪ್ರಕಾಶ ಎಸ್‌. ಉಡಿಕೇರಿ ಪ್ರಾಸ್ತಾವಿಕ ಮಾತನಾಡಿದರು. ಶಂಕರ ಕುಂಬಿ ಸ್ವಾಗತಿಸಿದರು. ಕೆ.ಎಚ್‌. ನಾಯಕ ನಿರೂಪಿಸಿದರು. ಎಸ್‌.ಸಿ. ನೀರಾವರಿ ವಂದಿಸಿದರು. ನಂತರ ಮೈಸೂರಿನ ಗಾಯಕ ರಮೇಶಕುಮಾರ ಕೋಲಕುಂದ ಅವರಿಂದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಜರುಗಿತು. ಸಂವಾದಿನಿಯಲ್ಲಿ ಡಾ| ಅರ್ಜುನ ವಠಾರ ಹಾಗೂ ತಬಲಾದಲ್ಲಿ ಅಲ್ಲಮಪ್ರಭು ಕಡಕೋಳ ಸಾಥ್‌ ನೀಡಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.