CONNECT WITH US  

ದೇವಸ್ಥಾನ ಜೀರ್ಣೋದ್ಧಾರಕ್ಕೆ ನೆರವು

ಶ್ರೀಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದಿಂದ 1 ಲಕ್ಷ ರೂ. ಕೊಡುಗೆ 

ಕಲಘಟಗಿ: ಶ್ರೀನಾಮದೇವ ಶಿಂಪಿ ಸಮಾಜದ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯಿಂದ ಮಂಜೂರಾದ ಸಹಾಯಧನವನ್ನು ಹಸ್ತಾಂತರಿಸಲಾಯಿತು.

‌ಕಲಘಟಗಿ: ಜನರನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸುವುದರಿಂದ ಸಹೋದರ ಭಾವನೆಯನ್ನು ಜಾಗೃತಗೊಳಿಸಿ, ಸುಂದರ ಸಮಾಜ ನಿರ್ಮಿಸಲು ಸಾಧ್ಯ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ ಎಂ. ಹೇಳಿದರು.

ಪಟ್ಟಣದಲ್ಲಿರುವ ಶ್ರೀ ನಾಮದೇವ ಶಿಂಪಿ ಸಮಾಜದ ಹರಿ ಮಂದಿರ, ಶ್ರೀ ಪಾಂಡುರಂಗ ಹಾಗೂ ಪೇಟೆ ಆಂಜನೇಯ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜೂರಾದ ಒಂದು ಲಕ್ಷ ರೂ. ಸಹಾಯ ಧನದ ಡಿ.ಡಿ. ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗಳು ಪೂರ್ಣಗೊಳ್ಳದೇ ನಿಂತು ಹೋಗಿದ್ದಲ್ಲಿ ಅವುಗಳಿಗೆ ಸಹಾಯ ಧನವನ್ನು ನೀಡಿ ಮತ್ತೆ ಕಾಮಗಾರಿಯನ್ನು ಪ್ರಾರಂಭಿಸುವುದರಿಂದ ಬೇರೆ ಬೇರೆ ಮೂಲಗಳಿಂದ ಹಣ ಸಂಗ್ರಹಗೊಂಡು ಕಾರ್ಯ ಸಂಪೂರ್ಣಗೊಳ್ಳಲಿದೆ. ಅಲ್ಲದೇ ಧಾರ್ಮಿಕ ಚಟುವಟಿಕೆಗಳು ಮತ್ತೆ ಆರಂಭಗೊಳ್ಳುತ್ತವೆ. ಆದ್ದರಿಂದ ಶ್ರೀಗಳ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ದೇವಸ್ಥಾನಗಳ ಜೀರ್ಣೋದ್ಧಾರ, ರುದ್ರಭೂಮಿ ಯೋಜನೆ, ಸಮುದಾಯ ಭವನಗಳ ನಿರ್ಮಾಣ, ಹಾಲು ಉತ್ಪಾದಕರ ಸಹಕಾರಿ ಸಂಘಗಳ ಕಟ್ಟಡ ನಿರ್ಮಾಣ, ಕೆರೆ ಸೇರಿದಂತೆ ಮುಂತಾದ ಕಾಮಗಾರಿಗಳಿಗೆ ಶ್ರೀ ಕ್ಷೇತ್ರದಿಂದ ಸಹಾಯಧನ ನೀಡಲಾಗುತ್ತಿದೆ. ಶ್ರೀ ಕ್ಷೇತ್ರದ ಅನುದಾನವನ್ನು ಸದುಪಯೋಗ ಪಡಿಸಿಕೊಳ್ಳುವುದರ ಜೊತೆಗೆ ಪರಿಸರ ಶುಚಿತ್ವಕ್ಕೂ ಪ್ರಾಧಾನ್ಯತೆ ನೀಡಿ ಎಂದರು.

ದೇವಸ್ಥಾನ ಕಮಿಟಿ ಅಧ್ಯಕ್ಷ ಶ್ರೀಕಾಂತ ಕಠಾವಕರ, ಕಾರ್ಯದರ್ಶಿ ದತ್ತಾತ್ರೇಯ ವಂಡಕರ ಹಾಗೂ ಸದಸ್ಯರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿ ಕಾರಿ ಕೆ. ಕುಸುಮಾಧರ, ಒಕ್ಕೂಟದ ಅಧ್ಯಕ್ಷೆ ಲಕ್ಷ್ಮೀ ದೇವಲಾಪುರ, ಮೇಲ್ವಿಚಾರಕ ರೇಣುಕರಾಜ, ಸೇವಾ ಪ್ರತಿನಿಧಿ  ಆರೋಗ್ಯಮ್ಮ, ಎನ್‌. ಕೆ. ಅಂತೋನಿ ಇತರರಿದ್ದರು.

Trending videos

Back to Top