ಕೃಷಿಹೊಂಡ,ಉತ್ತಮ ಬೀಜಕ್ಕೆ ಆದ್ಯತೆ: ರೆಡ್ಡಿ 

Team Udayavani, Sep 24, 2018, 4:44 PM IST

24-sepctember-21.jpg

ಅಳ್ನಾವರ: ಇಂದಿನ ದಿನಗಳಲ್ಲಿ ಮಳೆ ಅನಿಶ್ಚಿತವಾಗಿರುವುದರಿಂದ ಕೃಷಿ ಇಲಾಖೆಯು ಕೃಷಿ ಹೊಂಡಗಳ ನಿರ್ಮಾಣಕ್ಕೆ ಮತ್ತು ಉತ್ತಮ ತಳಿಯ ಬೀಜಗಳ ವಿತರಣೆಗೆ ಆದ್ಯತೆ ನೀಡಲಿದೆ ಎಂದು ರಾಜ್ಯ ಕೃಷಿ ಸಚಿವ ಎನ್‌.ಎಚ್‌. ಶಿವಶಂಕರ ರೆಡ್ಡಿ ಹೇಳಿದರು. ಪಟ್ಟಣ ಬಳಿಯ ಕಡಬಗಟ್ಟಿಯ ಕೃಷಿಯಂತ್ರಧಾರೆ ಕೇಂದ್ರದಲ್ಲಿ ರೈತರೊಂದಿಗೆ ಜರುಗಿದ ಸಂವಾದದಲ್ಲಿ ಅವರು ಮಾತನಾಡಿದರು. ಕೃಷಿ ಇಲಾಖೆಯಿಂದ ರೈತರ ಅನುಕೂಲಕ್ಕಾಗಿ ಅನೇಕ ಯೋಜನೆ ಜಾರಿಗೊಳಿಸಲಾಗಿದ್ದು, ಹನಿ ನೀರಾವರಿಗೆ ಪ್ರೋತ್ಸಾಹ ನೀಡಲಾಗಿದೆ ಎಂದರು.

ರೈತರಿಗೆ ಕೃಷಿಯಲ್ಲಿ ಬಳಸಲು ಉತ್ತಮ ತಳಿಯ ಬೀಜಗಳನ್ನು ಪೂರೈಸಲಾಗುತ್ತಿದೆ. ಕೃಷಿ ವಿಜ್ಞಾನಿಗಳಿಂದ ಶಿಫಾರಸು ಮಾಡಲಾಗಿರುವ ಹೊಸ ತಳಿಯ ಬೀಜಗಳನ್ನು ರೈತ ಸಂಪರ್ಕ ಕೇಂದ್ರದಲ್ಲಿ ಹೆಚ್ಚು ಹೆಚ್ಚು ಮಾರಾಟ ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಮತ್ತು ರೈತರಲ್ಲಿ ಈ ಕುರಿತು ಜಾಗೃತಿ ಮೂಡಿಸಲಾಗುವುದು ಎಂದರು.

ಕೃಷಿ ಹೊಂಡ ಪರಿಶೀಲನೆ: ರೈತ ಸಂವಾದ ಪೂರ್ವದಲ್ಲಿ ಕೃಷಿ ಸಚಿವರು ಅಂಬೊಳ್ಳಿ ಗ್ರಾಮದ ರೈತ ವಿಶ್ವಂಬರ ಬನಸಿ ಅವರ ತೋಟದಲ್ಲಿ ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡ ಪರಿಶೀಲಿಸಿದರು. 2018-19ನೇ ಸಾಲಿನ ಭೂಸಮೃದ್ಧಿ ಯೋಜನೆಯಡಿ ಭತ್ತದಲ್ಲಿ ನೇರ ಕೂರಿಗೆ ಬಿತ್ತನೆಯ ಪ್ರಾತ್ಯಕ್ಷತೆ ವಿಕ್ಷೀಸಿದರು. ರೈತ ಶಿವಾಜಿ ಬಳಗೆರಿ ನೇರ ಕೂರಿಗೆ ಬಿತ್ತನೆಯ ಲಾಭಗಳನ್ನು ಸಚಿವರಿಗೆ ವಿವರಿಸಿದರು. 

ಬೆಳೆ ವೀಕ್ಷಣೆ: ಅಳ್ನಾವರ ಸಮೀಪದ ಕಡಬಗಟ್ಟಿ ಗ್ರಾಮದ ಯಲ್ಲಪ್ಪ ಬೇಕ್ವಾಡಕರ ಅವರ ಜಮೀನಿಗೆ ಕೃಷಿ ಸಚಿವ ಎನ್‌.ಎಚ್‌. ಶಿವಶಂಕರ ರೆಡ್ಡಿ ಭೇಟಿಕೊಟ್ಟು ಯಂತ್ರಗಳ ಮೂಲಕ ನೇರ ಬಿತ್ತನೆ ಮಾಡಿ ಬೆಳೆದ ಭತ್ತದ ಬೆಳೆ ವೀಕ್ಷಿಸಿದರು. ಈ ಒಕ್ಕಲುತನ ಪದ್ಧತಿ ಬಗ್ಗೆ ರೈತರಿಂದ ಮಾಹಿತಿ ಪಡೆದರು. ಯಲ್ಲಪ್ಪ ಬೇಕ್ವಾಡಕರ ತಮ್ಮ ಅನುಭವ ಹಂಚಿಕೊಂಡರು.

ಮನವಿ ಸಲ್ಲಿಕೆ: ಗೋವಿನ ಜೋಳವನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ಕೇಂದ್ರ ತೆರೆಯುವಂತೆ ರೈತರು ಸಚಿವರಿಗೆ ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಸಚಿವರು, ಖರೀದಿಗೆ ಕೆಲವೊಂದು ಮಾನದಂಡಗಳು ಇರುವುದರಿಂದ, ಇದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡುವುದರಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದೆಂದರು. ಹುಲಿಕೇರಿ ಕೆರೆ ಸುಧಾರಣೆಗೆ ಅನುದಾನ ನೀಡಲು ಗ್ರಾಮದ ಶಿವಾಜಿ ಡೊಳ್ಳಿನ, ಮಲ್ಲಿಕಾರ್ಜುನ ಕಲ್ಲೂರ ಮತ್ತಿತರರು ಸಚಿವರಿಗೆ ಮನವಿ ಮಾಡಿದರು.

ಕೃಷಿಯಂತ್ರಧಾರೆ ಕೇಂದ್ರ ವ್ಯವಸ್ಥಾಪಕಿ ಮಂಜುಳಾ ನುಚ್ಚಂಬಲಿ ಅವರು, ಕೃಷಿ ಉಪಕರಣಗಳ ಬಾಡಿಗೆ ನೀಡುವ ಕುರಿತು ಮತ್ತು ರೈತರ ಅಭಿಪ್ರಾಯಗಳನ್ನು ಸಚಿವರಿಗೆ ತಿಳಿಸಿದರು. ಕೃಷಿ ಇಲಾಖೆ ಜಂಟಿ ನಿರ್ದೆಶಕ ಟಿ.ಎಸ್‌. ರುದ್ರೇಶಪ್ಪ, ಬೆಳಗಾವಿ ವಿಭಾಗದ ಕೃಷಿ ಜಾಗೃತ ದಳದ ಜಂಟಿ ನಿರ್ದೇಶಕ ವೆಂಕಟರಮಣ ರೆಡ್ಡಿ, ಉಪನಿರ್ದೇಶಕಿ ಆರ್‌.ಸುಷ್ಮಾ, ಸಿ.ಜಿ. ಮೇತ್ರಿ ಇನ್ನಿತರರಿದ್ದರು.

ರಾಜ್ಯದಲ್ಲಿ ಇಸ್ರೇಲ್‌ ಮಾದರಿಯ ಕೃಷಿ ಅನುಸರಿಸಲು ಸರಕಾರ ಮುಂದಿನ ಆಯವ್ಯಯದಲ್ಲಿ ಹೆಚ್ಚಿನ ಅನುದಾನ ನೀಡಲಿದೆ. ಕೃಷಿ ಇಲಾಖೆಯಲ್ಲಿ ಕ್ಷೇತ್ರ ಕಾರ್ಯ ಮುಖ್ಯವಾಗಿರುವುದರಿಂದ ಇನ್ನೂ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.
. ಶಿವಶಂಕರ ರೆಡ್ಡಿ, ರಾಜ್ಯ ಕೃಷಿ ಸಚಿವ

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Hubli; ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ

Hubli; ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ

Hubli; ಸಿದ್ಧರಾಮಯ್ಯನವರೇ ನೀವು ಯಾವ ಮುಖ ಇರಿಸಿಕೊಂಡು ಆಡಳಿತ ಮಾಡುತ್ತಿದ್ದೀರಿ: ಜೋಶಿ

Hubli; ಸಿದ್ಧರಾಮಯ್ಯನವರೇ ನೀವು ಯಾವ ಮುಖ ಇರಿಸಿಕೊಂಡು ಆಡಳಿತ ಮಾಡುತ್ತಿದ್ದೀರಿ: ಜೋಶಿ

ಮೋದಿ ಗ್ಯಾರಂಟಿ ಬದುಕು ಕಟ್ಟುವ ಶಾಶ್ವತ ಗ್ಯಾರಂಟಿ: ಬೊಮ್ಮಾಯಿ

Hubli; ಮೋದಿ ಗ್ಯಾರಂಟಿ ಬದುಕು ಕಟ್ಟುವ ಶಾಶ್ವತ ಗ್ಯಾರಂಟಿ: ಬೊಮ್ಮಾಯಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.