ನಿರ್ಲಕ್ಷ ತೋರಿದರೆ ಶಿಸ್ತುಕ್ರಮ: ನ್ಯಾ| ಚಂಗಪ್ಪ 


Team Udayavani, Oct 11, 2018, 5:14 PM IST

11-october-20.gif

ಹುಬ್ಬಳ್ಳಿ: ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಅಥವಾ ಇಲಾಖೆ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಾನವ ಹಕ್ಕುಗಳ ನ್ಯಾಯಿಕ ಸದಸ್ಯ ನ್ಯಾ| ಕೆ.ಆರ್‌. ಚಂಗಪ್ಪ ತಿಳಿಸಿದರು.

ಇಲ್ಲಿನ ಸರ್ಕ್ನೂಟ್‌ಹೌಸ್‌ನಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಪ್ರಕರಣ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾನವ ಹಕ್ಕುಗಳ ಪ್ರಕರಣಗಳಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರುವಂತಿಲ್ಲ. ಕೆಲ ಜಿಲ್ಲೆಗಳಲ್ಲಿ ಪ್ರಕರಣಗಳನ್ನು ಹಗುರವಾಗಿ ತೆಗೆದುಕೊಂಡವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಆಯೋಗದ ಪ್ರಕರಣಗಳನ್ನು ಕಾಲಮಿತಿಯಲ್ಲಿ ಬಗೆಹರಿಸಿ ನ್ಯಾಯ ಕೊಡುವುದು ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದರು.

ಧಾರವಾಡ ಜಿಲ್ಲೆಯಲ್ಲಿ ನನ್ನ ವ್ಯಾಪ್ತಿಗೆ ಸಂಬಂಧಿಸಿದಂತೆ ಕೇವಲ 30 ದೂರುಗಳು ಮಾತ್ರ ದಾಖಲಾಗಿದ್ದು, ಕೆಲ ದೂರುಗಳಿಗೆ ಅಧಿಕಾರಿಗಳು ಪರಿಹಾರ ನೀಡಿದ್ದಾರೆ. ಬಹಳ ದಿನಗಳಿಂದ ಬಾಕಿ ಉಳಿದಿರುವ ಹಾಗೂ ಇತರೆ ದೂರುಗಳಲ್ಲಿ ಅಧಿಕಾರಿಗಳ ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಯುತ್ತಿದ್ದು, ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಇಲ್ಲಿ ದೂರುಗಳ ಸಂಖ್ಯೆ ಕಡಿಮೆಯಿದೆ. ಪೊಲೀಸ್‌ ಇಲಾಖೆಗೆ ಸಂಬಂಧಿಸಿದಂತೆ 13 ದೂರುಗಳು ದಾಖಲಾಗಿವೆ ಎಂದು ವಿವರಿಸಿದರು. 

ಹಾಸ್ಟೆಲ್‌ಗ‌ಳಲ್ಲಿ ಸಮಸ್ಯೆ: ಜಿಲ್ಲೆಯ ವಿವಿಧ ಇಲಾಖೆ ಹಾಸ್ಟೆಲ್‌ಗ‌ಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಕುರಿತು ಪರಿಶೀಲಿಸಿದ್ದೇನೆ. ಅಲ್ಲಿನ ವಿದ್ಯಾರ್ಥಿಗಳು ಕೂಡ ಒಂದಿಷ್ಟು ಸಮಸ್ಯೆಗಳನ್ನು ಹೇಳಿದ್ದಾರೆ. ಜಿಲ್ಲೆಯ ದೇವರಾಜ ಅರಸು ಹಾಸ್ಟೆಲ್‌ವೊಂದರಲ್ಲಿ ಆಹಾರ ಸರಿಯಾಗಿಲ್ಲ ಎಂದು ಲಿಖಿತವಾಗಿ ದೂರು ನೀಡಿದ್ದರು. ಅಲ್ಲಿ ಪರಿಶೀಲಿಸಿದಾಗ ಅಂತಹ ಸಮಸ್ಯೆ ಯಾವುದು ಇಲ್ಲ. ಬಹುತೇಕ ಹಾಸ್ಟೆಲ್‌ಗ‌ಳಲ್ಲಿ ಶುದ್ಧ ಕುಡಿಯುವ ನೀರಿನ ಸೌಲಭ್ಯವಿಲ್ಲ. ಹೀಗಾಗಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಆರಂಭಿಸುವಂತೆ ತಿಳಿಸಲಾಗಿದೆ. ಉಣಕಲ್ಲನ ಬುದ್ಧಿಮಾಂದ್ಯ ವಸತಿಗೃಹದಲ್ಲಿ ಆರೈಕೆ ಮಾಡುವ ಸಿಬ್ಬಂದಿ ಸಮಸ್ಯೆ ಕಂಡು ಬಂದಿದ್ದು, ಸುಮಾರು 50 ವಿದ್ಯಾರ್ಥಿಗಳಿಗೆ ತಕ್ಕಂತೆ ಸಿಬ್ಬಂದಿ ನೇಮಿಸಿಕೊಳ್ಳಬೇಕು. ತುರ್ತು ಸಂದರ್ಭದಲ್ಲಿ ಚಿಕಿತ್ಸೆಗೆ ತೆರಳಲು ವಾಹನ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದರು.

ಜಿಪಂ ಸಿಇಒ ಡಾ| ಸತೀಶ ಮಾತನಾಡಿ, ಮಾನವ ಹಕ್ಕುಗಳ ಪಾಲನೆ, ಆಯೋಗದ ದೂರುಗಳ ಪರಿಹಾರಕ್ಕೆ ಪೂರಕವಾಗಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ತರಬೇತಿ ಕೈಗೊಳ್ಳಲು ಜಿಲ್ಲಾಡಳಿತ ಸಿದ್ಧವಿದೆ. ಆಯೋಗ ಸೂಚಿಸುವ ದಿನಾಂಕದಂದು ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ದೂರು ಸ್ವೀಕಾರ: ಅಧಿಕಾರಿಗಳ ಸಭೆಯ ನಂತರ ಆಯೋಗದ ಸದಸ್ಯ ಕೆ.ಆರ್‌. ಚಂಗಪ್ಪ ಸಾರ್ವಜನಿಕರಿಂದ ದೂರು ಸ್ವೀಕರಿಸಿದರು. ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ದೂರು ಸಲ್ಲಿಸಿ ನ್ಯಾಯ ಒದಗಿಸುವಂತೆ ಮನವಿ ಮಾಡಿದರು. ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರು, ಎಸ್ಪಿ ಜಿ. ಸಂಗೀತಾ, ಪಾಲಿಕೆ ಆಯುಕ್ತ ಶಕೀಲ್‌ ಅಹ್ಮದ್‌, ಕಾರಾಗೃಹ ಜಿಲ್ಲಾ ಅಧೀಕ್ಷಕಿ ಆರ್‌.ಅನಿತಾ, ಪಾಲಿಕೆ ಅಪರ ಆಯುಕ್ತ ಅಜೀಜ್‌ ದೇಸಾಯಿ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.