ಶಂಕರಗೌಡ-ಅಂದಾನಪ್ಪ ಸ್ಮಾರಕಕ್ಕೆ ಪಾಪು ಆಗ್ರಹ

Team Udayavani, Nov 11, 2018, 4:05 PM IST

11-november-14.gif

ಧಾರವಾಡ: ಸ್ವಾತಂತ್ರ್ಯ ಹೋರಾಟ ಹಾಗೂ ಕರ್ನಾಟಕ ಏಕೀಕರಣ ಚಳವಳಿಗಳಲ್ಲಿ ಅಗ್ರಗಣ್ಯ ಹೋರಾಟಗಾರರಾಗಿದ್ದ ಅದರಗುಂಚಿ ಶಂಕರಗೌಡರು ಹಾಗೂ ಜಕ್ಕಲಿಯ ದೊಡ್ಡಮೇಟಿ ಅಂದಾನಪ್ಪನವರ ಗೌರವಾರ್ಥ ಸ್ಮಾರಕಗಳನ್ನು ಕೂಡಲೇ ಸ್ಥಾಪಿಸಿ ಅವರಿಗೆ ಸೂಕ್ತ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಎಂದು ನಾಡೋಜ ಡಾ| ಪಾಟೀಲ ಪುಟ್ಟಪ್ಪ ಹೇಳಿದರು.

ನಗರದ ಕವಿಸಂನಲ್ಲಿ ರಾಮು ಮೂಲಗಿ ಸ್ಥಾಪಿಸಿರುವ ಅದರಗುಂಚಿ ಶಂಕರಗೌಡರ ದತ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಇಬ್ಬರು ಮಹಾನ್‌ ದೇಶಭಕ್ತರ ಪುತ್ಥಳಿಗಳನ್ನು ಸ್ಥಾಪಿಸದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸಮಗ್ರ ಕರ್ನಾಟಕದ ಪ್ರಭಾವಿ ಧುರೀಣರಾಗಿದ್ದ ಈ ಇಬ್ಬರೂ ಸ್ವಾತಂತ್ರ್ಯ ಹೋರಾಟಗಾರರನ್ನು ಸಮಾಜ, ಸರ್ಕಾರ ಮರೆತಿದ್ದು ವಿಷಾದನೀಯ. ಮೂರು ತಿಂಗಳೊಳಗಾಗಿ ಪುತ್ಥಳಿಗಳು ಸ್ಥಾಪನೆಯಾಗಬೇಕೆಂಬುದು ಸಮಸ್ತ ಕನ್ನಡಿಗರ ಸಂಕಲ್ಪವಾಗಿದ್ದು, ಈ ಸಂಕಲ್ಪ ಸಾಧನೆಗೆ ಉಗ್ರ ಹೋರಾಟ ಮಾಡಲೂ ಸಿದ್ಧನಿದ್ದೇನೆ ಎಂದರು.

ಪಾಪು-ಬೆಲ್ಲದ ಆಯ್ಕೆ: ಶಂಕರಗೌಡ-ಅಂದಾನಪ್ಪ ಅವರ ಸ್ಮಾರಕ ರಚನೆಗಾಗಿ ಡಾ| ಪಾಟೀಲ ಪುಟ್ಟಪ್ಪ ಅವರನ್ನು ಅಧ್ಯಕ್ಷರನ್ನಾಗಿ, ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಹೋರಾಟದ ಕ್ರಿಯಾಸಮಿತಿ ರಚಿಸಲಾಗುವುದು ಎಂದು ಕವಿಸಂ ಕೋಶಾಧ್ಯಕ್ಷ ಕೃೃಷ್ಣ ಜೋಶಿ ಪ್ರಕಟಿಸಿದರು.

ಕರ್ನಾಟಕ ಏಕೀಕರಣದಲ್ಲಿ ಶಂಕರಗೌಡರ ಪಾತ್ರದ ಕುರಿತು ಹಿರಿಯ ಪತ್ರಕರ್ತ ಮಲ್ಲಿಕಾರ್ಜುನ ಸಿದ್ದಣ್ಣವರ ಉಪನ್ಯಾಸ ನೀಡಿ, ಸುಭಾಸಚಂದ್ರ ಬೋಸರ ಕ್ರಾಂತಿಕಾರಿ ವಿಚಾರಧಾರೆಗಳಿಂದ ಪ್ರಭಾವಿತರಾಗಿದ್ದ ಶಂಕರಗೌಡರು ನಂತರ ಮಹಾತ್ಮಾ ಗಾಂಧೀಜಿಯವರ ಸತ್ಯ, ಶಾಂತಿ, ಅಹಿಂಸಾ ತತ್ವಗಳಿಗೆ ಮಾರು ಹೋಗಿ ಆ ತತ್ವಗಳನ್ನು ತಮ್ಮ ಇಡೀ ಜೀವನದಲ್ಲಿ ಅಳವಡಿಸಿಕೊಂಡರು. ಕ್ರಾಂತಿ-ಶಾಂತಿ ಎರಡೂ ಮಾರ್ಗದಲ್ಲಿ ನಡೆದ ಶಂಕರಗೌಡರು ಅಪರೂಪದ ಗಾಂಧೀವಾದಿ ಎಂದರು.

ಅದರಗುಂಚಿ ಶಂಕರಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಡಾ| ಲಿಂಗರಾಜ ಅಂಗಡಿ, ಸುರೇಶಗೌಡ್ರು ಪಾಟೀಲ, ದತ್ತಿದಾನಿ ಡಾ| ರಾಮು ಮೂಲಗಿ ಇದ್ದರು. ಸಂಘದ ಉಪಾಧ್ಯಕ್ಷ ನಿಂಗಣ್ಣ ಕುಂಟಿ ಸ್ವಾಗತಿಸಿದರು. ಕೃಷ್ಣ ಜೋಶಿ ಪ್ರಾಸ್ತಾವಿಕ ಮಾತನಾಡಿದರು. ಪ್ರೊ| ಅಮೃತಾ ಮಡಿವಾಳ ನಿರೂಪಿಸಿದರು. ಸಿದ್ದು ಹಿರೇಮಠ ವಂದಿಸಿದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.