ಸ್ವಗ್ರಾಮದಲ್ಲಿ  ನೀರವ ಮೌನ

Team Udayavani, Mar 23, 2019, 10:01 AM IST

23-march-14.jpg

ಹುಬ್ಬಳ್ಳಿ: ಸಚಿವ ಸಿ.ಎಸ್‌. ಶಿವಳ್ಳಿ ಅವರ ನಿಧನದಿಂದಾಗಿ ಸ್ವಗ್ರಾಮ ಯರಗುಪ್ಪಿ ಸೇರಿದಂತೆ ಕುಂದಗೋಳ ಕ್ಷೇತ್ರವೇ ಶೋಕಲ್ಲಿ ಮುಳುಗಿದೆ. ಮೂರು ತಿಂಗಳ ಹಿಂದೆಯಷ್ಟೇ ಸಚಿವ ಸ್ಥಾನ ಅಲಂಕರಿಸಿದ್ದ ಪ್ರಭಾವಿ ನಾಯಕ ಚನ್ನಬಸಪ್ಪ ಸತ್ಯಪ್ಪ ಶಿವಳ್ಳಿ ನಿಧನದಿಂದ ಸ್ವಗ್ರಾಮ ಯರಗುಪ್ಪಿಯಲ್ಲಿ ನೀರವ ಮೌನ ಆವರಿಸಿದೆ. ಎಲ್ಲಿ ನೋಡಿದರೂ ಶಿವಳ್ಳಿ ಅವರ ಕುರಿತಾದ ಮಾತುಗಳೇ ಕೆಳಿಬರುತ್ತಿವೆ. ಕಿರಿಯರಿಂದ ಹಿಡಿದು ಹಿರಿಯರ ವರೆಗೆ ಒಂದೇ ಮಾತು, ಶಿವಳ್ಳಿ ಒಳ್ಳೆಯವರು ಎಂಬುದಾಗಿತ್ತು.

ಚುರುಮುರಿ ಪ್ರಿಯ: ಸಚಿವ ಸಿ.ಎಸ್‌. ಶಿವಳ್ಳಿ ಅವರಿಗೆ ಚುರುಮುರಿ ಖಾರ ಎಂದರೆ ತುಂಬಾ ಇಷ್ಟ. ಅವರಿಗೆ ಯಾರಾದರೂ ಭೇಟಿಯಾದರೆ ಸಾಕು ಅವರೊಂದಿಗೆ ಚುರಮುರಿ ಖಾರ ಸವಿಯುತ್ತಿದ್ದರು ಎಂದು ಶಿವಳ್ಳಿ ಅವರ ಒಡನಾಡಿ ಚನ್ನಪ್ಪ ಶಿವಪ್ಪ ಶಲವಡಿ ಹೇಳುತ್ತಾರೆ.

ಕೈ ಮಾಡಿದಲ್ಲಿ ನಿಲ್ಲುತ್ತಿದ್ದರು: ಸದಾ ಜನರೊಂದಿಗೆ ಬೆರೆಯುತ್ತಿದ್ದ ಶಿವಳ್ಳಿ ಅವರು ಕ್ಷೇತ್ರದಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ಎಲ್ಲಿಗಾದರೂ ಹೊರಟಾಗ ಯಾರಾದರೂ ಭೇಟಿಯಾದರೆ ನಿಂತು ಮಾತನಾಡಿಸಿ ಹೋಗುತ್ತಿದ್ದರು. ಒಂದು ಬಾರಿ ಹೊಲದಲ್ಲಿ ಹತ್ತಿ ಕಟ್ಟಿಗೆ ಆರಿಸುತ್ತಿದ್ದ ರೈತರು ಶಿವಳ್ಳಿ ಅವರ ವಾಹನ ನೋಡಿ ದೂರದಿಂದಲೇ ಕೈ ಮಾಡಿದ್ದಾರೆ. ಅದನ್ನು ಗಮನಿಸಿದ ಶಿವಳ್ಳಿ ಅವರು ತಮ್ಮ ವಾಹನ ನಿಲ್ಲಿಸಿ ಹೊಲದಲ್ಲಿದ್ದವರ ಯೋಗಕ್ಷೇಮ ವಿಚಾರಿಸಿ ನಂತರ ಪ್ರಯಾಣ ಬೆಳೆಸಿದ್ದರು ಎಂದು ಚಿಕ್ಕನೇರ್ತಿ ಗ್ರಾಮದ ನಿವಾಸಿ ಬಸವಣೆಪ್ಪ ಮಾಯಣ್ಣವರ ದುಃ ಖದಿಂದ ಸ್ಮರಿಸಿಕೊಳ್ಳುತ್ತಾರೆ.

ಚಪ್ಪಲಿ ನನ್ನ ಆಸ್ತಿ: ತಮ್ಮನ್ನು ಭೇಟಿಯಾಗಲು ಬಂದವರಿಗೆಲ್ಲಾ ವಿಧಾನಸೌಧದ ಹೊರಗಡೆ ಇರುವ ಚಪ್ಪಲಿ ನನ್ನ ಆಸ್ತಿ ಎಂದು ಹೆಮ್ಮೆಯಿಂದ ಹೇಳುತ್ತಿದ್ದರು. ಇನ್ನು ಮಹಿಳೆಯರನ್ನು ಅಪಾರ ಗೌರವದಿಂದ ಕಾಣುತ್ತಿದ್ದರು. ಅವರನ್ನು ಭೇಟಿಯಾದ ಮಹಿಳೆಯರು ಆಡುಭಾಷೆಯಂತೆ ಯಪ್ಪಾ ಹೇಗಿದಿಯಾ ಎಂದು ಮಾತು ಆರಂಭಿಸಿದರೆ, ನನ್ನ ಹಡದವ್ವ ನೀನು ನನಗೆ ಯಪ್ಪಾ ಎನ್ನುತ್ತೀಯೇ ಎಂದು ಹಿರಿಯರ ಕಾಲಿಗೆ ಎರಗುತ್ತಿದ್ದರು ಎಂದು ಯರಗುಪ್ಪಿ ಗ್ರಾಮದ ಪರಸಪ್ಪ ಬಿಳಿಎಲೆ ಹೇಳುತ್ತಾ ಗದ್ಗದಿತರಾದರು.

ಹಿಡಿದ ಕೆಲಸ ಬಿಡದ ಛಲಗಾರ: ಅಂದುಕೊಂಡ ಕೆಲಸ ಆಗುವವರೆಗೆ ಸರಿಯುತ್ತಿರಲಿಲ್ಲ ಶಿವಳ್ಳಿ. ಯಾವುದೇ ನಿರ್ಣಯ ತೆಗೆದುಕೊಂಡರೂ ಅಷ್ಟೆ, ಯಾವುದೇ ವಿಚಾರ ಬಂದರೂ ಅಷ್ಟೆ ಸ್ವಂತ ನಿರ್ಣಯ ತೆಗೆದುಕೊಳ್ಳುತ್ತಿದ್ದರು. ಕಳೆದ ಚುನಾವಣೆಯಲ್ಲಿ ಗೆಲವು ಸಾಧಿಸಿದ ನಂತರ ಇನ್ನಾರ ಜೊತೆಯೂ ವಿರೋಧ ಕಟ್ಟಿಕೊಳ್ಳುವುದಿಲ್ಲ. ಎಲ್ಲರೂ ನಮ್ಮವರೇ, ಎಲ್ಲರೂ ನನ್ನವರೇ ಎಂದು ಹೇಳಿದ್ದರು ಎಂದು ಶಿವಳ್ಳಿ ಅವರಿಂದ ಸದಾ ಬೀಗರೆ ಎಂದು ಕರೆಯಿಸಿಕೊಳ್ಳುತ್ತಿದ್ದ ಸೋಮಪ್ಪ ಚಳಪ್ಪನವರ ಹೇಳುತ್ತಾರೆ.

ಬಸವರಾಜ ಹೂಗಾರ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.