ವಸ್ತುನಿಷ್ಠ ಅಧ್ಯಯನ ನಡೆಸಬೇಕಿದೆ: ಸರಕಾರಿ ಶಾಲೆಗಳ ದಾಖಲಾತಿ ಇಳಿಕೆ


Team Udayavani, Nov 17, 2017, 6:14 PM IST

17-7.jpg

ಸರಕಾರಿ ಶಾಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ಮಕ್ಕಳ ದಾಖಲಾತಿ ಪ್ರಮಾಣ ಇಳಿಯುತ್ತಿರುವುದು ಕಳವಳಕಾರಿ ವಿಚಾರ. ಕರ್ನಾಟಕದ ಪ್ರಾಥಮಿಕ ಶಾಲೆಗಳಲ್ಲಿ ಕಳೆದ ಮೂರು ಶೈಕ್ಷಣಿಕ ವರ್ಷಗಳಲ್ಲಿ ದಾಖಲಾತಿ ಪ್ರಮಾಣ ಇಳಿದಿರುವುದನ್ನು ಸರಕಾರವೇ ಒಪ್ಪಿಕೊಂಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್‌ ಸೇಠ್ ಸದನಕ್ಕೆ ನೀಡಿರುವ ಮಾಹಿತಿ ಪ್ರಕಾರ 2014- 15ರಲ್ಲಿ 48,64,509 ಇದ್ದ ದಾಖಲಾತಿ 2016-17ರಲ್ಲಿ 46,50,349ಕ್ಕೆ ಇಳಿದಿದೆ. ಶೈಕ್ಷಣಿಕವಾಗಿ ಮುಂದುವರಿದಿರುವ ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ಹಿಂದುಳಿದಿರುವ ಬಾಗಲಕೋಟೆ ಜಿಲ್ಲೆಯಲ್ಲೂ ದಾಖಲಾತಿ ಪ್ರಮಾಣ ಕಡಿಮೆಯಾಗುತ್ತಿದೆ. ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆತರಲು ಸರಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದರೂ ಇದರಿಂದ ಹೆಚ್ಚಿನ ಪ್ರಯೋಜನವಾಗುತ್ತಿಲ್ಲ. ಸಂಪೂರ್ಣ ಉಚಿತ ಶಿಕ್ಷಣ, ಮಧ್ಯಾಹ್ನ ದೂಟ, ಹಾಲು, ಮೊಟ್ಟೆ ಎಂದು ಸರ್ವ ಸೌಲಭ್ಯಗಳಿದ್ದರೂ ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಸೇರಿಸಲು ಹಿಂದೇಟು ಹಾಕುತ್ತಿರು ವುದು ಏಕೆ ಎನ್ನುವುದು ಗಂಭೀರವಾಗಿ ಚಿಂತಿಸಬೇಕಾದ ವಿಚಾರ. ಶಿಕ್ಷಣ ಹಕ್ಕು ಕಾಯಿದೆ ಜಾರಿಯಾದ ಬಳಿಕ ಪ್ರತಿ ಮಗುವನ್ನು ಶಾಲೆಗೆ ಸೇರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ಈ ಕಾಯಿದೆ ಸರಕಾರಿ ಶಾಲೆಗಳಿಗೆ ಮುಳುವಾಗುತ್ತಿದೆ ಎನ್ನುವ ವಾದವಿದೆ. ಕಾಯಿದೆಯಿಂದಾಗಿ ಖಾಸಗಿ ಶಾಲೆಗಳು ಕೂಡ ಶೇ.25 ಸೀಟುಗಳನ್ನು ಬಡ ಮಕ್ಕಳಿಗೆ ಮೀಸಲಿಡಬೇಕು. ಇದರಿಂದಾಗಿ ಖಾಸಗಿ ಶಾಲೆಗಳಲ್ಲಿ ಸೀಟು ಸಿಗದವರು ಮಾತ್ರ ಸರಕಾರಿ ಶಾಲೆಗಳಿಗೆ ಸೇರುತ್ತಿದ್ದಾರೆ. ಹೀಗಾಗಿ ಈ ಕಾಯಿದೆಯನ್ನೇ ರದ್ದುಗೊಳಿಸಬೇಕೆಂದು ಹೇಳುವುದು ಮಾತ್ರ ಸರಿಯಲ್ಲ. ಕಾಯಿದೆಯಿಂದ ಆಗಿರುವ ಇತರ ಲಾಭಗಳನ್ನು ಕೂಡ ಪರಿಗಣಿಸಬೇಕು. ಆದರೆ ಕಾಯಿದೆಯಲ್ಲಿರುವ ನಿಯಮಗಳಂತೆ ಸರಕಾರಿ ಶಾಲೆಗಳಲ್ಲಿ ಶಿಕ್ಷಣವನ್ನು ನೀಡಲು ನಮ್ಮ ವ್ಯವಸ್ಥೆಗೆ ಸಾಧ್ಯವಾಗುತ್ತಿಲ್ಲ ಎನ್ನುವುದು ಮಾತ್ರ ವಾಸ್ತವ. 

ಹಾಗೆಂದು ಸರಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಪ್ರಮಾಣ ಕಡಿಮೆಯಾಗುತ್ತಿರುವುದು ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿರುವ ಸಮಸ್ಯೆಯಲ್ಲ. ಇಡೀ ದೇಶದಲ್ಲಿ ಈ ಸಮಸ್ಯೆಯಿದೆ ಎನ್ನುವುದು ಅಧ್ಯಯನವೊಂದರ ಮೂಲಕ ಕಂಡುಕೊಳ್ಳಲಾಗಿದೆ. 2010-11ರಿಂದ 2015-16ರ ನಡುವೆ 20 ರಾಜ್ಯಗಳಲ್ಲಿ ಸರಕಾರಿ ಶಾಲೆಗಳಿಗೆ ಸೇರುವ ಮಕ್ಕಳ ಸಂಖ್ಯೆ 1.3 ಕೋಟಿಯಷ್ಟು ಕಡಿಮೆಯಾಗಿದೆ. ಇದೇ ಅವಧಿಯಲ್ಲಿ ಖಾಸಗಿ ಶಾಲೆಗಳಿಗೆ ಸೇರುವ ಮಕ್ಕಳ ಸಂಖ್ಯೆ 1.75 ಕೋಟಿ ಹೆಚ್ಚಾಗಿದೆ. ಸರಾಸರಿ ಪ್ರಕಾರ ಹೇಳುವುದಾದರೆ ಪ್ರತಿ ಸರಕಾರಿ ಶಾಲೆಯಲ್ಲಿ ದಾಖಲಾತಿ ಪ್ರಮಾಣ 122ರಿಂದ 108ಕ್ಕೆ ಕುಸಿದಿದೆ ಹಾಗೂ ಖಾಸಗಿ ಶಾಲೆಗಳಲ್ಲಿ 202ರಿಂದ 208ಕ್ಕೇರಿದೆ. ರಾಷ್ಟ್ರೀಯ ಸಾರ್ವತ್ರಿಕ ಪ್ರಾಥಮಿಕ ಶಿಕ್ಷಣ ಕಾರ್ಯ ಕ್ರಮವಾಗಿರುವ ಸರ್ವ ಶಿಕ್ಷಾ ಅಭಿಯಾನಕ್ಕೆ ಸರಕಾರ 1.16 ಲಕ್ಷ ಕೋ. ರೂ. ಖರ್ಚು ಮಾಡಿದ್ದರೂ ಸರಕಾರ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕಡಿಮೆ ಯಾಗುತ್ತಿದೆ ಎಂಬ ಕಳವಳಕಾರಿ ಅಂಶವೂ ಈ ಅಧ್ಯಯನದಲ್ಲಿದೆ. 

ದಾಖಲಾತಿ ಪ್ರಮಾಣ ಕಡಿಮೆಯಾಗಲು ಜನರ ಜೀವನ ಮಟ್ಟ ಸುಧಾರಣೆ, ನಗರಗಳಿಗೆ ವಲಸೆ ಮತ್ತಿತರ ಕಾರಣಗಳನ್ನು ಸರಕಾರ ತೋರಿಸಿದರೂ ಸರಕಾರಿ ಶಾಲೆಗಳ ಶಿಕ್ಷಣದ ಗುಣಮಟ್ಟ ಕಳಪೆ ಎನ್ನುವ ಸಾರ್ವತ್ರಿಕ ಅಭಿಪ್ರಾಯವೇ ಮೂಲ ಕಾರಣ ಎನ್ನುವುದು ಅಲ್ಲಗಳೆಯ ಲಾಗದ ಸತ್ಯ. ಇಷ್ಟು ಮಾತ್ರ ಅಲ್ಲದೆ, ಶಾಲೆಗಳನ್ನು ಅಕಾಡೆಮಿಕ್‌ ಕಲಿಕೆಯ ಕೇಂದ್ರಗಳಷ್ಟೇ ಆಗಿ ಪರಿಭಾವಿಸಿರುವ ನಮ್ಮ ಸದ್ಯದ ಆಲೋಚನಾ ಕ್ರಮವನ್ನೂ ಪ್ರಸ್ತುತ ಕಾಲಘಟ್ಟಕ್ಕೆ ತಕ್ಕಂತೆ ಬದಲಾಯಿಸಿಕೊಳ್ಳಬೇಕಾದ ಅಗತ್ಯವಿದೆ. ಜತೆಗೆ ಸರಕಾರ ಶಿಕ್ಷಣ ಕ್ಷೇತ್ರವನ್ನು ಪ್ರಯೋಗಶಾಲೆಯೆಂಬಂತೆ ಪರಿಗಣಿಸಿ ಪ್ರತಿ ವರ್ಷ ಹೊಸ ಹೊಸ ನಿಯಮಗಳನ್ನು ರಚಿಸುತ್ತಿರುವುದು ಪೋಷಕರಲ್ಲಿ ಗೊಂದಲವುಂಟು ಮಾಡುತ್ತಿದೆ. ಪ್ರಸ್ತುತ ಸರಕಾರ ಹಾಕಿಕೊಳ್ಳುತ್ತಿರುವ ಕಾರ್ಯಕ್ರಮಗಳು ಮಕ್ಕಳನ್ನು ಶಾಲೆಗೆ ಸೆಳೆಯುವ ಉದ್ದೇಶಗಳನ್ನು ಹೊಂದಿವೆಯೇ ಹೊರತು ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವ ಕಾಳಜಿ ಹೊಂದಿಲ್ಲ. ಸರಕಾರಿ ಶಾಲೆಗಳಲ್ಲಿ ಕಲಿತರೆ ನೌಕರಿ ಸಿಗುವ ಖಾತರಿಯಿಲ್ಲ ಎನ್ನುವ ಭೀತಿಯೂ ಹೆತ್ತವರನ್ನು ಸಾಲಸೋಲ ಮಾಡಿಯಾದರೂ ಖಾಸಗಿ ಶಾಲೆಗಳಿಗೆ ಕಳುಹಿಸುವಂತೆ ಮಾಡುತ್ತಿದೆ. ಸರಕಾರಿ ಶಾಲೆಗಳ ಶಿಕ್ಷಕರನ್ನು ಜೀತದಾಳುಗಳಂತೆ ದುಡಿಸಿಕೊಳ್ಳುವ ಧೋರಣೆ ಬದಲಾಗದೆ ಶಿಕ್ಷಣದ ಗುಣಮಟ್ಟ ಸುಧಾರಿಸುವುದನ್ನು ನಿರೀಕ್ಷಿಸುವುದು ಅಸಾಧ್ಯ. ಎಲ್ಲೇ ಹೋದರೂ ಸರಕಾರಿ ಶಾಲೆಗಳ ಕುರಿತು ಸಿಗುವುದು ಈ ರೀತಿಯ ದೂರುಗಳೇ. ಆದರೆ ಈ ನ‌ಡುವೆಯೂ ಒಂದೆರಡು ರಾಜ್ಯಗಳು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಎನ್ನಬಹುದಾದ ಸುಧಾರಣೆ ಮಾಡಿರುವ ಗಮನಾರ್ಹ ಅಂಶ. ಪಕ್ಕದ ಕೇರಳದಲ್ಲಿ 2016ನೇ ಸಾಲಿನಲ್ಲಿ ಸರಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಶೇ.40.6ರಿಂದ ಶೇ. 49.9ಕ್ಕೇರಿರುವುದು ಅಚ್ಚರಿಪಡಿಸುವ ಸಾಧನೆ. ಅಂತೆಯೇ ಗುಜರಾತಿನಲ್ಲಿ ಶೇ.79.2ರಿಂದ ಶೇ.86ಕ್ಕೇರಿದೆ. ಈ ರಾಜ್ಯಗಳಲ್ಲಿ ಈ ಸಾಧನೆ ಹೇಗೆ ಸಾಧ್ಯವಾಯಿತು ಎನ್ನುವ ಕುರಿತು ವಸ್ತುನಿಷ್ಠ ಅಧ್ಯಯನ ನಡೆಸಿ ಆ ಮಾದರಿಯನ್ನು ಅಳವಡಿಸಿಕೊಂಡು ನೋಡಬಹುದಲ್ಲವೆ?

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.