ಪಟಾಕಿಗೆ ಲಗಾಮು 


Team Udayavani, Oct 25, 2018, 2:09 PM IST

25541.jpg

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸುಡುವುದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ವಿವೇಚನಾಯುಕ್ತ ಮಾತ್ರವಲ್ಲದೆ ಸಂತುಲಿತವೂ ಆಗಿದೆ. ಹೀಗಾಗಿ ಈ ತೀರ್ಪು ಮಾತ್ರ ಎಲ್ಲರಿಂದ ಸ್ವಾಗತಿಸಲ್ಪಟ್ಟಿದೆ.ಹಬ್ಬದ ವೇಳೆ ಪಟಾಕಿ ಸುಡುವುದರಿಂದ ವಾಯುಮಾಲಿನ್ಯ ಉಂಟಾಗುವ ಕಾರಣ ಪಟಾಕಿಯನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಆಗ್ರಹಿಸಿ ಕೆಲವರು ನ್ಯಾಯಾಂಗ ಮೆಟ್ಟಿಲೇರಿದ್ದರು. ಕಳೆದ ವರ್ಷವೂ ಇದೇ ರೀತಿಯ ದಾವೆ ಸುಪ್ರೀಂ ಕೋರ್ಟಿನಲ್ಲಿತ್ತು. 

ಕಳೆದ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ದಿಲ್ಲಿಗೆ ಸಂಬಂಧಪಟ್ಟಂತೆ ನೀಡಿದ ತೀರ್ಪನಲ್ಲಿ ಎಲ್ಲೂ ಪಟಾಕಿ ಸುಡಬಾರದು ಎಂದು ಕಟ್ಟುನಿಟ್ಟಿನ ಆದೇಶ ನೀಡಲಾಗಿತ್ತು. ಆದರೆ ಈ ಆದೇಶವನ್ನು ದಿಲ್ಲಿಯ ಜನತೆ ಸಾರಾಸಗಟಾಗಿ ಉಲ್ಲಂ ಸಿದ್ದರು. ಒಂದರ್ಥದಲ್ಲಿ ಇದು ನ್ಯಾಯಾಲಯದ ಆದೇಶವನ್ನು ಬಹಿರಂಗವಾಗಿ ಉಲ್ಲಂ ಸಿದಂತಾಗುತ್ತದೆ. ಅಲ್ಲದೆ ಈ ತೀರ್ಪು ಧಾರ್ಮಿಕ ನೆಲೆಯಲ್ಲಿ ಭಾರೀ ಟೀಕೆಗೂ ಗುರಿಯಾಗಿತ್ತು. ಪಟಾಕಿ ಸುಡುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ ಎನ್ನುವುದರಲ್ಲಿ ಯಾರಿಗೂ ತಕರಾರಿಲ್ಲ. ಆದರೆ ಒಂದು ಸಮುದಾಯದ  ಹಬ್ಬಕ್ಕೆ ಮಾತ್ರ ನಿರ್ಬಂಧಗಳನ್ನು ಹೇರುವುದು ಏಕೆ ಎಂಬ ಪ್ರಶ್ನೆ ಸಾಮಾಜಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಗೀಡಾಗಿತ್ತು.
 
 ಈ ಎಲ್ಲ ಅಂಶಗಳನ್ನು ಪರಿಗಣಿಸಿರುವ ಸುಪ್ರೀಂ ಕೋರ್ಟ್‌ ಈ ಸಲ ಪಟಾಕಿ ಸುಡುವುದನ್ನು ಸಂಪೂರ್ಣ ನಿಷೇಧಿಸದಿದ್ದರೂ ಕೆಲವೊಂದು ಕಟ್ಟುನಿಟ್ಟಿನ ಶರತ್ತುಗಳನ್ನು ವಿಧಿಸಿದೆ. ಆ ಪ್ರಕಾರ ದೀಪಾವಳಿ ಹಬ್ಬದ ವೇಳೆ ರಾತ್ರಿ 8ರಿಂದ 10 ಗಂಟೆಯ ಒಳಗಾಗಿ ಪಟಾಕಿ ಸುಡಬೇಕು ಎಂದು ಹೇಳಿದೆ. ಕ್ರಿಸ್‌ಮಸ್‌ ಮತ್ತು ಹೊಸ ವರ್ಷಾಚರಣೆ ಸಂದರ್ಭದಲ್ಲಿ ರಾತ್ರಿ 11.55ರಿಂದ 12.30ರ ತನಕ ಮಾತ್ರ ಪಟಾಕಿ ಸುಡಲು ಅವಕಾಶ ನೀಡುವ ಮೂಲಕ ಒಂದು ಧರ್ಮಕ್ಕೆ ಮಾತ್ರ ಕಟ್ಟುಪಾಡು ವಿಧಿಸಲಾಗುತ್ತದೆ ಎಂಬ ಆರೋಪಕ್ಕೆ ಅವಕಾಶ ಇಲ್ಲದಂತೆ ಮಾಡಿರುವುದು ಸಮುಚಿತವಾದ ನಿರ್ಧಾರ. 

ಪರಿಸರಕ್ಕೆ ಹೆಚ್ಚು ಹಾನಿ ಮಾಡದ ಹಸಿರು ಪಟಾಕಿಗಳನ್ನು ಬಳಸಬೇಕೆಂದು ಹೇಳಿರುವುದರ ಹಿಂದಿನ ಉದ್ದೇಶ ಉತ್ತಮವಾಗಿದ್ದರೂ ಅದರ ಪ್ರಾಯೋಗಿಕ ಪರಿಣಾಮಗಳನ್ನು ಗ್ರಹಿಸಿದಂತೆ ಕಾಣಿಸುತ್ತಿಲ್ಲ. ಈಗಾಗಲೇ ಪಟಾಕಿ ತಯಾರಕರು ಹಬ್ಬಕ್ಕಾಗಿ ಪಟಾಕಿ ತಯಾರಿಸಿಯಾಗಿದೆ. ಇದೀಗ ಅವುಗಳನ್ನು ಬಳಸಬಾರದು, ಕಡಿಮೆ ಹಾನಿಯುಂಟು ಮಾಡುವ ಪಟಾಕಿ ಬಳಸಬೇಕೆಂದು ಹೇಳಿದರೆ ತಯಾರಿಸಿರುವ ಪಟಾಕಿಯನ್ನು ಏನು ಮಾಡುವುದು ಎಂಬ ಪ್ರಶ್ನೆ ಉದ್ಭವಿಸುತ್ತದೆ.
 ಪಟಾಕಿ ಉದ್ಯಮ ಲಕ್ಷಾಂತರ ಜನರಿಗೆ ನೇರವಾಗಿ ಮತ್ತು ಪರೋಕ್ಷವಾಗಿ ಉದ್ಯೋಗವಕಾಶ ಕೊಡುತ್ತಿದೆ. ಏಕಾಏಕಿ ನ್ಯಾಯಾಲಯ ಪಟಾಕಿಯನ್ನು ನಿಷೇಧಿಸಿದ್ದರೆ ಅವರ ಬದುಕಿನ ಮೇಲೆ ಗಂಭೀರವಾದ ಪರಿಣಾಮವಾಗುತ್ತಿತ್ತು. ಈ ನೆಲೆಯಲ್ಲೂ ನ್ಯಾಯಾಲಯ ತೀರ್ಪು ನೀಡುವಾಗ ಸಂಯಮವನ್ನು ಪಾಲಿಸಿದೆ. 
ಚಳಿಗಾಲದಲ್ಲಿ ನಿರ್ದಿಷ್ಟವಾಗಿ ಉತ್ತರ ಭಾರತದಲ್ಲಿ ಹವಾಮಾನ ದುಸ್ತರವಾಗುತ್ತದೆ. ದಿಲ್ಲಿ ನಗರವಂತೂ ಅಕ್ಷರಶಃ ಗ್ಯಾಸ್‌ ಚೇಂಬರ್‌ ಆಗುವುದನ್ನು ಪ್ರತಿವರ್ಷ ನೋಡುತ್ತಿದ್ದೇವೆ. ಪಂಜಾಬ್‌, ಹರ್ಯಾಣ ಮತ್ತಿತರ ರಾಜ್ಯಗಳ ರೈತರು ಅಪಾರ ಪ್ರಮಾಣದ ಬೈಹುಲ್ಲು ಸುಡುವುದು ಉತ್ತರ ಭಾರತದಲ್ಲಿ ಭಾರೀ ಪ್ರಮಾಣದ ವಾಯುಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಇದೇ ವೇಳೆ ದೀಪಾವಳಿ ಹಬ್ಬವೂ ಬರುವುದರಿಂದ ಪಟಾಕಿಯ ಮಾಲಿನ್ಯವೂ ಸೇರಿಕೊಳ್ಳುತ್ತದೆ. ಹೀಗೆ ಎಲ್ಲೆಡೆಯ ಒತ್ತಡದಿಂದ ಆ ಭಾಗದ ವಾತಾವರಣ ಕಲುಷಿತಗೊಂಡು ಜನರು ಉಸಿರಾಡುವುದಕ್ಕೂ ಕಷ್ಟಪಡುತ್ತಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಪಟಾಕಿ ಸುಡುವುದಕ್ಕೆ ವಿಧಿಸಿರುವ ನಿರ್ಬಂಧಗಳು ಒಂದಿಷ್ಟಾದರೂ ನಿರಾಳತೆಯನ್ನು ಒದಗಿಸಬಹುದು. 

ಆದರೆ ಕಾನೂನಿಂದಲೇ ಎಲ್ಲವನ್ನೂ ನಿಯಂತ್ರಿಸಲಾಗದು. ಕಾನೂನು ಇರುವುದೇ ಉಲ್ಲಂ ಸಲು ಎಂಬ ಭಾವನೆಯಿರುವ ಜನರೂ ಇರುವುದರಿಂದ ನಿಷೇಧವೊಂದರಿಂದಲೇ ಪಟಾಕಿ ಬಳಕೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಈ ಕುರಿತು ಜನರಲ್ಲಿ ಸ್ವಯಂ ಅರಿವು ಮೂಡಬೇಕು. ನೀತಿ ರೂಪಿಸುವುದು ಮತ್ತು ಅದನ್ನು ಜಾರಿಗೊಳಿಸುವ ಶಾಸಕಾಂಗ ಮತ್ತು ಕಾರ್ಯಾಂಗದ ಹೊಣೆಗಾರಿಕೆ. ಇದರಲ್ಲಿ ಲೋಪವಾದರೆ ಮಾತ್ರ ನ್ಯಾಯಾಂಗ ಮಧ್ಯ ಪ್ರವೇಶ ಮಾಡಬೇಕು. ಸರಕಾರ ಮತ್ತು ಸಮಾಜವೇ ಪಟಾಕಿಯಿಂದಾಗುವ ಹಾನಿಯನ್ನು ಅರಿತುಕೊಂಡು ಅದರ ಬಳಕೆಯಿಂದ ದೂರವಾದರೆ ಉತ್ತಮ. ಜನರಲ್ಲಿ ಪಟಾಕಿಯ ಹಾನಿಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಎಲ್ಲ ಸಮುದಾಯಗಳ ಮುಖಂಡರು ನೇತೃತ್ವ ವಹಿಸಿಕೊಂಡರೆ ಅನುಕೂಲವಾಗುತ್ತಿತ್ತು. 

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.