ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ

Team Udayavani, Oct 1, 2018, 4:44 PM IST

1-october-19.gif

ಗಜೇಂದ್ರಗಡ: ಸಮೀಪದ ಗೋಗೇರಿ ಗ್ರಾಪಂನಲ್ಲಿ ರಾಜೀವ ಗಾಂಧಿ ಸೇವಾ ಕೇಂದ್ರದ ನೂತನ ಕಟ್ಟಡ ನಿರ್ಮಾಣವಾಗಿ ವರ್ಷ ಕಳೆದರೂ ಈವರೆಗೂ ಉದ್ಘಾಟನೆ ಭಾಗ್ಯ ಕಂಡಿಲ್ಲ. ಪರಿಣಾಮ ಕಟ್ಟಡದ ಬಾಗಿಲಿಗೆ ಗೆದ್ದಲು ಹತ್ತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

2016-17ನೇ ಸಾಲಿನಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಗೋಗೇರಿ ಗ್ರಾಪಂನಲ್ಲಿ ನೂತನ ಕಟ್ಟಡದ ಕಾಮಗಾರಿ ಪೂರ್ಣಗೊಂಡರೂ ಉದ್ಘಾಟನೆ ಮಾತ್ರ ಈವರೆಗೂ ಆಗಿಲ್ಲ. ಇದರಿಂದ ಗ್ರಾಪಂ ಹಳೆಯ ಕಟ್ಟಡದಲ್ಲೇ ಕಾರ್ಯ ನಿರ್ವಹಿಸುವ ದುಸ್ಥಿತಿ ಬಂದೊದಗಿದೆ.

ಹಳೆಯ ಗ್ರಾಪಂ ಕಚೇರಿ ಪಕ್ಕದಲ್ಲೇ ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡ ನಿರ್ಮಾಣ ಮಾಡಲಾಗಿದೆ. ಸರಕಾರಿ ಸೇವೆಗಳನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಈ ಕಟ್ಟಡ ನಿರ್ಮಾಣ ಮಾಡಲಾಗಿದೆ. ಆದರೆ ಕಾಮಗಾರಿ ಸಂಪೂರ್ಣವಾಗಿ ವರ್ಷ ಗತಿಸಿದರೂ ಈವರೆಗೂ ಜನ ಸೇವೆಗೆ ಅಣಿಯಾಗದಿರುವುದರಿಂದ ಸರಕಾರಿ ಸೇವೆಯಿಂದ ಜನರು ವಂಚಿತರಾಗಿತ್ತಿದ್ದಾರೆ. 2014ರಲ್ಲೇ ಆರಂಭವಾಗಿರುವ ಕಟ್ಟಡ ಕಾಮಗಾರಿಯು ಕುಂಟುತ್ತಾ ತೆವಳುತ್ತಾ ಸಾಗಿ ಮೂರು ವರ್ಷಗಳ ಬಳಿಕ ಪೂರ್ಣಗೊಂಡಿತು. ಇದೀಗ ಉದ್ಘಾಟನೆಗಾಗಿ ಕಳೆದ ವರ್ಷಗಳಿಂದ ಕಾದಿರುವ ಕಟ್ಟಡದ ಬಾಗಿಲಿಗೆ ಗೆದ್ದಲು ಹತ್ತುತ್ತಿದೆ. ಉದ್ಘಾಟನೆಗೂ ಮುನ್ನವೇ ದ್ವಾರ ಬಾಗಿಲು ದುರಸ್ತಿಗೊಳಪಟ್ಟಿರುವುದು ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.

ಗ್ರಾಮೀಣ ಭಾಗದ ಜನತೆ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವುದರ ಜೊತೆಗೆ ಗ್ರಾಪಂ ಕಚೇರಿಗಳೂ ಆಧುನಿಕರಣಗೊಳ್ಳಬೇಕು ಎನ್ನುವ ಉದ್ದೇಶದಿಂದ ಸರಕಾರ ಲಕ್ಷಾಂತರ ಅನುದಾನ ವ್ಯಯಿಸಿ ರಾಜೀವ್‌ ಗಾಂಧಿ ಸೇವಾ ಕೇಂದ್ರ ಕಟ್ಟಡ ನಿರ್ಮಾಣ ಮಾಡಲಾಗಿದೆ. ಆದರೆ ಸಂಬಂಧಪಟ್ಟ ಅಧಿಕಾರಿಗಳ ಇತ್ಛಶಕ್ತಿ ಕೊರತೆಯಿಂದಾಗಿ ಸರಕಾರದ ಕನಸು ಸಾಕಾರಗೊಳ್ಳುವಲ್ಲಿ ವಿಫಲತೆ ಕಾಣುತ್ತವೆ ಎನ್ನುವುದಕ್ಕೆ ಗೋಗೇರಿ ಗ್ರಾಪಂನ ರಾಜೀವಗಾಂಧಿ ಸೇವಾ ಕೇಂದ್ರ ಕಟ್ಟಡ ಉದ್ಘಾಟನೆ ಆಗದಿರುವುದೇ ಸಾಕ್ಷಿಯಾಗಿದೆ.

ಕೇಂದ್ರ ಹಾಗೂ ರಾಜ್ಯ ಸರಕಾರಗಳ ಯೋಜನೆಗಳನ್ನು ಪರಸ್ಪರ ಪರಿಚಯಿಸುವ ಮಾಹಿತಿ ಕೇಂದ್ರದಂತಿರುವ ರಾಜೀವ್‌ ಗಾಂಧಿ ಸೇವಾ ಕೇಂದ್ರ ಗ್ರಾಮೀಣ ಭಾಗದ ಜನತೆಗೆ ಸಂಜೀವಿನಿಯಿದ್ದಂತೆ. ಅಂತಹ ಕಟ್ಟಡ ಪೂರ್ಣಗೊಂಡು ಜನ ಸೇವೆಗೆ ಸಿದ್ಧಗೊಂಡರೂ ಉದ್ಘಾಟನೆಯಾಗಿಲ್ಲ. ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ ಎನ್ನುವಂತಾಗಿದೆ. ಗ್ರಾಮೀಣ ಜನರ ಹಿತ ದೃಷ್ಟಿಯಿಂದ ನಿರ್ಮಾಣವಾಗಿರುವ ರಾಜೀವ್‌ ಗಾಂಧಿ ಸೇವಾ ಕೇಂದ್ರ ಕಟ್ಟಡ ಕೂಡಲೇ ಉದ್ಘಾಟನೆ ಮಾಡುವ ಮೂಲಕ ಸಾರ್ವಜನಿಕರ ಸೇವೆಗೆ ಅಣಿಗೊಳಿಸಬೇಕು ಎನ್ನುವುದು ಜನಸಾಮಾನ್ಯರ ಆಗ್ರಹವಾಗಿದೆ.

ಗೋಗೇರಿ ಗ್ರಾಪಂನ ರಾಜೀವ್‌ ಗಾಂಧಿ ಸೇವಾ ಕೇಂದ್ರ ಕಟ್ಟಡ ಕಾಮಗಾರಿ ಪೂರ್ಣಗೊಂಡಿದೆ. ಉದ್ಘಾಟನೆಗೆ ಶಾಸಕರು ದಿನಾಂಕ ನಿಗದಿಕೊಳಿಸಿದ ತಕ್ಷಣವೇ ಜನ ಸೇವೆಗೆ ನೀಡಲಾಗುವುದು.
∙ಸಿ.ಎಂ. ಇಂಬ್ರಾಪುರ, ಪಿಡಿಒ

.ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.