ಮನೆ-ಮನ ಬೆಳಗಿದ ದೀವಿಗೆ 

Team Udayavani, Nov 9, 2018, 4:50 PM IST

9-november-20.gif

ಗದಗ: ಅವಳಿ ನಗರ ಸೇರಿದಂತೆ ಜಿಲ್ಲಾದ್ಯಂತ ಎಲ್ಲೆಲ್ಲೂ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ  ಮನೆ ಮಾಡಿದೆ. ಮನೆ, ಅಂಗಡಿ ಮುಂಗಟ್ಟುಗಳು ಹಾಗೂ ಹೋಟೆಲ್‌ಗ‌ಳಲ್ಲಿ ಧನಲಕ್ಷ್ಮೀ  ಆರಾಧನೆ ಜೋರಾಗಿತ್ತು. ಮಹಿಳೆಯರು ನೂತನ ವಸ್ತ್ರ, ಚಿನ್ನಾಭರಣ ಧರಿಸಿ ಗಮನ ಸೆಳೆದರೆ, ಮುದ್ದು ಮಕ್ಕಳು, ಯುವಕರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ದೀಪಾವಳಿ ಹಬ್ಬದ ಆಚರಣೆಗಾಗಿ ಜಿಲ್ಲಾದ್ಯಂತ ಮಹಿಳೆಯರು ಬೆಳಗ್ಗೆಯಿಂದಲೇ ಸಿದ್ಧತೆಯಲ್ಲಿ ತೊಡಗಿದ್ದರು. ದೀಪಾವಳಿ ಬಲಿಪಾಡ್ಯಮಿ ಅಂಗವಾಗಿ ನಗರದ ವಿವಿಧ ದೇವಸ್ಥಾನಗಳಾದ ಪುಟ್ಟರಾಜ ಕವಿ ಗವಾಯಿಗಳ ಆಶ್ರಮ, ಸಾಯಿಬಾಬಾ ದೇವಸ್ಥಾನ, ರಾಚೋಟೇಶ್ವರ ದೇವಸ್ಥಾನ, ಜೋಡು ಮಾರುತಿ, ಗಂಗಾಪುರ ಪೇಟೆ ದುರ್ಗಾದೇವಿ, ಬೆಟಗೇರಿ ಬನಶಂಕರಿ ದೇವಸ್ಥಾನ ಸೇರಿದಂತೆ ಅವಳಿ ನಗರದ ಪ್ರಮುಖ ದೇವಸ್ಥಾನ ಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ದೀಪಾವಳಿ ಹಬ್ಬದಂದೇ ಹೊಸದಾಗಿ ವಾಹನಗಳ ಖರೀದಿಸಿದವರು ತಮ್ಮ ಇಷ್ಟ ದೇವರ ಸನ್ನಿಧಾನದಲ್ಲಿ ನೂತನ ಪೂಜೆ ನೆರವೇರಿಸಿದರು.

ಮನೆ-ಮನ ಬೆಳಗಿದ ದೀವಿಗೆ: ಬಾನಂಗಳದಲ್ಲಿ ಕತ್ತಲೆ ಆವರಿಸುತ್ತಿದ್ದಂತೆ ಎಲ್ಲರ ಮನೆಗಳಲ್ಲೂ ಹಣತೆಯ ದೀಪಗಳು ಮನೆ- ಮನಗಳನ್ನು ಬೆಳಗಿದವು. ದೀಪಾವಾಳಿ ನಿಮಿತ್ತ ಬಹುತೇಕರು ತಮ್ಮ ಮನೆ ಮುಖ್ಯ ಬಾಗಿಲು, ಕಿಟಕಿ, ಹಾಗೂ ಕಾಂಪೌಂಡ್‌ ಗೋಡೆಗಳ ಮೇಲೆ ಹಣತೆಗಳನ್ನು ಸಾಲು ಸಾಲಾಗಿ ಹಚ್ಚಿ, ಬೆಳಕು ಮೂಡಿಸಿರುವುದು ನೋಡುಗರಿಗೆ ಮುದ ನೀಡಿತು.

ಬಾಗಿಲು ಹಾಗೂ ದೇವರ ಮಂಟಪಗಳನ್ನು ಬಾಳೆ ಎಲೆ ಹಾಗೂ ಮಾವಿನ ಎಲೆಗಳಿಂದ ಅಂಲಕರಿಸಲಾಗಿತ್ತು. ಇನ್ನೂ ಕೆಲವರು ಮನೆ ಹಾಗೂ ಅಂಗಡಿ ಮುಂಗಟ್ಟುಗಳನ್ನು ವರ್ಣರಂಜಿತ ವಿದ್ಯುತ್‌ ದೀಪಗಳಿಂದ ಅಲಂಕರಿಸಿದ್ದರಿಂದ ಬೆಳಕಿನ ಕಿರಣಗಳ ಮಧ್ಯೆ ಕಟ್ಟಡಗಳು ಜಗಮಗಿಸುತ್ತಿದ್ದವು.

ಎಲ್ಲೆಲ್ಲೂ ಲಕ್ಷ್ಮೀ ದೇವಿ ಆರಾಧನೆ: ಅವಳಿ ನಗರದ ಸಾವಿರಾರು ಅಂಗಡಿ ಮುಂಗಟ್ಟುಗಳು, ನೂರಾರು ಹೋಟೆಲ್‌ಗ‌ಳಲ್ಲಿ ಅರ್ಚಕರು ಧಾರ್ಮಿಕ ವಿ ವಿಧಾನಗಳೊಂದಿಗೆ ಮಹಾಗಣಪತಿ ಹಾಗೂ ತಾಯಿ ಅಷ್ಟಲಕ್ಷ್ಮೀಯರ ಪೂಜೆ ನೆರವೇರಿಸಿದರು.

ಪೂಜೆಗೆ ನೆಂಟರಿಷ್ಟರು, ಸ್ನೇಹಿತರು ಹಾಗೂ ಅಕ್ಕ-ಪಕ್ಕದವರನ್ನು ಪೂಜೆಗೆ ಆಹ್ವಾನಿಸಿ ಬಾಳೆ ಹಣ್ಣು, ಎಲೆ ಅಡಿಕೆ ಹಾಗೂ ಉಪಹಾರ ನೀಡಿ ಸತ್ಕರಿಸಿದರು. ಸ್ಥಿತಿವಂತ ಉದ್ಯಮಿಗಳು ಹಬ್ಬದೂಟ ಬಡಿಸಿ ತಾಯಿ ಲಕ್ಷ್ಮೀದೇವಿ ಕೃಪೆಗೆ ಪಾತ್ರರಾದರು. ಇನ್ನುಳಿದಂತೆ ಮನೆಗಳಲ್ಲೂ ಮುತ್ತೈದೆಯರು ತಾಯಿ ಲಕ್ಷೀದೇವಿ, ಗೌವರಮ್ಮ ಪೂಜೆ ನೆರವೇರಿಸಿದರು. ಮನೆ ದೇವರ ಕೋಣಿಯಲ್ಲಿ ಕಳಶ ಹಾಗೂ ಮಡಿ ನೀರು ತುಂಬಿದ್ದ ಕಂಚಿನ ತಂಬಿಗೆಯಲ್ಲಿ ತೆಂಗಿನ ಕಾಯಿಗೆ ಸೀರೆ ಉಡಿಸಿ ವಿವಿಧ ಹೂವುಗಳಿಂದ ಲಕ್ಷ್ಮೀ  ದೇವಿ ಪ್ರತಿಮೆ ತಯಾರಿಸಿ ಭಕ್ತಿಯಿಂದ ಪೂಜಿಸಿದರು. 

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.