ಬರ ಅಧ್ಯಯನಕ್ಕೆ ಪೂರ್ವ ತಯಾರಿ


Team Udayavani, Jan 7, 2019, 11:39 AM IST

7-january-20.jpg

ಗದಗ: ಬೆಳಗಾವಿ ವಿಭಾಗದ ಬರ ಪೀಡಿತ ಪ್ರದೇಶದ ಅಧ್ಯಯನ, ಪರಿಹಾರ ಹಾಗೂ ನಿರ್ವಹಣೆ ಕುರಿತು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟದ ಉಪಸಮಿತಿ ಏ. 7ರಂದು ಜಿಲ್ಲೆಗೆ ಭೇಟಿ ನೀಡಲಿದ್ದು, ಸಂಬಂಧಿತ ಅಧಿಕಾರಿಗಳು ಸರಿಯಾದ ಮಾಹಿತಿಯೊಂದಿಗೆ ಸೂಚಿತ ಸ್ಥಳಗಳಲ್ಲಿ ಹಾಜರಿರಬೇಕು. ಜಿ.ಪಂ. ಸಭಾಂಗಣದಲ್ಲಿ ಮಧ್ಯಾಹ್ನ ನಡೆಯಲಿರುವ ಪ್ರಕೃತಿ ವಿಕೋಪದಿಂದ ಸಂಭವಿಸಿರುವ ಹಾನಿ ಹಾಗೂ ಕೈಗೊಂಡ ಪರಿಹಾರ ಕ್ರಮಗಳ ಪರಿಶೀಲನಾ ಸಭೆಗೆ ಅಗತ್ಯದ ಮಾಹಿತಿಯೊಂದಿಗೆ ತಪ್ಪದೇ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ರವಿವಾರ ಜರುಗಿದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಸಚಿವ ಸಂಪುಟದ ಉಪಸಮಿತಿಗೆ ಒದಗಿಸಬೇಕಾದ ಮಾಹಿತಿ ಹಾಗೂ ಸಿದ್ಧತಾ ಕ್ರಮಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.

ಜಿಪಂ ಸಿಇಒ ಮಂಜುನಾಥ ಚವ್ಹಾಣ ಮಾತನಾಡಿ, ಈಗಾಗಲೇ ರಾಜ್ಯ ಸರ್ಕಾರ ಪ್ರತಿ ತಾಲೂಕಿಗೆ ಬರನಿರ್ವಹಣೆಯ ವಿವಿಧ ಕಾರ್ಯಗಳಿಗೆ ತಲಾ 50 ಲಕ್ಷ ರೂ. ಅನುದಾನ ಘೋಷಿಸಿದೆ. ಆ ಪೈಕಿ ತಲಾ 25 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ತಾಲೂಕು ಸಮಿತಿಗಳು 50 ಲಕ್ಷ ರೂ. ಒಳಗಾಗಿ ಕ್ರಿಯಾ ಯೋಜನೆಗಳನ್ನು ತಯಾರಿಸಿ ಮಂಜೂರಾತಿ ಪಡೆಯಬೇಕು ಎಂದು ತಿಳಿಸಿದರು.

ಮುಂಗಾರು ಮಳೆ ಕೊರತೆಯಿಂದ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ ಬೆಳೆಗಳ ಹಾನಿ, ಬೆಳೆ ಸಾಲ ಮನ್ನಾ ಯೋಜನೆಯಡಿ ರೈತರ ನೋದಣಿ ಕಾರ್ಯ, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆ, ಮುಂಬರುವ ಬೇಸಿಗೆಯಲ್ಲಿ ಸಂಭವನೀಯ ನೀರಿನ ಕೊರತೆ, ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಬೇಕು.

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೃಷಿಕರಿಗೆ, ಕಾರ್ಮಿಕರಿಗೆ ಉದ್ಯೋಗ, ಜಾನುವಾರುಗಳಿಗೆ ನೀರು, ಮೇವಿನ ಪೂರೈಕೆ, ಮೇವಿನ ಕೊರತೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚುವರಿ ಮೇವಿನ ಕಿಟ್ಟು ಪೂರೈಕೆ, ಜಿಲ್ಲಾಡಳಿತ ಮೂಲಕ ಟೆಂಡರ್‌ ಮೂಲಕ ಮೇವು ಖರೀದಿ, ಅಗತ್ಯವಿರುವೆಡೆ ಮೇವು ಬ್ಯಾಂಕ್‌ ಹಾಗೂ ಗೋಶಾಲೆ ತೆರೆಯವ ಸ್ಥಳಗಳು, ಅವುಗಳಿಗೆ ಅಲ್ಲಿ ಇರುವ ಮೂಲ ಸೌಕರ್ಯ, ಸಚಿವ ಸಂಪುಟದ ಉಪಸಮಿತಿಯ ಹಿಂದಿನ ಪರಿಶೀಲನಾ ಸಭೆಗಳಲ್ಲಿ ಸೂಚಿತ ವಿಷಯಗಳ ಕುರಿತು ಕೈಕೊಂಡ ಕ್ರಮಗಳು ಇತ್ಯಾದಿ ವಿಷಯಗಳ ಬಗ್ಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಪರಿಶೀಲನೆ ನಡೆಸಿದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಪಿ.ಎಸ್‌. ಮಂಜುನಾಥ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ, ಜಿ.ಪಂ. ಯೋಜನಾ ನಿರ್ದೇಶಕ ಟಿ. ದಿನೇಶ, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ಎಲ್ಲ ತಾಲೂಕಾಗಳ ತಹಶೀಲ್ದಾರರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ಬರನಿರ್ವಹಣೆ ತಾಲೂಕು ಮತ್ತು ಹೋಬಳಿ ಮಟ್ಟದ ನೊಡಲ್‌ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.