ಕೀಟಬಾಧೆಗೆ ಒಣಗುತ್ತಿದೆ ಕಡಲೆ ಪೈರು

Team Udayavani, Jan 13, 2019, 10:02 AM IST

13-january-17.jpg

ನರಗುಂದ: ನವಿಲುತೀರ್ಥ ಜಲಾಶಯದ ಕಾಲುವೆ ನೀರನ್ನೇ ನೆಚ್ಚಿಕೊಂಡು ಅಷ್ಟಿಷ್ಟು ಬೆಳೆ ತೆಗೆದ ರೈತರಿಗೀಗ ಕೀಟಬಾಧೆ ಕಾಡಲಾರಂಭಿಸಿದೆ. ಕಾಳು ಕಚ್ಚಿದ ಸಂದರ್ಭದಲ್ಲಿ ಪರಿಪೂರ್ಣವಾಗಿ ಬೆಳೆಯುವ ಮೊದಲೇ ಕಡಲೆ ಪೈರು ಒಣಗಿ ನಿಂತಿವೆ.

ಹಿಂಗಾರು ಅವಧಿಯಲ್ಲಿ ಹಿಂದೆಂದಿಗಿಂತಲೂ ಈ ಬಾರಿ ವರದಾನವಾದ ನವಿಲುತೀರ್ಥ ಜಲಾಶಯ ಭರ್ತಿಯಾಗಿದ್ದರಿಂದ ಹಿಂಗಾರು ಬೆಳೆಗಳ ಬಹುದೊಡ್ಡ ಕನಸು ಹೊತ್ತ ರೈತರು ಗಂಚಿಯ ಜೋಳ, ಗೋಧಿ ಕಡಿಮೆ ಮಾಡಿ ಅತಿಹೆಚ್ಚು ಪ್ರದೇಶದಲ್ಲಿ ಕಡಲೆ ಬಿತ್ತನೆ ಮಾಡಿದ್ದೇ ರೈತರ ಆಶಾಗೋಪುರಕ್ಕೆ ಮುಳುವಾಗಿ ನಿಂತಿದ್ದು ವಿಪರ್ಯಾಸ.

ವಾಸ್ತವಿಕವಾಗಿ ಕೃಷಿ ಇಲಾಖೆ ವಾರ್ಷಿಕ ಗುರಿ ತಾಲೂಕಿನಲ್ಲಿ 21 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಕಡಲೆ ಬಿತ್ತನೆ ಇತ್ತು. ಆದರೆ ಗುರಿ ಮೀರಿದ ರೈತರು ಈ ಬಾರಿ 21,685 ಹೆಕ್ಟೇರ್‌ ಪ್ರದೇಶದಲ್ಲಿ ಕಡಲೆ ಬಿತ್ತನೆ ಮಾಡಿ ಇದೀಗ ಕೈಸುಟ್ಟುಕೊಂಡಂತಾಗಿದೆ.

ಹಚ್ಚ ಹಸಿರಿನಿಂದ ಕಂಗೊಳಿಸಬೇಕಾದ ಸಮೃದ್ಧ ಕಡಲೆ ಬೆಳೆಯಲ್ಲಿ ಕಾಯಿಕೊರಕ ಕೀಟಬಾಧೆ, ಸಿಡಿ ಹಾಯ್ದಿರುವ ಮುಂತಾದ ರೋಗಬಾಧೆಗೆ ಒಣಗಿ ನಿಂತಿದ್ದು, ಕಡಲೆ ಇಳುವರಿಯಲ್ಲಿ ಭಾರೀ ಪ್ರಮಾಣದ ಕುಂಠಿತಕ್ಕೆ ಸಾಕ್ಷಿಯಾಗಿದೆ. ಸಮೃದ್ಧವಾಗಿ ಬೆಳೆದು ನಿಂತ ಕಡಲೆ ಬೆಳೆಯು ಕಾಳು ಕಚ್ಚಿ ಬಲಗೊಳ್ಳುವ ಹಂತದಲ್ಲೇ ಮತ್ತು ಇನ್ನಷ್ಟು ಬೆಳೆ ಕಾಳು ಕಚ್ಚುವ ಮುನ್ನವೇ ಹಳದಿ ವರ್ಣಕ್ಕೆ ತಿರುಗಿ ಒಣಗಿ ನಿಂತಿದೆ. ಕೈಗೆಟುಕುವ ಹಂತದಲ್ಲೇ ಕೀಟಬಾಧೆಗೆ ತುತ್ತಾದ ಕಡಲೆ ಪೈರಿನಿಂದ ಇದೀಗ ರೈತರು ಕಣ್ಣೀರು ಹರಿಸುವಂತಾಗಿದೆ.

ಆರಂಭಿಕ ಹಂತದಲ್ಲೇ ರೋಗಬಾಧೆಗೆ ತುತ್ತಾದ ಕಡಲೆ ಬೆಳೆಗೆ ಅಗತ್ಯ ಕ್ರಮಗಳ ಬಗ್ಗೆ ತಿಳಿವಳಿಕೆ ನೀಡಬೇಕಾದ ಕೃಷಿ ಅಧಿಕಾರಿಗಳು ಇದು ಪ್ರಕೃತಿಯ ವಿಕೋಪ ಎಂದು ಕೈತೊಳೆದುಕೊಳ್ಳುತ್ತಿದ್ದಾರೆ. ಸಮೃದ್ಧವಾಗಿ ಬೆಳೆದು ನಿಂತ ಕಡಲೆ ಪೈರು ಕಾಳು ಕಚ್ಚಿ ಒಣಗಿ ನಿಂತಿದ್ದರಿಂದ ಮಹದಾಸೆ ಹೊತ್ತು ಬಿತ್ತನೆ ಮಾಡಿ ಸಂಕಷ್ಟದ ಸ್ಥಿತಿಗೆ ಒರಗುವಂತಾಗಿದೆ ಎಂಬುದು ರೈತರ ಅಳಲು. ಒಟ್ಟಾರೆ ತಾಲೂಕಿನಲ್ಲಿ ಬಿತ್ತನೆಯಾದ 21,685 ಹೆಕ್ಟೇರ್‌ ಕಡಲೆ ಪ್ರದೇಶದ ಬಹುತೇಕ ಬೆಳೆಗಳು ಒಣಗಿ ನಿಂತಿದ್ದು, ಕಡಲೆ ಪೈರಿನ ಅಧೋಗತಿಗೆ ಸಾಕ್ಷಿಯಾಗಿದೆ.

ತೇವಾಂಶ ವೈಪರೀತ್ಯ ಮತ್ತು ಇತ್ತೀಚೆಗೆ ಹವಾಮಾನ ಏರುಪೇರಿನಿಂದಾಗಿ ಕಡಲೆ ಬೆಳೆಯಲ್ಲಿ ಇಂತಹ ತೊಂದರೆ ಕಂಡುಬಂದಿದೆ. ಇದರಿಂದಾಗಿ ಗಿಡ ಅಶಕ್ತಗೊಂಡು ಸಿಡಿ ಹಾಯುತ್ತದೆ. ಇದಕ್ಕೆ ಯಾವುದೇ ಪರಿಹಾರವಿಲ್ಲ. ಆದರೆ ಮುಂದಿನ ಹಂಗಾಮಿಗೆ ಇದನ್ನು ತಡೆಗಟ್ಟಲು ಬೆಳೆ ಪರಿವರ್ತನೆ ಅಗತ್ಯವಾಗಿದೆ.
•ಚನ್ನಪ್ಪ ಅಂಗಡಿ,
ಸಹಾಯಕ ಕೃಷಿ ನಿರ್ದೇಶಕ

•ಸಿದ್ಧಲಿಂಗಯ್ಯ ಮಣ್ಣೂರಮಠ

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.