ಪೊಲೀಸರ ಮೇಲೆ ಹಲ್ಲೆ: ರೌಡಿ ಶೀಟರ್‌ಗೆ ಗುಂಡೇಟು

Team Udayavani, Apr 4, 2017, 12:55 PM IST

gul4.jpg

ಕಲಬುರಗಿ: ಕಳೆದ ವಾರ ನಗರದಲ್ಲಿ ನಡೆದ ಕೊಲೆ ಯತ್ನ ಪ್ರಕರಣವೊಂದರ ಆರೋಪಿಯೊಬ್ಬ ಪೊಲೀಸ್‌ ಮುಖ್ಯ ಪೇದೆ ಹಾಗೂ ವಾಹನದ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಗಾಯಗೊಳಿಸಿದ ಘಟನೆ ಸೋಮವಾರ ಬೆಳಗ್ಗೆ ನಗರದ ಹೊರ ವಲಯ ಕಾರಭೋಸಗಾದಲ್ಲಿ ನಡೆದಿದೆ. 

ರೌಡಿಶೀಟರ್‌ ವಿಕ್ರಂದಾಸ್‌ ಮೂಲಿಮನಿ (24) ಎಂಬಾತ ಡಿಸಿಆರ್‌ಬಿ ಮುಖ್ಯಪೇದೆ ಅಂಬಾದಾಸ್‌ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಪೊಲೀಸರು ಮೊದಲು ಗಾಳಿಯಲ್ಲಿ, ಬಳಿಕ ರೌಡಿಶೀಟರ್‌ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಆರೋಪಿ ಕಾಲಿಗೆ ಗಾಯವಾಗಿದ್ದು, ವಿಕ್ರಂದಾಸ್‌ ನನ್ನು ಜಿಲ್ಲಾಸ್ಪತ್ರೆಗೆ ಹಾಗೂ ಗಾಯಾಳು ಮುಖ್ಯಪೇದೆ ಅಂಬಾದಾಸ್‌ ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮಾರಕಾಸ್ತ್ರ ತೋರಿಸುವ ನೆಪದಲ್ಲಿ ದಾಳಿ: ಕಳೆದ ವಾರ ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪ್ಲೆಕ್ಸ್‌ ಹತ್ತಿರ ಶ್ರೀಕಾಂತ ರೆಡ್ಡಿ ಹತ್ಯೆಗೆ ಯತ್ನ ನಡೆದಿತ್ತು. ಈ ಸಂಬಂಧ ಪ್ರಮುಖ ಆರೋಪಿ ಚಿತ್ತಾಪುರ ತಾಲೂಕಿನ ಮಾಲಗತ್ತಿ ನಿವಾಸಿ, ರೌಡಿಶಿಟರ್‌ ವಿಕ್ರಮದಾಸ್‌ ಮೂಲಿಮನಿ, ರಘು ಸಾಗರ್‌, ಮಲ್ಲಿಕಾರ್ಜುನ ಶಿವಾನಂದ ಬಡಿಗೇರ (ಕರಿಚಿರತಾ), ಶಿವರಾಜ್‌ ಚಂದ್ರಕಾಂತ ಬಡಿಗೇರ ಸೇರಿ 8 ಜನರನ್ನು ಪೊಲೀಸರು ಬಂಧಿಸಿದ್ದರು. 

ವಿಚಾರಣೆ ವೇಳೆ ಕೆರೆಭೋಸಗಾದ ಅಡಗುತಾಣದಲ್ಲಿ ಮಾರಕಾಸ್ತ್ರಗಳನ್ನು ಇಟ್ಟಿದ್ದಾಗಿ ತಿಳಿಸಿದ್ದರಿಂದ ರೌಡಿಶೀಟರ್‌ ವಿಕ್ರಮದಾಸ್‌ ಮೂಲಿಮನಿಯನ್ನು ಪೊಲೀಸರು ಸ್ಥಳಕ್ಕೆ ಕರೆದೊಯ್ದಿದ್ದಾರೆ. ಕೂಡಿಟ್ಟಿರುವ ಮಾರಕಾಸ್ತ್ರಗಳನ್ನು ತೋರಿಸಿದ ವಿಕ್ರಂ, ಒಂದು ಖಡ್ಗದಿಂದ ಮುಖ್ಯಪೇದೆಯ ಎಡಗೈ ಮೇಲೆ ಹೊಡೆದು ಪರಾರಿಯಾಗಲು ಯತ್ನಿಸಿದ್ದಾನೆ.

ಗಾಳಿಯಲ್ಲಿ ಗುಂಡು ಹಾರಿಸಿ, ಶರಣಾಗುವಂತೆ ಪೊಲೀಸರು ಸೂಚಿಸಿದರೂ ಸ್ಪಂದಿಸದೇ ಇದ್ದಾಗ ಕಾಲಿಗೆ ಗುಂಡು ಹಾರಿಸಿದ್ದಾರೆ. ಗ್ರಾಮೀಣ ಡಿಎಸ್‌ಪಿ ಎಸ್‌.ಎಸ್‌. ಹುಲ್ಲೂರ್‌ ಅವರ ನೇತೃತ್ವದಲ್ಲಿ ಸಿಪಿಐ ಕಪಿಲದೇವ್‌, ಪಿಎಸ್‌ಐ ಚಂದ್ರಶೇಖರ್‌ ತಿಗಡಿ, ಸಿಬ್ಬಂದಿ ಕಮಾಂಡೋ ಶಿವಪ್ಪ, ಆನಂದ, ಪುಂಡಲೀಕ ಮತ್ತು ಮುಖ್ಯ ಪೇದೆ ಅಂಬಾದಾಸ್‌ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. 

ಆಸ್ಪತ್ರೆಗೆ ಭೇಟಿ: ಈಶಾನ್ಯ ವಲಯದ ಪೊಲೀಸ್‌ ಮಹಾನಿರೀಕ್ಷಕ ಅಲೋಕಕುಮಾರ, ಎಸ್ಪಿ ಎನ್‌. ಶಶಿಕುಮಾರ ಹಾಗೂ ಅಂಬಾದಾಸ್‌ ಕುಟುಂಬಸ್ಥರು ಬಸವೇಶ್ವರ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುವಿನ ಆರೋಗ್ಯ ವಿಚಾರಿಸಿದರು.  

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.