ಸಾಮಾಜಿಕ ಸ್ವಾತಂತ್ರ್ಯ ಇನ್ನೂ ಸಿಕ್ಕಿಲ್ಲ: ಪ್ರೊ| ನಿರಂಜನ್‌

Team Udayavani, Aug 16, 2017, 10:38 AM IST

gulbarga 2 copy.JPG

ಕಲಬುರಗಿ: ಇವತ್ತು ಭಾರತ ಭೌತಿಕವಾಗಿ ಅಷ್ಟು ಸಾಧನೆ, ಇಷ್ಟು ಸಾಧನೆ ಮಾಡಿದ್ದೇವೆ ಎಂದು ಹೇಳಿಕೊಳ್ಳಬಹುದು. ಆದರೆ, ನಿಜವಾಗಿಯೂ ಇನ್ನೂ ನಮಗೆ ಸಾಮಾಜಿಕ ಸ್ವಾತಂತ್ರ್ಯ ಸಿಕ್ಕಿಲ್ಲ, ಅದಕ್ಕಾಗಿ ಪರಿತಾಪ ಪಡುತ್ತಿದ್ದೇವೆ ಎಂದು ಗುವಿವಿ ಕುಲಪತಿ ಪ್ರೊ| ಎಸ್‌.ಆರ್‌.ನಿರಂಜನ್‌ ವಿಷಾದ ವ್ಯಕ್ತಪಡಿಸಿದರು. ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಮಂಗಳವಾರ 71ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ರಾಜಕೀಯ ಸ್ವಾತಂತ್ರ್ವಯನ್ನು ನಾವು ಹಾಗೋ ಹೀಗೋ ಗಳಿಸಿಕೊಂಡಿದ್ದೇವೆ. ಆದರೆ, ಸಾಮಾಜಿಕ ಸ್ವಾತಂತ್ರ್ಯ ಪಡೆಯಲು ಸಾಧ್ಯವಾಗಿಲ್ಲ. ಹಲವಾರು ಜಾತಿ-ಧರ್ಮ, ಮತ-ಪಂಥ, ಮೇಲು-ಕೀಳು, ಶ್ರೀಮಂತ-ಬಡವ ಹಾಗೂ ಇತರೆ ಒಳ ಹತೋಟಿಗಳಿಂದ ನಾವು ಹೊರ ಬಂದಿಲ್ಲ. ಇದೇ ನಮ್ಮ ಉತ್ತರೋತ್ತರ ಅಭಿವೃದ್ಧಿಗೆ, ಸಾಧನೆಗಳಿಗೆ, ಸಂಶೋಧನೆಗಳಿಗೆ, ನೆಮ್ಮದಿ ಬದುಕಿಗೆ ತೊಡಕಾಗಿದೆ ಎಂದರು. ಗಾಂಧೀಜಿ ಅವರ ಗ್ರಾಮ ಸ್ವರಾಜ್ಯವು
ಸಾಕಾರಗೊಂಡಿದೆಯೇ? ವಿನೋಭಾಜಿಯವರ ಸರ್ವೋದಯ ಸಾಧ್ಯವಾಗಿದೆಯೇ? ಇಂತಹ ಪ್ರಶ್ನೆಗಳಿಗೆ ನಮ್ಮ-ನಮ್ಮ ಆತ್ಮಗಳೇ ಉತ್ತರ ಕಂಡುಕೊಳ್ಳಬೇಕಾಗಿದೆ. ಸ್ವಾತಂತ್ರ್ಯವೆಂದರೆ ಸ್ವೆಚ್ಛಾಚಾರವಲ್ಲ. ದೇಶಕ್ಕೆ, ಸಮಾಜಕ್ಕೆ, ಜನಾಂಗಕ್ಕೆ ಹಿತವಾಗುವಂತೆ, ಸ್ವಯಂ ಪ್ರೇರಣೆಯಿಂದ ನಡೆದು ತೋರಿಸಬೇಕಾಗಿದೆ. ಈ ಕಾರಣದಿಂದಲೇ ನಮ್ಮ ಪೂರ್ವಜರು ಸ್ವಾತಂತ್ರ್ಯ ಎಂಬುದಕ್ಕೆ ಮೌಲ್ಯ, ಪ್ರಜ್ಞೆಯಸ್ಥಾನ ನೀಡಿದ್ದಾರೆ ಎಂದರು.ವಿಜ್ಞಾನ ಕ್ಷೇತ್ರದಲ್ಲಿ ನಾವು ಅಪಾರವಾದ ಸಾಧನೆ ಮಾಡಿದ್ದೇವೆ. ಆದರೆ ಸಾಮಾಜಿಕವಾಗಿ ಅನೇಕ ಅಸಮಾನ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ. ಇದು ವಿಪರ್ಯಾವಲ್ಲವೆ? ವಿಜ್ಞಾನ ಕ್ಷೇತ್ರ ಎಂದಾಗ ಇತ್ತೀಚೆಗೆ ನಿಧನರಾದ ಮಾಜಿ ರಾಷ್ಟ್ರಪತಿ ದಿ| ಅಬ್ದುಲ್‌ ಕಲಾಂ ಅವರ ಆದರ್ಶಗಳು, ಕನಸುಗಳು ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಅನುಸರಿಸಿದಾಗ ಅವರು ಕಂಡ ಕನಸು ನನಸಾದೀತು. ವಿದ್ಯಾರ್ಥಿಗಳು, ಶಿಕ್ಷಕರು ಈ ನಿಟ್ಟಿನಲ್ಲಿ ಶ್ರಮಿಸಬೇಕಾಗಿದೆ ಎಂದು ಹೇಳಿದರು. ಕುಲ ಸಚಿವ ಪ್ರೊ| ದಯಾನಂದ ಅಗಸರ, ಕುಲಸಚಿವ (ಮೌ)ಪ್ರೊ| ಸಿ.ಎಸ್‌ .ಪಾಟೀಲ, ವಿತ್ತಾಧಿಕಾರಿ ರಾಜನಾಳಕರ ಲಕ್ಷ್ಮಣ, ಈಶ್ವರ ಇಂಗಿನ, ಸಾಯಬಣ್ಣ ಕೆಂಗೂರಿ, ಸಿಂಡಿಕೇಟ್‌ ಸದಸ್ಯ ಸಂಗನಗೌಡ ಪೊಲೀಸ್‌ ಪಾಟೀಲ, ವಿದ್ಯಾವಿಷಯಕ ಪರಿಷತ್‌ ಸದಸ್ಯ ಸತೀಶ ಅಲ್ಲೋಳ್ಳಿ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪ್ರೊ| ಸಿದ್ದಪ್ಪ ಹಾಗೂ ವಿಭಾಗಗಳ ಮುಖ್ಯಸ್ಥರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.