ಪರಿಶಿಷ್ಟರ ಕಲ್ಯಾಣ ಕಾರ್ಯಕ್ರಮ ಪೂರ್ಣಗೊಳಿಸಿ

Team Udayavani, Jan 2, 2018, 11:45 AM IST

gul-8.jpg

ಕಲಬುರಗಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಹಮ್ಮಿಕೊಂಡಿರುವ ಎಲ್ಲ ಕಾರ್ಯಕ್ರಮಗಳನ್ನು ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಅಧಿನಿಯಮ-2013ರ ಅನ್ವಯ ವಿವಿಧ ಇಲಾಖೆಗಳ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕಾರ್ಯಕ್ರಮಗಳ ಕುರಿತು ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರತಿಯೊಂದು ಇಲಾಖೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಏಳ್ಗೆಗಾಗಿ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಎಲ್ಲ ಕಾರ್ಯಕ್ರಮಗಳನ್ನು ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಜಾರಿಗೊಳಿಸಬೇಕು ಎಂದು ಹೇಳಿದರು.

ವಿಶೇಷ ವಸತಿ ಯೋಜನೆಯಡಿ ಮನೆಯಿಲ್ಲದ ವಿಧವೆಯರು, ಅಂಗವಿಕಲರು, ಎಚ್‌.ಐ.ವಿ. ಪೀಡಿತರು, ನಿರ್ಗತಿಕರು, ಕುಷ್ಠರೋಗದಿಂದ ಗುಣಮುಖ ಹೊಂದಿದವರಿಗೆ ವಸತಿ ಕಲ್ಪಿಸಲು ಅವಕಾಶವಿದೆ. ಈ ಕುರಿತು ಸ್ಥಳೀಯವಾಗಿ ಪರಿಶೀಲಿಸಿ, ಅರ್ಹ ಫಲಾನುಭವಿಗಳ ಪಟ್ಟಿಯನ್ನು 10 ದಿನದೊಳಗಾಗಿ ಸಲ್ಲಿಸಬೇಕು ಎಂದು ಹೇಳಿದರು. 

ಎಲ್ಲ ಇಲಾಖೆಗಳಲ್ಲಿ ಶೇ. 24 ರ ಅನುದಾನವನ್ನು ಎಸ್‌ಸಿ, ಎಸ್‌ಟಿ ವರ್ಗದ ಶ್ರೇಯೋಭಿವೃದ್ಧಿಗಾಗಿ ಮೀಸಲಿರಿಸಲಾಗಿದ್ದು, ಈ ಅನುದಾನವನ್ನು ಖರ್ಚು ಮಾಡಬೇಕು. ಮುಂದಿನ ಸಭೆಗೆ ಪ್ರತಿ ಇಲಾಖೆಯ ಆರ್ಥಿಕ ಮತ್ತು ಭೌತಿಕ ಸಾಧನೆಯ ಶೇಕಡಾವಾರು ಮಾಹಿತಿಯೊಂದಿಗೆ ಅಧಿಕಾರಿಗಳು ಸಭೆಗೆ ಹಾಜರಾಗಬೇಕು. ಪ್ರತಿ ಇಲಾಖೆಯ ಎಸ್‌.ಸಿ.ಪಿ., ಟಿ.ಎಸ್‌.ಪಿ. ಯೋಜನೆಯಡಿ ಹಾಕಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಖುದ್ದಾಗಿ ಪರಿಶೀಲನೆ ಮಾಡುವಂತೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆಸೂಚಿಸಿದರು.

ಸಭೆಗೆ ಗೈರು ಹಾಜರಾಗಿದ್ದ ಅಧಿಕಾರಿಗಳಿಗೆ ನೋಟಿಸ್‌ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಂದಾನವಾಜ್‌ ಗೇಸುದರಾಜ್‌, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ ಡೇವಿಡ್‌, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಾಜೀದ ಅಹ್ಮದ್‌ ಮುಲ್ಲಾ ಸೇರಿದಂತೆ ವಿವಿಧ ಇಲಾಖೆಯ
ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.