ವಕೀಲರು ಬಡವರ ಕಣ್ಣೀರು ಒರೆಸಲಿ: ನ್ಯಾ| ಮಹೇಶ್ವರಿ

Team Udayavani, Feb 20, 2018, 10:09 AM IST

gul-2.jpg

ಕಲಬುರಗಿ: ವಕೀಲರು ನ್ಯಾಯಾಲಯದ ಬುನಾದಿಗಳಿದ್ದಂತೆ. ಅವರು ಯಾವಾಗಲೂ ಸಮಾಜದ ಏರಿಳಿತಗಳೊಂದಿಗೆ ಕಾರ್ಯನಿರ್ವಹಿಸುತ್ತಾರೆ. ಬಡವರ ಕಣ್ಣಿರು ಒರೆಸುವುದು ಪ್ರತಿಯೊಬ್ಬ ವಕೀಲರ ಜವಾಬ್ದಾರಿ ಎಂಬುದನ್ನು ತಿಳಿದು ಕಾರ್ಯ ನಿರ್ವಹಿಸಬೇಕು ಎಂದು ಕರ್ನಾಟಕ ಉತ್ಛ ನ್ಯಾಯಾಲಯದ ನೂತನ ಮುಖ್ಯ ನ್ಯಾಯಮೂರ್ತಿ ದಿನೇಶ ಮಹೇಶ್ವರಿ ಹೇಳಿದರು.

ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯವಾದಿಗಳ ಸಂಘದಲ್ಲಿ ನ್ಯಾಯಾಧೀಶರನ್ನು ಉದ್ದೇಶಿಸಿ ಅವರು ಮಾತನಾಡಿದರು. ನಿಸ್ವಾರ್ಥ ಸೇವೆ ಸಲ್ಲಿಸುವ ವಕೀಲರು ನಮ್ಮಲ್ಲಿ ಇದ್ದಾರೆ. ಅವರಿಗೆ ನಾನು ಕೃತಜ್ಞನಾಗಿದ್ದಾನೆ. ಪ್ರಸ್ತುತ ಧ್ವನಿ ಇಲ್ಲದ ದಮನಿತರಿಗೆ ಸಹಾಯ ದೊರಕಿಸುವುದು ಅವಶ್ಯಕವಾಗಿದೆ ಎಂದು ಹೇಳಿದರು.

ನಾವೆಲ್ಲರೂ ಶಿಸ್ತಿನ ನಾಗರಿಕ ಸಮಾಜದಲ್ಲಿದ್ದೇವೆ. ಜನರು ನ್ಯಾಯಾಂಗದ ಮೇಲೆ ನಂಬಿಕೆ, ಆತ್ಮವಿಶ್ವಾಸ ಇಟ್ಟುಕೊಂಡಿದ್ದರಿಂದ ಅದಕ್ಕೆ ತಕ್ಕ ಹಾಗೇ ಕಾರ್ಯನಿರ್ವಹಿಸಬೇಕು. ವಿಭಾಗೀಯ ನ್ಯಾಯಾಲಯ ಹಾಗೂ ಉಪವಿಭಾಗದಲ್ಲಿ ಸಮಸ್ಯೆಗಳು ಇರುತ್ತವೆ. ವಕೀಲರು ಸಮಸ್ಯೆ ಬದಲು ಪರಿಹಾರ ಕಡೆ ಹೆಚ್ಚು ಗಮನ ಕೊಡಬೇಕು.
ವಕೀಲ ವೃತ್ತಿಯಲ್ಲಿದ್ದಾಗ ನನಗೂ ತೊಂದರೆಗಳಿದ್ದವು. ಆಗ ನಾನು ಸಹಪಾಠಿಗಳೊಂದಿಗೆ ಸಮಸ್ಯೆ ಹೇಳಿ ಪರಿಹಾರ ಕಂಡುಕೊಳ್ಳುತ್ತಿದ್ದೆ ಎಂದು ಹೇಳಿದರು.

ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ಕಲಬುರಗಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ ಮಾತನಾಡಿ, ಶಿಸ್ತನ್ನು ನಾವೂ ಶಿಕ್ಷೆ ಎಂದು ಪರಿಗಣಿಸಬಾರದು. ಶಿಸ್ತು ಸ್ವಾತಂತ್ರದ ಸಂಪನ್ಮೂಲವಾಗಿದೆ. ಶಿಸ್ತಿನಿಂದ ದೇಶವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಬಹುದು ಎಂದು ಹೇಳಿದರು. 

ಇದಕ್ಕೂ ಮುನ್ನ ಕರ್ನಾಟಕ ಉತ್ಛ ನ್ಯಾಯಾಲಯ ಕಲಬುರಗಿಯಲ್ಲಿ ಮುಖ್ಯ ನ್ಯಾಯಮೂರ್ತಿ ದಿನೇಶ ಮಹೇಶ್ವರಿ ಮಾತನಾಡಿ, ನಾವೂ ನಮ್ಮ ಸ್ವಂತದ ಬದ್ಧತೆಯೊಂದಿಗೆ ಸಾಂಸ್ಥಿಕ ಬದ್ಧತೆಗೆ ಹೆಚ್ಚಿನ ಮಹತ್ವ ನೀಡುವ ವ್ಯವಸ್ಥೆಯಲ್ಲಿದ್ದೇವೆ. ಅದಕ್ಕೆ ಸಾಂಸ್ಥಿಕ ಹಾಗೂ ಸ್ವಯಂ ಬದ್ಧತೆ ಎರಡು ಮುಖ್ಯವಾಗಿದೆ. ನ್ಯಾಯದೊಂದಿಗೆ ಯಾರೂ ಸ್ಪರ್ಧೆ ಮಾಡುವುದಿಲ್ಲ. ಆದರೆ ನ್ಯಾಯವಾದಿಗಳು ತಮ್ಮ ಕರ್ತವ್ಯ ಬಡವರ ಪರವಾಗಿ ಮಾಡಬೇಕು ಎಂದು ಹೇಳಿದರು.

ಗುಲಬರ್ಗಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಆರ್‌.ಕೆ.ಹಿರೇಮಠ ಮಾತನಾಡಿ, ಕರ್ನಾಟಕ ಉತ್ಛ ನ್ಯಾಯಾಲಯದ
ಕಲಬುರಗಿ ಸಂಚಾರಿ ಪೀಠ 2008ರಲ್ಲಿ ಸ್ಥಾಪನೆಯಾಯಿತು. 2013 ಆಗಸ್ಟ್‌ನಲ್ಲಿ ಕರ್ನಾಟಕ ಹೈಕೋರ್ಟ್‌ ಕಲಬುರಗಿಯಾಗಿ ಪರಿವರ್ತನೆಗೊಂಡಿತು. ಪೀಠ ಸ್ಥಾಪನೆಯಾದಾಗ ಕೋರ್ಟ್‌ನಲ್ಲಿ 25000 ಕೇಸ್‌ ಬಾಕಿ ಇದ್ದು, 5 ನ್ಯಾಯಾಲಯ ಪೀಠಗಳು ಕಾರ್ಯನಿರ್ವಹಿಸುತ್ತಿದ್ದವು. ಆದರೆ ಸಧ್ಯ 23 ಸಾವಿರಕ್ಕಿಂತ ಅಧಿಕ ಪ್ರಕರಣ ಬಾಕಿ ಇದ್ದು, ಕೇವಲ 3 ಪೀಠ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

ಕರ್ನಾಟಕ ಉತ್ಛ ನ್ಯಾಯಾಲಯ ಕಲಬುರಗಿಯಲ್ಲಿ 62 ನ್ಯಾಯವಾದಿಗಳ ಮಂಜೂರಾತಿ ಹುದ್ದೆಗಳಿದ್ದು, 29 ನ್ಯಾಯವಾದಿಗಳು ಮಾತ್ರ ಇದ್ದಾರೆ. ತುರ್ತಾಗಿ ನ್ಯಾಯವಾದಿಗಳ ನೇಮಕ ಮಾಡಬೇಕು. 5ರಿಂದ 6 ಪೀಠ ಪ್ರಾರಂಭಿಸಿ ಬಾಕಿ ಇರುವ ಪ್ರಕರಣ ಕಡಿಮೆ ಮಾಡಬೇಕು.

ಧಾರವಾಡ ಮತ್ತು ಕಲಬುರಗಿ ಹೈಕೋರ್ಟ್‌ಗಳು ಏಕಕಾಲದಲ್ಲಿ ಪ್ರಾರಂಭವಾದವು. ಧಾರವಾಡ ಹೈಕೋರ್ಟ್‌
ವ್ಯಾಪ್ತಿಗೆ 55 ತಾಲ್ಲೂಕು ಒಳಪಟ್ಟವು. ಆದರೆ ಕಲಬುರಗಿ ಹೈಕೋರ್ಟ್‌ ಕೇವಲ 24 ತಾಲ್ಲೂಕುಗಳ ವ್ಯಾಪ್ತಿ ಹೊಂದಿದೆ.
ಇದನ್ನು ಸರಿದೂಗಿಸಲು ಬಳ್ಳಾರಿ, ಬಾಗಲಕೋಟೆ, ಕೊಪ್ಪಳ ಜಿಲ್ಲೆಯನ್ನು ಕಲಬುರಗಿ ಹೈಕೋರ್ಟ್‌ ವ್ಯಾಪ್ತಿಗೆ ತರಬೇಕು.

ಇದರಿಂದ ಸರಿಸಮಾನವಾಗಿ ಕಾರ್ಯನಿರ್ವಹಿಸಲು ಸಾಧ್ಯ ಎಂದು ಹೇಳಿದರು. ಕರ್ನಾಟಕ ಉತ್ಛ ನ್ಯಾಯಾಲಯದ
ನ್ಯಾಯಮೂರ್ತಿ ಎಲ್‌. ನಾರಾಯಣಸ್ವಾಮಿ, ನ್ಯಾಯಮೂರ್ತಿ ಶ್ರೀನಿವಾಸಗೌಡ, ನ್ಯಾಯಮೂರ್ತಿ ಜಿ. ನರೇಂದ್ರ, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಬಿ.ವಿ. ಪಾಟೀಲ, ಕರ್ನಾಟಕ ಉಚ್ಚ ನ್ಯಾಯಾಲಯ ಕಲಬುರಗಿ ಹೆಚ್ಚುವರಿ ರಜಿಸ್ಟ್ರಾರ್‌ ಜನರಲ್‌ ಕೆ.ಬಿ.ಅಸೂದೆ, ಕಾನೂನು ಸೇವಾ ಪ್ರಾ ಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಆರ್‌. ಮಾಣಿಕ್ಯ, ಗುಲಬರ್ಗಾ ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ಶರಣಯ್ಯ ಜಿ. ಮಠ, ವಿ.ಎನ್‌. ಪಾಟೀಲ, ಕಾರ್ಯದರ್ಶಿ ಗೋಪಾಲಕೃಷ್ಣ ಪಿ. ಯಾದವ, ಹಿರಿಯ ಮತ್ತು ಕಿರಿಯ ಶ್ರೇಣಿಯ ನ್ಯಾಯಾಧಿಧೀಶರು, ವಕೀಲರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.