ಬಿಜೆಪಿಯಿಂದ ಸಂವಿಧಾನ ಕಗ್ಗೊಲೆ


Team Udayavani, May 18, 2018, 10:45 AM IST

gul-4.jpg

ವಾಡಿ: ಕೋಮುವಾದದ ವಿಷ ಬೀಜ ಬಿತ್ತಿ ಅಧಿಕಾರಕ್ಕೇರಲು ಹಪಹಪಿಸುತ್ತಿರುವ ಬಿಜೆಪಿ ಸಂವಿಧಾನದ ಕಗ್ಗೊಲೆ ಮಾಡಲು ಹೊರಟಿದೆ ಎಂದು ಆರೋಪಿಸಿ ದಲಿತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಡಾ| ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿದ ಅಂಬೇಡ್ಕರ್‌ ಜಯಂತ್ಯುತ್ಸವ ಸಮಿತಿ ಹಾಗೂ ಬ್ಲಾಕ್‌ ಕಾಂಗ್ರೆಸ್‌ ಪರಿಶಿಷ್ಟ ಜಾತಿ ಘಟಕದ ಕಾರ್ಯಕರ್ತರು, ಬಿಜೆಪಿ ವಿರುದ್ಧಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಶಾಸಕರ ಬಹುಮತವಿಲ್ಲದೆ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಸರಕಾರ ರಚನೆ ಮಾಡಿರುವ ಯಡಿಯೂರಪ್ಪ ರಾಜ್ಯದ ಜನರ ಕ್ಷಮೆಯಾಚಿಸುವ ಮೂಲಕ ಕೂಡಲೇ ಅಧಿಕಾರದಿಂದ ಪದತ್ಯಾಗ ಮಾಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಬೌದ್ಧ ಸಮಾಜದ ಅಧ್ಯಕ್ಷ ಟೋಪಣ್ಣ ಕೋಮಟೆ ಹಾಗೂ ವಾಡಿ-ಶಹಾಬಾದ ನಗರ ಯೋಜನೆ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚಂದ್ರಸೇನ ಮೇನಗಾರ, ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಯಾವುದೇ ಪಕ್ಷಕ್ಕೆ ಬಹುಮತವಿಲ್ಲ. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರಕಾರ ನಡೆಸುವುದಾಗಿ ಘೋಷಿಸಿ ರಾಜ್ಯಪಾಲರಿಗೆ ಪತ್ರ ಸಲ್ಲಿಸಿವೆ. ಅಗತ್ಯ ಸಂಖ್ಯಾಬಲ ಇಲ್ಲದ ಬಿಜೆಪಿ ತರಾತುರಿಯಲ್ಲಿ ಪ್ರಮಾಣವಚನ ಸ್ವೀಕರಿಸಿದೆ. ಬಹುಮತ ಸಾಬೀತಿಗೆ ಕಾಂಗ್ರೆಸ್‌-ಜೆಡಿಎಸ್‌ ಶಾಸಕರ ಖರೀದಿಗೆ ಮುಂದಾಗಿರುವ ಬಿಜೆಪಿ, ಸಂವಿಧಾನದ ಕಗ್ಗೊಲೆಗೆ ನಿಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌-ಜೆಡಿಎಸ್‌ ಶಾಸಕರು ಹಣಕ್ಕೆ ತಮ್ಮನ್ನು ಮಾರಿಕೊಳ್ಳದೆ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಟ್ಟು ಬಾಬಾಸಾಹೇಬರ ಸಂವಿಧಾನ ರಕ್ಷಿಸಬೇಕು. ಸಂವಿಧಾನ ವಿರೋಧಿಗಳಿಗೆ ಬೆಂಬಲವಾಗಿ ನಿಂತರೆ ನಿಮ್ಮ ವಿರುದ್ಧವೂ ಹೋರಾಟ ನಡೆಸಲಾಗುವುದು ಎಂದು ದಲಿತ ಮುಖಂಡರು ಎಚ್ಚರಿಕೆ ನೀಡಿದರು.

ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ವಿಕ್ರಮ ನಿಂಬರ್ಗಾ, ಬ್ಲಾಕ್‌ ಕಾಂಗ್ರೆಸ್‌ ಎಸ್‌ಸಿ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಸೈದಾಪುರ, ಅಲ್ತಾಫ್‌ ಸೌದಾಗರ, ಇಂದ್ರಜೀತ ಸಿಂಗೆ, ಹರೀಶ್ಚಂದ್ರ ಕರಣಿಕ, ಶರಣಬಸು ಸಿರೂರಕರ, ಸೂರ್ಯಕಾಂತ ರದ್ದೇವಾಡಿ, ಆನಂದ ಬಡಿಗೇರ, ಗೋಪಾಲ ರಾಠೊಡ, ರಮೇಶ ಬಡಿಗೇರ, ವಿಜಯಕುಮಾರ ಸಿಂಗೆ,
ರಾಹುಲ ಮೇನಗಾರ, ಗೌತಮ ಬೇಡೆಕರ, ವಿಜಯಕುಮಾರ ಯಲಸತ್ತಿ, ಮಲ್ಲಿಕಾರ್ಜುನ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.