ಮತ್ತೆ ಗುಲ್ವರ್ಗ ವಿವಿ ಪರೀಕ್ಷೆ ಅವಾಂತರ

Team Udayavani, May 22, 2018, 10:49 AM IST

gul-1.jpg

ಕಲಬುರಗಿ: ಸತತ ಪ್ರಶ್ನೆ ಪತ್ರಿಕೆ ಬಹಿರಂಗದಿಂದ ಕಂಗೆಟ್ಟಿದ್ದ ಇಲ್ಲಿನ ಗುಲ್ಬರ್ಗ ವಿಶ್ವವಿದ್ಯಾಲಯಕ್ಕೆ ಪರೀಕ್ಷೆ ಹೇಗೆ  ನಡೆಸಬೇಕೆಂಬುದೇ ತಿಳಿಯದಂತಾಗಿದೆ. ಇದಕ್ಕೆ ಸೋಮವಾರ ನಡೆಯಬೇಕಿದ್ದ ಬಿಎಸ್ಸಿ ದ್ವಿತೀಯ ಸೆಮಿಸ್ಟಾರ್‌ನ ಕನ್ನಡ ಪತ್ರಿಕೆ ದಿಢೀರನೇ ಮುಂದೂಡಿಕೆಯಾಗಿರುವುದೇ ಸಾಕ್ಷಿಯಾಗಿದೆ. 

ಪ್ರಶ್ನೆ ಪತ್ರಿಕೆ ಮುದ್ರಣವಾಗದ ಕಾರಣ ಪರೀಕೆ ಮುಂದೂಡಲಾಗಿದೆ ಎಂದು ವಿವಿ ಪರೀಕ್ಷಾಂಗದ ಅಧಿಕಾರಿಗಳು ಹೇಳುತ್ತಿದ್ದರೆ, ಇದಕ್ಕೆ ಪ್ರಶ್ನೆ ಪತ್ರಿಕೆ ಬಹಿರಂಗ ಇಲ್ಲವೇ ಮತ್ತೂಂದು ಕಾರಣ ಎನ್ನಲಾಗುತ್ತಿದೆ.
 
ಕಳೆದ ವರ್ಷ ಬಿಕಾಂ ಮೂರನೇ ಸೆಮಿಸ್ಟಾರ್‌ನ ಎರಡು ಪತ್ರಿಕೆಗಳು ಹಾಗೂ ಅದರ ಹಿಂದಿನ ವರ್ಷ ಬಿಇಡಿ ಪ್ರಶ್ನೆ ಪತ್ರಿಕೆಗಳು ಬಹಿರಂಗಗೊಂಡಿರುವುದು ಸೇರಿದಂತೆ ವರ್ಷಂಪ್ರತಿ ಪರೀಕ್ಷೆಯಲ್ಲಿ ಒಂದಿಲ್ಲ ಒಂದು ಅವಾಂತರ ಸೃಷ್ಟಿಯಾಗಿ ಇಡೀ ವಿವಿಗೆ ಸವಾಲು ಹಾಕುತ್ತಿರುವ ಘಟನೆಗಳು ಪದೇ-ಪದೇ ನಡೆಯುತ್ತಿರುವುದು ವಿವಿಯ ನೈತಿಕತೆ ಪ್ರಶ್ನಿಸುವಂತಾಗಿದೆ.

ಪದೇ ಪದೇ ಪ್ರಶ್ನೆ ಪತ್ರಿಕೆಗಳು ಬಹಿರಂಗಗೊಳ್ಳುವ ದಂಧೆಗೆ ಕಡಿವಾಣ ಹಾಕುವ ಜತೆಗೆ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ವ್ಯವಸ್ಥೆ ತೊಗಲಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಪ್ರಸಕ್ತವಾಗಿ ಕ್ಲಸ್ಟರ್‌ ಪದ್ಧತಿಯನ್ನು ಜಾರಿಗೆ ತರಲಾಗಿದೆ. ಆದರೆ ಈ ಕ್ಲಸ್ಟರ್‌ ಪದ್ಧತಿಗೆ ಬಹುತೇಕ ಖಾಸಗಿ ಕಾಲೇಜುಗಳು ವಿರೋಧ ವ್ಯಕ್ತಪಡಿಸುತ್ತಿರುವುದರ ಜತೆಗೆ ಪರೀಕ್ಷೆ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿರುವುದು ಪ್ರಜ್ಞಾವಂತ ಸಮಾಜ ಆತ್ಮಾವಲೋಕನ ಮಾಡುವಂತಾಗಿದೆ.
 
ಕ್ಲಸ್ಟರ್‌ ಪರೀಕ್ಷೆ ಸುಸೂತ್ರವಾಗಿ ನಡೆದರೆ ಎಲ್ಲಿ ತಮ್ಮ ಕಾಲೇಜಿನ ವಿದ್ಯಾರ್ಥಿಗಳು ಪಾಸಾಗುವುದಿಲ್ಲವೋ ಎನ್ನುವ ಆತಂಕದಲ್ಲಿ ಪರೀಕ್ಷೆಗೆ ಒಂದಿಲ್ಲ ಒಂದು ರೀತಿಯಲ್ಲಿ ಅಡ್ಡಿಪಡಿಸುತ್ತಿದ್ದಾರೆ ಎನ್ನಲಾಗಿದೆ. ಪ್ರತಿಷ್ಠಿತ ಕಾಲೇಜುಗಳು ಹಾಗೂ ಸರ್ಕಾರಿ ಕಾಲೇಜುಗಳು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿಲ್ಲ. ಆದರೆ ಸರಿಯಾಗಿ ತರಗತಿಗಳನ್ನು ನಡೆಸದೆ ಹಾಗೂ ಪಾಸ್‌ ಮಾಡಿಕೊಡುತ್ತೇವೆ ಎನ್ನುವ ಭರವಸೆಯೊಂದಿಗೆ ಪ್ರವೇಶಾತಿ ಪಡೆಯುವ ಕೆಲ ಕಾಲೇಜುಗಳು ಕ್ಲಸ್ಟರ್‌ ಪದ್ಧತಿಗೆ ವಿರೋಧ ವ್ಯಕ್ತಪಡಿಸುತ್ತಿವೆ.

ಅಲ್ಲದೇ ಕ್ಲಸ್ಟರ್‌ ಪದ್ಧತಿ ಉಲ್ಲಂಘನೆ (ವೈಲೆನ್ಸ್‌ ) ನಿಯಮದಡಿ ಪ್ರತಿ ವಿದ್ಯಾರ್ಥಿಯಿಂದ 10 ಸಾವಿರ ರೂ. ದಂಡ ಕಟ್ಟಿಸಿ ತಮ್ಮ ಕಾಲೇಜಿನಲ್ಲಿಯೇ ಪರೀಕ್ಷೆ ಬರೆಯಲಾರಂಭಿಸಿದ್ದನ್ನು ನೋಡಿದರೆ ಪರೀಕ್ಷೆ ವ್ಯವಸ್ಥೆಯನ್ನೇ ಅಣಕಿಸುವಂತಿದೆ.

ಕೊನೆ ಘಳಿಗೆಯಲ್ಲಿ ಪರೀಕ್ಷೆಗೆ ಕೂಡಲಿಕ್ಕಾಗದ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಕ್ಲಸ್ಟರ್‌ ವೈಲೆನ್ಸ್‌ ನಿಯಮವೊಂದನ್ನು ರೂಪಿಸಲಾಗಿದೆ. ಇದೇ ನಿಯಮದಡಿ ಬಹುತೇಕ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿರುವುದು ಕ್ಲಸ್ಟರ್‌ ಪದ್ಧತಿಯನ್ನೇ ಅಣಕಿಸುವಂತಾಗಿದೆ. 

ಪರೀಕ್ಷೆ ಸೂಸುತ್ರವಾಗಿ ನಡೆಯದಿದ್ದಕ್ಕೆ ಹಾಗೂ ಕ್ಲಸ್ಟರ್‌ ಪದ್ಧತಿಗೆ ಹಲವರು ವಿರೋಧ ವ್ಯಕ್ತಪಡಿಸುತ್ತಿರುವುದಕ್ಕೆ ವಿಶ್ವವಿದ್ಯಾಲಯದ ಕುಲಪತಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ ಮುಂದಿನ ವರ್ಷದಿಂದ ಪ್ರವೇಶಾತಿ ಪಡೆದ ಎಲ್ಲ ವಿದ್ಯಾರ್ಥಿಗಳನ್ನು ಪಾಸು ಮಾಡುವ ನಿರ್ಣಯವನ್ನು ವಿವಿ ಸಿಂಡಿಕೆಟ್‌ -ಸಿನೆಟ್‌ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರಂತೆ. ಇದನ್ನು ನೋಡಿದರೆ ಪರೀಕ್ಷೆ ಸುಸೂತ್ರವಾಗಿ ನಡೆಯದೇ ಅಡ್ಡ ದಾರಿಯಲ್ಲಿ ನಡೆದಿರುವುದು ನಿರೂಪಿಸುತ್ತದೆ. 

ಒಟ್ಟಾರೆ ಪ್ರತಿ ವರ್ಷ ಪರೀಕ್ಷೆ ಸಮಯದಲ್ಲಿ ಒಂದಿಲ್ಲ ಒಂದು ಅವಾಂತರ ಸೃಷ್ಟಿಸುತ್ತಿರುವ ಗುಲ್ಬರ್ಗ ವಿಶ್ವವಿದ್ಯಾಲಯವು ಪರೀಕ್ಷೆ ನಡೆಸಲು ಯೋಗ್ಯವೇ ಎನ್ನುವ ಪ್ರಶ್ನೆ ಹುಟ್ಟು ಹಾಕಿ¨ 

„ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.