ಉಚಿತ ಬಸ್‌ ಪಾಸ್‌ ನೀಡಲು ಆಗ್ರಹಿಸಿ ಪ್ರತಿಭಟನೆ


Team Udayavani, Jul 10, 2018, 11:59 AM IST

gul-6.jpg

ಜೇವರ್ಗಿ: ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡುವಂತೆ ಆಗ್ರಹಿಸಿ ಎಐಡಿಎಸ್‌ಒ, ಎಐಡಿವೈಒ ಹಾಗೂ ಎಐಎಂಎಸ್‌ಎಸ್‌ ಸಂಘಟನೆಗಳು ಪಟ್ಟಣದ ತಹಶೀಲ್ದಾರ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದವು.

ಪಟ್ಟಣದಲ್ಲಿ ನೂರಾರು ಶಾಲಾ-ಕಾಲೇಜು ವಿದ್ಯಾರ್ಥಿಗಳೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ಪ್ರತಿಭಟನೆ ನೇತೃತ್ವ ವಹಿಸಿದ್ದ ಎಐಡಿಎಸ್‌ಒ ಜಿಲ್ಲಾ ಸಮಿತಿ ಸದಸ್ಯ ಶಿವಕುಮಾರ ಅಂದೋಲಾ ಮಾತನಾಡಿ, ಈ ಸಲದ ಬಜೆಟ್‌ನಲ್ಲಿ ಎಲ್ಲ ವಿದ್ಯಾಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡುವ ಯೋಜನೆ ಜಾರಿಯಾಗುತ್ತದೆ ಎಂದು ನಿರೀಕ್ಷೆಯಲ್ಲಿದ್ದ ಲಕ್ಷಾಂತರ ವಿದ್ಯಾರ್ಥಿಗಳಿಗೆ ನಿರಾಸೆಯಾಗಿದೆ. 20 ದಿನಗಳ ಹಿಂದೆ ಉಪಮುಖ್ಯಮಂತ್ರಿಗಳು ಉಚಿತ ಬಸ್‌ ಪಾಸ್‌ ಯೋಜನೆ ಜಾರಿಗೊಳಿಸಲಾಗುವುದು ಎಂದು ಸಮನ್ವಯ ಸಮಿತಿ ಸಭೆ ನಂತರ ಘೋಷಿಸಿದ್ದರು. ಆದರೆ ರಾಜ್ಯ ಸರ್ಕಾರ ತನ್ನ ಮಾತು ಉಳಿಸಿಕೊಳ್ಳದೆ ವಿದ್ಯಾರ್ಥಿಗಳಿಗೆ ವಿಶ್ವಾಸ ದ್ರೋಹ ಎಸಗಿದೆ ಎಂದು ಆರೋಪಿಸಿದರು.

ಎಐಡಿವೈಒ ಜಿಲ್ಲಾ ಉಪಾಧ್ಯಕ್ಷ ಜಗನ್ನಾಥ ಎಸ್‌.ಎಚ್‌. ಮಾತನಾಡಿ, ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಕೂಡಲೇ ಉಚಿತ ಬಸ್‌ ಪಾಸ್‌ ನೀಡಬೇಕು ಎಂದು ಆಗ್ರಹಿಸಿದರು. ಜಿಲ್ಲಾ ಸಮಿತಿ ಸದಸ್ಯರಾದ ತುಳಜಾರಾಮ. ಎನ್‌.ಕೆ., ಶಕೀಲ್‌ ಪಟೇಲ್‌, ಸಂಘಟನಾ ಸದಸ್ಯರಾದ ರಾಯಪ್ಪ ಅವರಾದ, ಸಂತೋಷ ಅವರಾದ. ರಾಜು ಅವರಾದ. ಮಹೇಶ ಜೋತಿನ್‌ ಹಾಗೂ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಜಾತಿ ಲೆಕ್ಕಿಸದೇ ಬಸ್‌ ಪಾಸ್‌ ಕೊಡಿ: ಎಐಡಿಎಸ್‌ಒ 
ವಾಡಿ:
ಸರಕಾರ ಜಾತಿ ಹುಡುಕದೆ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್‌ ಪಾಸ್‌ ವಿತರಿಸಬೇಕು ಎಂದು ಆಗ್ರಹಿಸಿ ಆಲ್‌ ಇಂಡಿಯಾ ಡೆಮಾಕ್ರೇಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಶನ್‌
(ಎಐಡಿಎಸ್‌ಒ) ಹಾಗೂ ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಯೂತ್‌ ಆರ್ಗನೈಸೇಶನ್‌ (ಎಐಡಿಎವೈಒ) ಪಟ್ಟಣದಲ್ಲಿ ನೂರಾರು ವಿದ್ಯಾರ್ಥಿಗಳನ್ನು ಸಂಘಟಿಸಿ ಹೋರಾಟ ನಡೆಸಿದವು. 

ಪಟ್ಟಣದ ಮೌಲಾನಾ ಅಬ್ದುಲ್‌ ಕಲಾಂ ಆಜಾದ್‌ ವೃತ್ತದಿಂದ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದ ವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ನಗರದ ವಿವಿಧ ಶಾಲೆಗಳ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡು ಸರಕಾರದ ವಿರುದ್ಧ ಘೋಷಣೆ ಮೊಳಗಿಸಿ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಸಮೀಪದ ಪಟ್ಟಣ, ಹೋಬಳಿ ಅಥವ ನಗರ ಪ್ರದೇಶಗಳಿಗೆ ಬರುವುದು ಸಾಮಾನ್ಯ. ಅಲ್ಲದೆ ನಗರಗಳಲ್ಲಿ ದೂರದ ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳು ಬಸ್‌ ಪ್ರಯಾಣಕ್ಕೆ ಸಾಕಷ್ಟು ಹಣ ಖರ್ಚು ಮಾಡಬೇಕಾದ ಸ್ಥಿತಿಯಿದೆ. ಇಂಥಹ ಸಂದರ್ಭದಲ್ಲಿ ಸರಕಾರ ಜಾತಿ ಲೆಕ್ಕಾಚಾರದಡಿ ಉಚಿತ ಬಸ್‌ ಪಾಸ್‌ ಕೊಡುವುದು ಸರಿಯಲ್ಲ. ಎಲ್ಲ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಒದಗಿಸಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕಾಗಮಿಸಿದ ನಾಲವಾರ ನಾಡಕಚೇರಿ ಉಪ ತಹಶೀಲ್ದಾರ ಮಲ್ಲಿಕಾರ್ಜುನ ಮನವಿ ಸ್ವೀಕರಿಸಿದರು. ಎಐಡಿಎಸ್‌ಒ ವಾಡಿ ನಗರ ಸಮಿತಿ ಅಧ್ಯಕ್ಷ ಶರಣು ಹೇರೂರ, ಎಐಡಿಎಸ್‌ಒ ಕಾರ್ಯದರ್ಶಿ ಮಲ್ಲಿನಾಥ ಹುಂಡೇಕಲ್‌, ಎಐಡಿವೈಒ ಅಧ್ಯಕ್ಷ ರಾಘವೇಂದ್ರ ಅಲ್ಲಿಪುರ, ಕಾರ್ಯದರ್ಶಿ ಶರಣು ವಿ.ಕೆ., ಉಪಾಧ್ಯಕ್ಷ ರಾಜು ಒಡೆಯರಾಜ, ಶ್ರೀಶರಣ ಹೊಸಮನಿ, ಗೌತಮ ಪರತೂರಕರ, ವೆಂಕಟೇಶ ಆರ್‌.ಜಿ., ಅರುಣಕುಮಾರ ಹಿರೆಬನಾರ, ಬಸವರಾಜ ನಾಟೇಕರ, ಗೋವಿಂದ ಹೆಳವರ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.