ಉತ್ತಮ ಪತ್ರಕರ್ತ ಪತ್ರಿಕೆ ಜೀವಾಳ: ಕಾಂತಾ

Team Udayavani, Jul 16, 2018, 9:26 AM IST

gul-3.gif

ಕಲಬುರಗಿ: ಉತ್ತಮ ಪತ್ರಕರ್ತ ಪತ್ರಿಕೆಯ ಜೀವಾಳ. ಹೀಗಾಗಿಯೇ ರಾಮ ಮನೋಹರ ಲೋಹಿಯಾ ಅವರು ಚೌಕಮ್ಮಾ ಪತ್ರಿಕೆ ಸ್ಥಾಪಿಸಿ ದೇಶದ ಸಮಸ್ಯೆಗಳನ್ನು ಎತ್ತಿ ತೋರಿಸಲಾರಂಭಿಸಿದ್ದರು. ಆ ಗಡಸುತನ ಇಂದಿನ ಪತ್ರಕರ್ತರಲ್ಲಿ ಬರಬೇಕು. ಜನಸಾಮಾನ್ಯರು ಪೊಲೀಸ್‌ರೆಂದರೆ ಭಯ ಹುಟ್ಟಿಸುವರೆಂದು ಅರ್ಥೈಸಿಕೊಳ್ಳುವುದು ಸರಿಯಲ್ಲ ಎಂದು ಮಾಜಿ ಕಾರ್ಮಿಕ ಸಚಿವ ಎಸ್‌.ಕೆ. ಕಾಂತಾ ಹೇಳಿದರು.

ನಗರದ ಹೊರವಲಯದ ತಾಜ ಸುಲ್ತಾನಪುರದ ಕೆಎಸ್‌ಆರ್‌ಪಿ ಕ್ಯಾಂಪ್‌ನಲ್ಲಿ ವಿಶ್ವಜ್ಯೋತಿ ಪ್ರತಿಷ್ಠಾನ ಪತ್ರಿಕಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ “ಸಮಾಜ ರಕ್ಷಣೆಯಲ್ಲಿ ಪೆನ್‌ ಮತ್ತು ಗನ್‌’ ಎನ್ನುವ ವಿಚಾರ ಗೋಷ್ಠಿಗೆ ಚಾಲನೆ ನೀಡಿ ಅವರು ಮಾತನಾಡಿದರು.
 
ಡಾ| ಅಂಬೇಡ್ಕರ್‌ ಹೇಳಿದಂತೆ ಸಮಾಜದಲ್ಲಿ ಶೋಷಣೆ ಮಾಡುವವರು ನಮಗಿಂತ ಮೇಲಿದ್ದವರು. ಮೂಲ ಕೆಲಸಗಾರರಿಗೆ ನಿಜವಾದ ನ್ಯಾಯ ಸಿಗುತ್ತಿಲ್ಲ. ಕೆಳಗಿನವರು ಮಾಡಿರುವ ಕೆಲಸಕ್ಕೆ ಮೇಲಾಧಿಕಾರಿಗಳು ಅದರ ಗೌರವ ಪಡೆಯುತ್ತಾರೆ. ಇದು ನಿಜಕ್ಕೂ ವಿಪರ್ಯಾಸ. ಆದರೆ ಪತ್ರಕರ್ತರು ಹಾಗೂ ಪೊಲೀಸರು ಸಮಾಜದಲ್ಲಿ ತಮ್ಮ ವೈಯಕ್ತಿಕ ಹಾಗೂ ಸಾಮಾಜಿಕ ಬದುಕಿಗಾಗಿ ಬೇರೊಬ್ಬರ ಬಾಲ ಬಡಿಯುವುದನ್ನು ಬಿಟ್ಟು ತಮ್ಮ ಹಕ್ಕನ್ನು ಪಡೆಯುವರಾಗಿ ಬೆಳೆಯಬೇಕೆಂದರು.

ಅಧ್ಯಕ್ಷತೆ ವಹಿಸಿದ್ದ ಕೆಎಸ್‌ಆರ್‌ಪಿ ಕಮಾಂಡೆಂಟ್‌ ಬಸವರಾಜ ಜಿಳ್ಳೆ ಮಾತನಾಡಿ, ಕಾನೂನು ಹಾಗೂ ಸುವ್ಯವಸ್ಥೆ ಜೊತೆ ಸಾಮಾಜಿಕ ಕಾಳಜಿ ಎತ್ತಿ ಹಿಡಿದ ಗೌರವ ಪತ್ರಕರ್ತರದ್ದು. ಪೆನ್ನಿನ ಮೂಲಕ ಸಮಾಜ ತಿದ್ದುವಲ್ಲಿ ಪತ್ರಕರ್ತರ ಹಾಗೂ ಪೊಲೀಸರ ಸೇವೆ ಅನನ್ಯವಾಗಿದೆ. ಸಮಾಜದಲ್ಲಿ ಅಹಿತಕರ ಘಟನೆಗಳು ನಡೆದಾಗ ಅದನ್ನು ಆದಷ್ಟು ಮಾತಿನ ಮೂಲಕ ಬಗೆಹರಿಸುವಲ್ಲಿ ಇಲಾಖೆ ಪ್ರಯತ್ನಿಸುತ್ತಿದೆ. ಮಿತಿ ಮೀರಿದಾಗ ಮಾತ್ರ ಗನ್‌ನ್ನು ಬಳಸಬೇಕಾಗುತ್ತದೆ ಎಂದರು.

ಸಂಜಯ ಪಾಟೀಲ ಉಪನ್ಯಾಸ ನೀಡಿದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಭವಾನಿಸಿಂಗ್‌ ಠಾಕೂರ, ಪ್ರತಿಷ್ಠಾನದ ಸಂಸ್ಥಾಪಕ ವಿಜಯಕುಮಾರ ತೇಗಲತಿಪ್ಪಿ, ಅಧ್ಯಕ್ಷ ಶ್ರೀಕಾಂತ ಪಾಟೀಲ ತಿಳಗೂಳ, ನಿಸಾರ್‌ ಅಹ್ಮದ್‌, ಪರಮೇಶ್ವರ ಶಟಕಾರ, ಡಾ| ಬಾಬುರಾವ ಶೇರಿಕಾರ,
ಶಿವರಾಜ ಅಂಡಗಿ ಹಾಗೂ ಇತರರಿದ್ದರು. 

ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರಾದ ವಿಶ್ವನಾಥ ಸ್ವಾಮೀಜಿ, ವೀರಣ್ಣಗೌಡ ಪಾಟೀಲ ಯಡ್ಡಳ್ಳಿ, ಚನ್ನಬಸಯ್ಯ ಗಾರಂಪಳ್ಳಿ, ಅಮರೇಶ ಎತ್ತಿನ ಮಾಳಗಿ, ಮಮತಾ ಬಾಬುರಾವ ಯಡ್ರಾಮಿ, ಭೀಮಾಶಂಕರ ಫಿರೋಜಾಬಾದ, ಸಂತೋಷ ನಾಡಗಿರಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಪತ್ರಕರ್ತರು, ಪೊಲೀಸ್‌ ಅಧಿಕಾರಿಗಳು, ಸಾಹಿತ್ಯಾಸಕ್ತರು ಹಾಜರಿದ್ದರು.

ಟಾಪ್ ನ್ಯೂಸ್

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.