ಒಡೆದಾಳುವ ನೀತಿ ನಿಲ್ಲಿಸಿ: ಯಡಿಯೂರಪ್ಪ


Team Udayavani, Aug 6, 2018, 3:16 PM IST

31_12.jpg

ಮೈಸೂರು: ಇತ್ತೀಚಿಗೆ ಎಲ್ಲವನ್ನೂ ಜಾತಿ, ಧರ್ಮದ ದೃಷ್ಟಿಯಿಂದ ನೋಡಲಾಗುತ್ತಿದೆ. ಹೀಗಾಗಿ ಜಾತಿಯ ಆಧಾರದ ಮೇಲೆ ವೀರಶೈವ-ಲಿಂಗಾಯತ, ಉತ್ತರ ಕರ್ನಾಟಕ- ದಕ್ಷಿಣ ಕರ್ನಾಟಕ ಎಂದು ಒಡೆದು ಆಳುವವರ ವಿರುದ್ಧ ಎಚ್ಚರಿಕೆಯಿಂದ ಇರಬೇಕಿದೆ ಎಂದು ಪ್ರತಿಪಕ್ಷನಾಯಕ ಯಡಿಯೂರಪ್ಪ ಹೇಳಿದರು.

ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಅಖೀಲ ಭಾರತ ವೀರಶೈವ ಮಹಾಸಭಾ, ವೀರಶೈವ ಲಿಂಗಾಯತ ಸಂಘ ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟದಿಂದ ಭಾನುವಾರ ಬಸವ ಜಯಂತಿ
ಅಂಗವಾಗಿ ಆಯೋಜಿಸಿದ್ದ ವೀರಶೈವ, ಲಿಂಗಾಯತ ಶಾಸಕರು, ಸಂಸದರು ಮತ್ತು ಸಚಿವರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದು ಎಲ್ಲವನ್ನೂ ಜಾತಿ, ಧರ್ಮದ ದೃಷ್ಟಿಯಲ್ಲಿ ನೋಡಲಾಗುತ್ತಿದೆ.

ಇದರಿಂದ ನಾವು ಸದೃಢರಾಗಬೇಕಿದೆ. ಆ ಮೂಲಕ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕಡೆಗಣನೆ ಮಾಡುತ್ತಿರುವ ಮನಸ್ಸನ್ನು ಸರಿಪಡಿಸಿ, ನಾವೆಲ್ಲರೂ ಒಂದು ಎಂಬ ಭಾವನೆ ಮೂಡಿಸಿ, ಬದುಕುವುದನ್ನು ಕಲಿಯಬೇಕು. ಇದರೊಂದಿಗೆ
ರಾಜ್ಯವನ್ನು ಪ್ರತ್ಯೇಕಿಸುವ ಷಡ್ಯಂತ್ರ ತಡೆಯದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ. ಇದಕ್ಕಾಗಿ ನಾವೆಲ್ಲರೂ ಒಂದಾಗಿ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿಸೋಣ ಎಂದರು.

ಬಸವಣ್ಣನ ಕಾಲದಿಂದಲೂ ಜಾತಿ, ಧರ್ಮ ಸ್ಥಾಪನೆಯ ಹಿಂದೆ ಮಾನವ ಕುಲ ಉದ್ಧಾರವಾಗಬೇಕೆಂಬ ಉದ್ದೇಶವಿತ್ತು.
ಅಲ್ಲದೆ ಯಾರಧ್ದೋ ರಾಜಕೀಯ ಲಾಭಕ್ಕಾಗಿ ಲಿಂಗಾಯತ-ವೀರಶೈವರು ಬಲಿಯಾಗದೆ ಇರುವುದಕ್ಕೆ ಬಸವ ತತ್ವ ಗಟ್ಟಿಯಾಗಿರುವುದೇ ಕಾರಣ. ಆದ್ದರಿಂದ ಯಾರೂ ಕೂಡ ಧರ್ಮ ರಾಜಕೀಯದ ಕುತಂತ್ರಕ್ಕೆ ಬಲಿಯಾಗಬಾರದು.
 
ಇತ್ತೀಚೆಗೆ ಕೆಲವರು ಅಖಂಡ ಕರ್ನಾಟಕವನ್ನು ಒಡೆಯುವ ಕೆಲಸಕ್ಕೆ ಕೈ ಹಾಕಿದ್ದು, ಜತೆಗೆ ಧರ್ಮ ಮತ್ತು ದಾರ್ಶನಿಕರನ್ನು ಜಾತಿಮಟ್ಟಕ್ಕೆ ಇಳಿಸುತ್ತಿರುವುದು ದುರ್ದೈವದ ಸಂಗತಿ. ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಸೇರಿದಂತೆ ಹಲವು ಮಹನೀಯರು ಇಲ್ಲದಿದ್ದರೆ ಇಷ್ಟೊತ್ತಿಗೆ ವೀರಶೈವ ಲಿಂಗಾಯತರನ್ನು ಪ್ರತ್ಯೇಕಿಸಲಾಗುತ್ತಿತ್ತು. ಇದೇ ರೀತಿಯಲ್ಲಿ ಕರ್ನಾಟಕದ ಏಕೀಕರಣದಲ್ಲಿ ಸಾಕಷ್ಟು ಮಂದಿಯ ತ್ಯಾಗ, ಬಲಿದಾನವಿದೆ. ಆದರೂ ಉತ್ತರ ಕರ್ನಾಟಕ ಪ್ರತ್ಯೇಕಿಸುವ ಮಾತು ಕೇಳಿ ಬರುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಸಂಸದ ಪ್ರತಾಪ್‌ ಸಿಂಹ, ವಿಧಾನ ಪರಿಷತ್‌ ಸದಸ್ಯ ಮಹಾಂತೇಶ್‌ ಕವಟಗಿಮಠ, ಅಲ್ಲಂ ವೀರಭದ್ರಪ್ಪ, ಆಯನೂರು ಮಂಜುನಾಥ್‌, ರುದ್ರೇಗೌಡ, ಶಾಸಕರಾದ ಬಸವರಾಜ ಬೊಮ್ಮಾಯಿ, ವೀರಣ್ಣ ಚರಂತಿಮಠ, ನಂಬಣ್ಣ, ನಿರಂಜನಕುಮಾರ್‌, ಸುರೇಶ್‌, ಲಿಂಗೇಶ್‌, ವಿರೂಪಾಕ್ಷಪ್ಪ, ಶಶಿಕಲಾ ಜೊಲ್ಲೆ, ಬೆಳ್ಳಿ ಪ್ರಕಾಶ್‌, ಪರಣ್ಣ ಮುನವಳ್ಳಿ, ಪಾಟೀಲ್‌, ರೇಣುಕಾಚಾರ್ಯ, ಉದಾಸಿ, ನೈಸ್‌ ಸಂಸ್ಥೆ ಎಂಡಿ ಅಶೋಕ ಖೇಣಿ, ವೀರಶೈವ ಮಹಾಸಭಾ ಕಾರ್ಯಾಧ್ಯಕ್ಷ ತಿಪ್ಪಣ್ಣ ಮತ್ತಿತರರು ಹಾಜರಿದ್ದರು. 

ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸಬೇಕೆಂಬ ಆದೇಶ ಹೊರಡಿಸಿದಾಗ ಅವರನ್ನು ವೀರಶೈವ ಮಹಾಸಭಾ ಸನ್ಮಾನಿಸಿತ್ತು. ಆ ವೇಳೆ ವೀರಶೈವ-ಲಿಂಗಾಯತ ವಿಷಯ
ಪ್ರಸ್ತಾಪವಾಯಿತು. ಹೀಗಾಗಿ ರಾಜ್ಯದಲ್ಲಿ ವೀರಶೈವ ಮತ್ತು ಲಿಂಗಾಯಿತ ಎಂಬ ಕೂಗು ಆರಂಭವಾಗಲು ಒಂದು ರೀತಿಯಲ್ಲಿ ನಾವೇ ಮಾಡಿದ ತಪ್ಪು. 
 ಶಾಮನೂರು ಶಿವಶಂಕರಪ್ಪ, ಶಾಸಕ 

ನಾನು ಕಳೆದ ಬಾರಿ ಶಾಸಕನಾಗಿ ಮಾಡಿದಷ್ಟು ಕೆಲಸವನ್ನು ಯಾರೂ ಮಾಡಿರಲಿಲ್ಲ. ಆದರೂ 35 ಸಾವಿರ ಜನ
ಮಾತ್ರ ನನಗೆ ಮತ ನೀಡಿದರು. ಮಠಗಳು ಶಿಕ್ಷಣದಂತೆ ಜನರಲ್ಲಿ ಬದ್ಧತೆಯನ್ನು ಕಲಿಸಬೇಕು.
 ಅಶೋಕ್‌ ಖೇಣಿ, ನೈಸ್‌ಮುಖ್ಯಸ

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.