CONNECT WITH US  

ಪ್ರತಿಭೆಗಳಿಗೆ ಪ್ರೋತ್ಸಾಹ ಅಗತ್ಯ: ಶಾಸಕ ಪಾಟೀಲ

ಅಫಜಲಪುರ: ಗ್ರಾಮೀಣ ಭಾಗದ ಮಕ್ಕಳಲ್ಲಿ ಸಾಕಷ್ಟು ಪ್ರತಿಭೆ ಇದ್ದು, ಯಾವುದೇ ತರಬೇತಿ ಇಲ್ಲದಿದ್ದರೂ ಎಲ್ಲದರಲ್ಲೂ ಪರಿಣಿತಿ ಪಡೆದಿರುತ್ತಾರೆ. ಅವರಲ್ಲಿ ಪ್ರತಿಭೆ ಕೊರತೆ ಇಲ್ಲ, ಪ್ರೋತ್ಸಾಹದ ಕೊರತೆ ಇದೆ ಎಂದು ಶಾಸಕ ಎಂ.ವೈ. ಪಾಟೀಲ ಹೇಳಿದರು.

ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಉನ್ನತ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ, ಕಲಾ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
 
ಸರ್ಕಾರಿ ಶಾಲೆಗಳಲ್ಲಿನ ಮಕ್ಕಳಲ್ಲಿ ಬಹಳಷ್ಟು ಕ್ರಿಯಾಶೀಲತೆ, ಪ್ರತಿಭೆ ಇರುತ್ತದೆ. ಅವರಲ್ಲಿರುವ ಪ್ರತಿಭೆ ಗುರುತಿಸಿ
ಪ್ರೋತ್ಸಾಹಿಸಬೇಕು. ಪಾಲಕರು ಮತ್ತು ಶಿಕ್ಷಕರು ಮಕ್ಕಳಲ್ಲಿರುವ ಕ್ರಿಯಾತ್ಮಕತೆ ಗುರುತಿಸುವ ಕೆಲಸ ಮಾಡುವುದರ ಜೊತೆಗೆ ಮಕ್ಕಳು ಯಾವ ವಿಷಯದಲ್ಲಿ ಆಸಕ್ತಿ ಹೊಂದಿರುತ್ತಾರೋ ಅದರಲ್ಲಿ ಮುಂದುವರಿಯಲು ಸಹಕಾರ ನೀಡಿ ಎಂದು ಹೇಳಿದರು.

ಜಿ.ಪಂ ಉಪಾಧ್ಯಕ್ಷೆ ಶೋಭಾ ಸಿರಸಗಿ, ತಾ.ಪಂ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ, ಮಳೇಂದ್ರ ಮಠದ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು, ಬಿಇಒ ವಸಂತ ರಾಠೊಡ ಮಾತನಾಡಿದರು. ತಾ.ಪಂ ಅಧ್ಯಕ್ಷೆ ರುಕ್ಮಿಣಿ ಜಮಾದಾರ ಅಧ್ಯಕ್ಷತೆ ವಹಿಸಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷ ಶಿವಶರಣಪ್ಪ ಪಡಶೆಟ್ಟಿ, ಸಿದ್ದಾರ್ಥ ಬಸರಿಗಿಡ, ಶರಣು ಕುಂಬಾರ, ದೇವೇಂದ್ರ ಜಮಾದಾರ, ಸಿದ್ದರಾಮ ಗುಣಾರಿ ಹಾಗೂ ಇತರರು ಇದ್ದರು.


Trending videos

Back to Top