ಹಣ ತುಂಬದೆ ಮೋಸ: ಏಜೆನ್ಸಿ ಕಪ್ಪುಪಟ್ಟಿಗೆ ಸೇರಿಸಲು ಆಗ್ರಹ

Team Udayavani, Oct 23, 2018, 2:09 PM IST

gul-3.jpg

ಕಲಬುರಗಿ: ಜಿಲ್ಲೆಯ ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚನ್ನಮ್ಮ ವಸತಿ ನಿಲಯಗಳ ಹೊರಗುತ್ತಿಗೆ ನೌಕರರ ಇಪಿಎಫ್‌, ಇಎಸ್‌ಐ ಹಣ ತುಂಬದೆ ಮೋಸ ಮಾಡಿದ ಏಜೆನ್ಸಿಯನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಹಾಗೂ ನೇರ ನೇಮಕಾತಿಯಿಂದ ಕೆಲಸ ಕಳೆದುಕೊಂಡ ಕಾರ್ಮಿಕರನ್ನು ಪುನಃ ಸೇವೆಯಲ್ಲಿ ಮುಂದುವರಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊಗುತ್ತಿಗೆ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಸಮಾಜ ಕಲ್ಯಾಣ ಇಲಾಖೆ ಕಚೇರಿ ಎದುರು ಸೋಮವಾರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ, ನೌಕರರ ಇಪಿಎಫ್‌, ಇಎಸ್‌ಐ ಹಣ ತುಂಬುವುಕ್ಕೆ ಕೌಶಲ್ಯ ಮ್ಯಾನ್‌ ಪವರ್‌ ಏಜೆನ್ಸಿಗೆ ಟೆಂಡರ್‌ ನೀಡಲಾಗಿತ್ತು. ಆದರೆ, ಏಜೆನ್ಸಿಯವರು ಅಧಿಕಾರಿಗಳೊಂದಿಗೆ ಸೇರಿಕೊಂಡು ನೌಕರರ ಹಣ ಕಟ್ಟದೆ ವಂಚಿಸಿದ್ದಾರೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ನೇರ ನೇಮಕಾತಿಯಾಗಿ ವಸತಿ ಶಾಲೆಗಳ ನೌಕರರು ಮತ್ತು ಬಿಸಿಎಂ ಇಲಾಖೆ ನೌಕರರು ಕೆಲಸ ಕಳೆದುಕೊಂಡಿದ್ದು, ಮೂರು ತಿಂಗಳಿಂದ ಮತ್ತೆ ಸೇವೆಯಲ್ಲಿ ಮುಂದುವರಿಸುವಂತೆ ಮನವಿ ಮಾಡುತ್ತಿದ್ದಾರೆ. ನೌಕರರ ಬಗ್ಗೆ ಅಧಿಕಾರಿಗಳಳು ಕನಿಕರ ತೋರಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇದು
ಖಂಡನೀಯವಾಗಿದ್ದು, ಕೆಲಸ ಕಳೆದುಕೊಂಡ ನೌಕರರನ್ನು ಕೂಡಲೇ ಪುನಃ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಕೋಡ್ಲಿ ಕಿತ್ತೂರು ರಾಣಿ ಚನ್ನಮ್ಮ ವಸತಿ ನಿಲಯದಲ್ಲಿ ನಾಲ್ವರು ಮಹಿಳೆಯರ ಮೇಲೆ ಸುಳ್ಳು ಆರೋಪ ಹೊರಿಸಿ ಕೆಲಸದಿಂದ ತೆಗೆದು ಹಾಕಲಾಗಿದೆ. ಇದನ್ನು ಖಂಡಿಸಿ ಹೋರಾಟ ಮಾಡಿದಾಗ ಜಂಟಿ ನಿರ್ದೇಶಕರು, ತಾಲೂಕು ಅಧಿಕಾರಿಗಳು ಒಂದು ವಾರದಲ್ಲಿ ಅವರನ್ನು ಸೇವೆಯಲ್ಲಿ ಮುಂದುವರಿಸುವುದಾಗಿ ಭರವಸೆ ನೀಡಿದ್ದರು. ಆದರೂ, ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಎನ್‌ಜಿಒ ಕಾಲೋನಿ ಅಲ್ಪಸಂಖ್ಯಾತರ ಬಾಲಕಿಯರ ವಸತಿ ನಿಲಯದ ವಾರ್ಡನ್‌ ಹಣ ದುರುಪಯೋಗ ಪಡಿಸಿಕೊಂಡಿದ್ದು, ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಸಂಘದ ಜಿಲ್ಲಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಮೇಘರಾಜ ಕಠಾರೆ, ಸುಭಾಷ ಬೆಡಸೂರ, ಸುರೇಶ ದೊಡ್ಡಮನಿ, ಪರಶುರಾಮ ಜೇವರ್ಗಿ, ರೇಣುಕಾ ಸಂಗೊಳಗಿ, ಫಾತಿಮಾ ಬೇಗಂ, ನಾಗರಾಜ ಕಾಳಗಿ, ಪರಮೇಶ್ವರ ಹೈಬತ್ತಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.