ಜಿಕೆ ರಸ್ತೆ ಎಂಬ ನರಕದ ಹೆಬ್ಟಾಗಿಲು!

Team Udayavani, Nov 15, 2018, 4:38 PM IST

gul-2.jpg

ಸೇಡಂ: ವಾಹನ ದಟ್ಟಣೆಯಿಂದ ಗುಲಬರ್ಗಾ-ಕೊಡಂಗಲ್‌ ರಸ್ತೆ ಇಂದು ನರಕದ ಹೆಬ್ಟಾಗಿಲಾಗಿ ಮಾರ್ಪಟ್ಟಿದೆ. ಜಿ.ಕೆ.ರಸ್ತೆಗೆ ಅಂಟಿಕೊಂಡಿರುವ ಹಿಂದೂಸ್ತಾನ್‌ ಪೆಟ್ರೋಲಿಯಂ ಬಂಕ್‌ಗೆ ಪ್ರತಿನಿತ್ಯ ಹತ್ತಾರು ಲಾರಿಗಳು ಡೀಸೆಲ್‌ ತುಂಬಿಸಿಕೊಳ್ಳಲು ಬರುತ್ತಿವೆ. ಬಂಕ್‌ನಲ್ಲಿ ಸರಿಯಾದ ಸ್ಥಳಾವಕಾಶ ಇಲ್ಲದ ಕಾರಣ ರಾಜ್ಯ ಹೆದ್ದಾರಿ (ವಾಗರಿ ರಿಬ್ಬನಪಲ್ಲಿ) ಜಿಕೆ ರಸ್ತೆಯಲ್ಲೇ ನಿಲ್ಲುವ ಪರಿಸ್ಥಿತಿ ಇದೆ. ಇದರಿಂದ ದ್ವಿಚಕ್ರ ಮತ್ತು ಕಾರು ಚಾಲಕರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಹೈದ್ರಾಬಾದ್‌ನಿಂದ ಕಲಬುರಗಿ, ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಇದಾಗಿದ್ದು, ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ನಿತ್ಯ ನಿಲ್ಲುವ ಲಾರಿಗಳಿಂದ ಟ್ರಾಫಿಕ್‌ ಕಿರಿಕಿರಿ ಒಂದೆಡೆಯಾದರೆ, ಮತ್ತೂಂದೆಡೆ ಸಾವು-ನೋವುಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಇದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ಎಚ್‌ಪಿ ಪೆಟ್ರೋಲ್‌ ಬಂಕ್‌ ಪಕ್ಕದಲ್ಲೇ ಊಡಗಿ ರಸ್ತೆ, ಎದುರಿಗೆ ರಿಂಗ್‌ ರಸ್ತೆ, ಎಡಕ್ಕೆ ಕಲಬುರಗಿ ರಸ್ತೆ ಮತ್ತು ಬಲಕ್ಕೆ ಹೈದ್ರಾಬಾದ್‌ಗೆ ಹೋಗುವ ರಸ್ತೆ ಇದೆ. ರಸ್ತೆಯಲ್ಲೇ ಲಾರಿಗಳು ನಿಲ್ಲುವುದರಿಂದ ಎದುರು-ಬದುರಾಗುವ ವಾಹನ ಸವಾರರಿಗೆ ಕಣ್ಣು ಕಟ್ಟಿದಂತಹ ವಾತಾವರಣ ನಿರ್ಮಾಣವಾಗುತ್ತಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ ಎನ್ನುವುದು ಸ್ಥಳೀಯರ ಆರೋಪ. ಪಟ್ಟಣದ ಪ್ರದೇಶವಾದ್ದರಿಂದ ರಾಜ್ಯ ಹೆದ್ದಾರಿಗೆ ಹೊಂದಿಕೊಂಡು ಬೈಕ್‌ ಸವಾರರು ಮತ್ತು ಪಾದಚಾರಿಗಳು ಸಂಚರಿಸಲೆಂದೇ ಸೇವಾ ರಸ್ತೆ (ಸರ್ವಿಸ್‌ ರೋಡ್‌) ನಿರ್ಮಿಸಲಾಗಿದೆ. ಆದರೆ ಟ್ಯಾಕ್ಸಿ ಜೀಪ್‌, ಟಂಟಂ, ಕಾರು, ಲಾರಿ ಮತ್ತು ಜೆಸಿಬಿಗಳು ಅತಿಕ್ರಮಿಸಿದ್ದು, ಜನರ ಸಮಸ್ಯೆಗೆ ಕ್ಯಾರೆ ಎನ್ನುತ್ತಿಲ್ಲ.

ಪೊಲೀಸರ ಮೌನ: ಟ್ರಾಫಿಕ್‌ ಸಮಸ್ಯೆಯಿಂದ ಪ್ರಯಾಣಿಕರು ಮತ್ತು ವಾಹನ ಚಾಲಕರು ಪ್ರತಿನಿತ್ಯ ತೀವ್ರ ಸಂಕಷ್ಟ ಎದುರಿಸುತ್ತಿದ್ದರೂ ಪೊಲೀಸ್‌ ಇಲಾಖೆ ಮೌನ ವಹಿಸಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.  ಸರ್ವಿಸ್‌ ರಸ್ತೆಗಳಲ್ಲಿ ಲಾರಿ ಮತ್ತು ಜೆಸಿಬಿ ಚಾಲಕರು ಗೂಂಡಾ ವರ್ತನೆ ತೋರುತ್ತಿದ್ದಾರೆ. ರಸ್ತೆಗಳನ್ನು ಅತಿಕ್ರಮಿಸಿಕೊಂಡು ಜನರಿಗೆ ತೊಂದರೆ ನೀಡುತ್ತಿದ್ದಾರೆ. ಈ ಕುರಿತು ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಪ್ರತಿಭಟಿಸಬೇಕಾಗುತ್ತದೆ.
 ಶರಣು ಬೋಳದ್‌, ನಿವಾಸಿ, ಸೇಡಂ 

ಈ ರಸ್ತೆಯಲ್ಲಿ ಬೈಕ್‌ ಸವಾರರು, ಪಾದಚಾರಿಗಳು ಜೀವ ಕೈಯಲ್ಲಿಟ್ಟುಕೊಂಡು ರಸ್ತೆಯಲ್ಲಿ ಸಂಚರಿಸುವಂತಹ ಭಯದ ವಾತಾವರಣ ನಿರ್ಮಾಣವಾಗಿದೆ. ದೊಡ್ಡ ದೊಡ್ಡ ಲಾರಿಗಳಿಂದ ಅನಾಹುತಗಳು ಕಟ್ಟಿಟ್ಟ ಬುತ್ತಿ. ಶೀಘ್ರವೇ ಕ್ರಮ ಕೈಗೊಂಡರೆ ಮುಂದಾಗುವ ಅನಾಹುತ ತಪ್ಪಿಸಬಹುದಾಗಿದೆ.
 ಜಗದೀಶ ಕೋಡ್ಲಾ, ನಿವಾಸಿ, ಸೇಡಂ

ಟ್ರಾಫಿಕ್‌ ಸಮಸ್ಯೆ ಕುರಿತು ಮಾಹಿತಿ ಪಡೆಯುತ್ತೇನೆ. ಎಲ್ಲೆಂದರಲ್ಲಿ ನಿಲ್ಲುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಸಾರ್ವಜನಿಕರ ತೊಂದರೆ ಪರಿಹರಿಸುವ ನಿಟ್ಟಿನಲ್ಲಿ ಸೂಚಿಸುತ್ತೇನೆ.
 ಶಂಕರಗೌಡ ಪಾಟೀಲ, ಸಿಪಿಐ ಸೇಡಂ 

„ಶಿವಕುಮಾರ ನಿಡಗುಂದಾ

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.