ಗೋಗಿಯಲ್ಲಿ ನವಜಾತ ಶಿಶು ಪತ್ತೆ
Team Udayavani, Nov 19, 2018, 10:11 AM IST
ಶಹಾಪುರ: ಆಗತಾನೇ ಜನಿಸಿದ ಶಿಶುವೊಂದು ಗ್ರಾಮದ ಹೊರವಲಯದ ಬಯಲು ಶೌಚಕ್ಕೆ ಹೋಗುವ ಪ್ರದೇಶದಲ್ಲಿ ಪತ್ತೆಯಾದ ಘಟನೆ ತಾಲೂಕಿನ ಗೋಗಿ ಪೇಠ ಗ್ರಾಮದಲ್ಲಿ ರವಿವಾರ ಬೆಳಗಿನ ಜಾವ ನಡೆದಿದೆ. ಬೆಳಗ್ಗೆ ಬಹಿರ್ದೆಸೆಗೆ ಹೋದ ಮಹಿಳೆಯರು ಮಗುವಿನ ಅಳುವ ಧ್ವನಿ ಕೇಳಿದ್ದಾರೆ. ಸಮೀಪ ಹೋಗಿ ನೋಡಿದಾಗ ಮಗು ಪತ್ತೆಯಾಗಿದೆ.
ಈ ಕುರಿತು ತಕ್ಷಣ ಪೊಲೀಸ್ ಠಾಣೆಗೆ ಸಾರ್ವಜನಿಕರು ತಿಳಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವನ್ನು ಪಡೆದುಕೊಮಡು ಶಹಾಪುರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ತಪಾಸಣೆ ನಡೆಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರ್ಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಘಟನೆ ಕುರಿತು ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಕಳೆದು ಎರಡು ಮೂರು ತಿಂಗಳಲ್ಲಿ ಇದು ಮೂರನೇ ಪ್ರಕರಣ ಎನ್ನಲಾಗಿದ್ದು, ಇದಕ್ಕೆಲ್ಲ ಕಡಿವಾಣ ಹಾಕಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು